Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮೆನಹೇಮನು ಅಶ್ಶೂರದ ಅರಸನಿಗೆ ಆ ಹಣವನ್ನು ಕೊಡುವುದಕ್ಕಾಗಿ ಇಸ್ರಾಯೇಲರ ಪ್ರತಿಯೊಬ್ಬ ಐಶ್ವರ್ಯವಂತನಿಂದ ಐವತ್ತು ರೂಪಾಯಿಗಳನ್ನು ವಸೂಲಿಮಾಡಿಕೊಂಡನು. ಆ ಹಣವು ಸಿಕ್ಕಿದ ನಂತರ ಅಶ್ಶೂರದ ಅರಸನು ಅಲ್ಲಿ ನಿಲ್ಲದೆ ಹಿಂತಿರುಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅಸ್ಸೀರಿಯದ ಅರಸನಿಗೆ ಆ ಹಣವನ್ನು ಕೊಡುವುದಕ್ಕಾಗಿ ಇಸ್ರಯೇಲರ ಪ್ರತಿಯೊಬ್ಬ ಐಶ್ವರ್ಯವಂತನಿಂದ ಐವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡನು. ಆ ಹಣ ಸಿಕ್ಕಿದ ನಂತರ ಅಸ್ಸೀರಿಯದ ಅರಸನು ಅಲ್ಲಿ ನಿಲ್ಲದೆ ಹಿಂದಿರುಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅಶ್ಶೂರದ ಅರಸನಿಗೆ ಆ ಹಣವನ್ನು ಕೊಡುವದಕ್ಕಾಗಿ ಇಸ್ರಾಯೇಲ್ಯರ ಪ್ರತಿಯೊಬ್ಬ ಐಶ್ವರ್ಯವಂತನಿಂದ ಐವತ್ತು ರೂಪಾಯಿಗಳನ್ನು ತೆಗೆದುಕೊಂಡನು. ಆ ಹಣವು ಸಿಕ್ಕಿದನಂತರ ಅಶ್ಶೂರದ ಅರಸನು ಅಲ್ಲಿ ನಿಲ್ಲದೆ ಹಿಂದಿರುಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಶ್ರೀಮಂತರು ಮತ್ತು ಅಧಿಕಾರವುಳ್ಳ ಜನರು ತೆರಿಗೆಯನ್ನು ನೀಡುವಂತೆ ಮಾಡಿ, ಮೆನಹೇಮನು ಈ ಹಣವನ್ನು ಸಂಗ್ರಹಿಸಿದನು. ಮೆನಹೇಮನು ಪ್ರತಿಯೊಬ್ಬ ಮನುಷ್ಯನಿಗೂ ಆರುನೂರು ಗ್ರಾಂ ಬೆಳ್ಳಿಯ ತೆರಿಗೆಯನ್ನು ವಿಧಿಸಿದನು. ನಂತರ ಮೆನಹೇಮನು ಅಶ್ಶೂರದ ರಾಜನಿಗೆ ಹಣವನ್ನು ಕೊಟ್ಟನು. ಆದ್ದರಿಂದ ಅಶ್ಶೂರದ ರಾಜನು ಬಿಟ್ಟುಹೋದನು; ಅವನು ಇಸ್ರೇಲಿನಲ್ಲೇ ನೆಲೆಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಮೆನಹೇಮನು ಈ ಹಣವನ್ನು ಇಸ್ರಾಯೇಲಿನಿಂದ ವಸೂಲಿ ಮಾಡಿದನು. ಪ್ರತಿಯೊಬ್ಬ ಶ್ರೀಮಂತನು ಅಸ್ಸೀರಿಯದ ಅರಸನಿಗೆ ಕೊಡಬೇಕಾದ ಅರ್ಧ ಕಿಲೋಗ್ರಾಂ ಬೆಳ್ಳಿಯನ್ನು ನೀಡಬೇಕಾಗಿತ್ತು. ಆದ್ದರಿಂದ ಅಸ್ಸೀರಿಯದ ಅರಸನು ದೇಶದಲ್ಲಿ ನಿಲ್ಲದೆ ತನ್ನ ಸೈನ್ಯದೊಂದಿಗೆ ಹಿಂದಿರುಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:20
9 ತಿಳಿವುಗಳ ಹೋಲಿಕೆ  

ಅವನಿಗೆ ಏಳು ಸಾವಿರ ಕುರಿಗಳೂ, ಮೂರು ಸಾವಿರ ಒಂಟೆಗಳೂ, ಐನೂರು ಜೋಡಿ ಎತ್ತುಗಳೂ, ಐನೂರು ಹೆಣ್ಣು ಕತ್ತೆಗಳೂ, ಬಹುಮಂದಿ ಸೇವಕರೂ ಇದ್ದುದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವತ್ತುಳ್ಳವನಾಗಿದ್ದನು.


ಫರೋಹನು ಗೊತ್ತುಮಾಡಿದಷ್ಟು ಬೆಳ್ಳಿ ಬಂಗಾರವನ್ನು ಕೊಡುವುದಕ್ಕಾಗಿ ಯೆಹೋಯಾಕೀಮನು ತನ್ನ ದೇಶದಲ್ಲಿ ತೆರಿಗೆಯನ್ನು ವಿಧಿಸಿದನು. ತೆರಿಗೆಕೊಡಬೇಕಾದ ಪ್ರತಿಯೊಬ್ಬನು ತನಗೆ ನೇಮಕವಾದಷ್ಟು ಬೆಳ್ಳಿ ಬಂಗಾರವನ್ನು ದೇಶದ ಜನರಿಂದ ವಸೂಲಿಮಾಡಿಕೊಂಡು ಫರೋಹ ನೆಕೋವನಿಗೆ ತಂದೊಪ್ಪಿಸಿದನು.


ಇಸ್ರಾಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬುವವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನು ಗಿಲ್ಯಾದ್ ಮತ್ತು ಗಲಿಲಾಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.


ಇವನು ಎಂಬತ್ತು ವರ್ಷದ ಮುದುಕನು. ಇವನು ಬಹು ಶ್ರೀಮಂತನಾಗಿದ್ದುದರಿಂದ ದಾವೀದನು ಮಹನಯಿಮಿನಲ್ಲಿದ್ದ ಕಾಲದಲ್ಲೆಲ್ಲಾ ಅವನ ಜೀವನಕ್ಕೆ ಬೇಕಾದದ್ದನ್ನು ಇವನೇ ಒದಗಿಸಿಕೊಡುತ್ತಿದ್ದನು.


ನವೊಮಿಯ ಗಂಡನಾದ ಎಲೀಮೆಲೆಕನ ಗೋತ್ರದಲ್ಲಿ ಬೋವಜನೆಂಬ ಬಹು ಧನವಂತನಾದ ಒಬ್ಬ ಸಂಬಂಧಿಕನಿದ್ದನು.


ಅಶ್ಶೂರ ದೇಶದ ಅರಸನಾದ ಪೂಲನೆಂಬವನು ಇಸ್ರಾಯೇಲ್ ದೇಶಕ್ಕೆ ವಿರುದ್ಧವಾಗಿ ಬಂದಾಗ ಮೆನಹೇಮನು ಅವನ ಮುಖಾಂತರವಾಗಿ ತನ್ನ ಅರಸುತನವನ್ನು ಜನರು ದೃಢಪಡಿಸಿಕೊಳ್ಳುವುದಕ್ಕೋಸ್ಕರ ಅವನಿಗೆ ಸಾವಿರ ತಲಾಂತು ಬೆಳ್ಳಿಯನ್ನು ಕೊಟ್ಟನು.


ಮೆನಹೇಮನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು