2 ಅರಸುಗಳು 15:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಇಸ್ರಾಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬುವವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನು ಗಿಲ್ಯಾದ್ ಮತ್ತು ಗಲಿಲಾಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಇಸ್ರಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯಾ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಮತ್ತು ಗಿಲ್ಯಾದ್ ಹಾಗು ಗಲಿಲೇಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು, ಅವುಗಳ ನಿವಾಸಿಗಳನ್ನು ಅಸ್ಸೀರಿಯಾ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಇಸ್ರಾಯೇಲ್ಯರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಗಿಲ್ಯಾದ್, ಗಲಿಲಾಯ ಪ್ರಾಂತಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡುಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಇಸ್ರಾಯೇಲಿನ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನು ಬಂದು, ಇಯ್ಯೋನ್, ಆಬೇಲ್ ಬೇತ್ ಮಾಕಾ, ಯಾನೋಹ, ಕೆದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಎಲ್ಲಾ ಭೂಮಿಯನ್ನು ವಶಮಾಡಿಕೊಂಡು, ಜನರನ್ನು ಸೆರೆಯಾಗಿ ಅಸ್ಸೀರಿಯಾ ದೇಶಕ್ಕೆ ಒಯ್ದನು. ಅಧ್ಯಾಯವನ್ನು ನೋಡಿ |