Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಇಸ್ರಾಯೇಲರ ಅರಸನೂ, ರೆಮಲ್ಯನ ಮಗನೂ ಆದ ಪೆಕಹನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯೆಹೂದ್ಯರ ಅರಸನಾದ ಉಜ್ಜೀಯನ ಮಗನಾದ ಯೋತಾಮನು ಆಳತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಇಸ್ರಯೇಲರ ಅರಸನೂ ರೆಮಲ್ಯನ ಮಗನೂ ಆದ ಪೆಕಹನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಜುದೇಯದ ರಾಜನಾದ ಉಜ್ಜೀಯನ ಮಗ ಯೋತಾಮನು ಆಳತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಇಸ್ರಾಯೇಲ್ಯರ ಅರಸನೂ ರೆಮಲ್ಯನ ಮಗನೂ ಆದ ಪೆಕಹನ ಆಳಿಕೆಯ ಎರಡನೆಯ ವರುಷದಲ್ಲಿ ಯೆಹೂದ ರಾಜನಾದ ಉಜ್ಜೀಯನ ಮಗ ಯೋತಾಮನು ಆಳತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಉಜ್ಜೀಯನ ಮಗನಾದ ಯೋತಾಮನು ಯೆಹೂದದ ರಾಜನಾದನು. ರೆಮಲ್ಯನ ಮಗನಾದ ಪೆಕಹನು ಇಸ್ರೇಲಿನ ರಾಜನಾದ ಎರಡನೆಯ ವರ್ಷದಲ್ಲಿ ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಇಸ್ರಾಯೇಲಿನ ಅರಸನೂ, ರೆಮಲ್ಯನ ಮಗನೂ ಆದ ಪೆಕಹನ ಆಳಿಕೆಯ ಎರಡನೆಯ ವರ್ಷದಲ್ಲಿ ಯೆಹೂದದ ಅರಸನಾದ ಉಜ್ಜೀಯನ ಮಗ ಯೋತಾಮನು ಆಳಲು ಆರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:32
17 ತಿಳಿವುಗಳ ಹೋಲಿಕೆ  

ಯೋವಾಷನ ಮಗ ಅಮಚ್ಯ. ಅಮಚ್ಯ ಮಗ ಅಜರ್ಯ; ಅಜರ್ಯನ ಮಗ ಯೋತಾಮ್.


ಅಜರ್ಯನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದ ನಗರದೊಳಗೆ ರಾಜಕುಟುಂಬದ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೋತಾಮನು ಅರಸನಾದನು.


ಉಜ್ಜೀಯನ ಮಗನು ಯೋತಾಮನು. ಯೋತಾಮನ ಮಗನು ಆಹಾಜನನು. ಆಹಾಜನ ಮಗನು ಹಿಜ್ಕೀಯನು.


ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತೆರಡನೆಯ ವರ್ಷದಲ್ಲಿ ರೆಮಲ್ಯನ ಮಗನಾದ ಪೆಕಹನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಇಪ್ಪತ್ತು ವರ್ಷ ಆಳಿದನು.


ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತನೆಯ ವರ್ಷದಲ್ಲಿ ಮೆನಹೇಮನ ಮಗನಾದ ಪೆಕಹ್ಯ ಎಂಬುವವನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಎರಡು ವರ್ಷ ಆಳಿದನು.


ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಗಾದಿಯ ಮಗನಾದ ಮೆನಹೇಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹತ್ತು ವರ್ಷ ಆಳಿದನು.


ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಯಾಬೇಷನ ಮಗನಾದ ಶಲ್ಲೂಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಒಂದು ತಿಂಗಳು ಆಳಿದನು.


ಇಸ್ರಾಯೇಲರ ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಅಮಚ್ಯನ ಮಗನಾದ ಅಜರ್ಯನು ಯೆಹೂದದ ಅರಸನಾದನು.


ಅಮಚ್ಯನ ಮರಣದ ನಂತರ ಎಲ್ಲಾ ಯೆಹೂದ್ಯರು ಸೇರಿ ಹದಿನಾರು ವರ್ಷದವನಾದ ಅಜರ್ಯನನ್ನು ಅರಸನನ್ನಾಗಿ ಮಾಡಿದರು.


ಪೆಕಹನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.


ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದನು. ಇವನು ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಚಾದೋಕನ ಮಗಳಾದ ಯೆರೂಷಾ ಇವನ ತಾಯಿ.


ಅವರೆಲ್ಲರೂ ಯೆಹೂದ್ಯರ ಅರಸನಾದ ಯೋತಾಮನ ಕಾಲದಲ್ಲಿಯೂ, ಇಸ್ರಾಯೇಲರ ಅರಸನಾದ ಯಾರೊಬ್ಬಾಮನ ಕಾಲದಲ್ಲಿಯೂ ವಂಶಾವಳಿಯ ಪಟ್ಟಿಯಲ್ಲಿ ದಾಖಲಿಸಲ್ಪಟ್ಟರು.


ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.


ಯೆಹೂದದ ಅರಸನಾದ ಯೋಥಾಮ, ಆಹಾಜ ಮತ್ತು ಹಿಜ್ಕೀಯ ಇವರ ಕಾಲದಲ್ಲಿ ಸಮಾರ್ಯದ ಮತ್ತು ಯೆರೂಸಲೇಮಿನ ವಿಷಯವಾಗಿ ಮೋರೆಷೆತ್ ಊರಿನವನಾದ ಮೀಕನಿಗೆ ಕೇಳಿ ಬಂದ ಯೆಹೋವನ ವಾಕ್ಯ.


ಯೆಹೋವನು ಅವನನ್ನು ಕುಷ್ಠರೋಗದಿಂದ ಶಿಕ್ಷಿಸಿದನು. ಆದುದರಿಂದ ಇವನು ಜೀವದಿಂದಿರುವವರೆಗೂ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾಧಿಪತ್ಯವನ್ನೂ, ಪ್ರಜಾಪಾಲನೆಯನ್ನೂ ಇವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.


ಆಗ ಏಲನ ಮಗನಾದ ಹೋಶೇಯನು, ರೆಮಲ್ಯನ ಮಗನಾದ ಪೆಕಹನಿಗೆ ವಿರುದ್ಧವಾಗಿ ಒಳಸಂಚು ಮಾಡಿ, ಇವನನ್ನು ಉಜ್ಜೀಯನ ಮಗನಾದ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು