Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಯೋತಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಅವನ ಪೂರ್ವಿಕರ ಕುಟುಂಬ ಸ್ಮಶಾನದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಆಹಾಜನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಯೋತಾಮನು ಸತ್ತು ಪಿತೃಗಳ ಬಳಿ ಸೇರಲು ಅವನ ಶವವನ್ನು ಅವನ ಪೂರ್ವಜನಾದ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನದಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಅಹಾಜನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಯೋತಾಮನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬಶ್ಮಶಾನದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಹಾಜನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಯೋತಾಮನು ಸತ್ತಮೇಲೆ ಅವನನ್ನು ಅವನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಿದರು. ಯೋತಾಮನನ್ನು ಅವನ ಪೂರ್ವಿಕನಾದ ದಾವೀದನ ನಗರದಲ್ಲಿ ಸಮಾಧಿಮಾಡಿದರು. ಯೋತಾಮನ ನಂತರ ಅವನ ಮಗನಾದ ಅಹಾಜನು ಹೊಸ ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಯೋತಾಮನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ತಂದೆಯಾದ ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನದಲ್ಲಿ ಸಮಾಧಿಮಾಡಿದರು. ಅವನ ಮಗ ಆಹಾಜನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:38
12 ತಿಳಿವುಗಳ ಹೋಲಿಕೆ  

ಉಜ್ಜೀಯನ ಮಗನು ಯೋತಾಮನು. ಯೋತಾಮನ ಮಗನು ಆಹಾಜನನು. ಆಹಾಜನ ಮಗನು ಹಿಜ್ಕೀಯನು.


ಆಹಾಜನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಅವನು ಯೆಹೋವನ ಚಿತ್ತಾನುಸಾರವಾಗಿ ನಡೆಯಲಿಲ್ಲ. ತನ್ನ ಪೂರ್ವಿಕನಾದ ದಾವೀದನ ಮಾರ್ಗವನ್ನು ಬಿಟ್ಟುಬಿಟ್ಟನು.


ಯೋತಾಮನ ಮಗ ಆಹಾಜ; ಆಹಾಜನ ಮಗ ಹಿಜ್ಕೀಯನು. ಹಿಜ್ಕೀಯನ ಮಗ ಮನಸ್ಸೆಯು.


ರೆಮಲ್ಯನ ಮಗನಾದ ಪೆಕಹನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಯೆಹೂದ ರಾಜನಾದ ಯೋತಾಮನ ಮಗ ಆಹಾಜನು ಆಳತೊಡಗಿದನು.


ರೆಹಬ್ಬಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದೊಳಗೆ ಅವನ ಹಿರಿಯರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ. ಅನಂತರ ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಅರಸನಾದನು.


ಅವನು ಇಪ್ಪತ್ತೆರಡು ವರ್ಷ ಆಳಿ ಪೂರ್ವಿಕರ ಬಳಿಗೆ ಸೇರಿದನು. ಅವನಿಗೆ ಬದಲಾಗಿ ಅವನ ಮಗನಾದ ನಾದಾಬನು ಅರಸನಾದನು.


ಆದುದರಿಂದ ಅವನ ಸೇವಕರು ಅವನಿಗೆ, “ನಮ್ಮ ಒಡೆಯನಾದ ಅರಸನಿಗೋಸ್ಕರ ಒಬ್ಬ ಕನ್ಯೆಯನ್ನು ಹುಡುಕಿತರುವೆವು. ಆಕೆಯು ಅರಸನ ಸನ್ನಿಧಿಯಲ್ಲಿದ್ದುಕೊಂಡು ನಿನ್ನನ್ನು ಪರಾಂಬರಿಸಬೇಕು. ಆಕೆಯು ನಮ್ಮ ಒಡೆಯನಾದ ಅರಸನ ಪಕ್ಕದಲ್ಲಿ ಮಲಗುವುದರಿಂದ ನಿಮಗೆ ಬೆಚ್ಚಗಾಗುವುದು” ಎಂದು ಹೇಳಿದರು.


ನಿನ್ನ ಆಯುಷ್ಕಾಲವು ಮುಗಿದು, ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನಿಂದ ಹುಟ್ಟುವ ಮಕ್ಕಳಲ್ಲಿ ಒಬ್ಬನನ್ನು ಎಬ್ಬಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ಯೆಹೋವನು ಆ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನನನ್ನೂ, ರೆಮಲ್ಯನ ಮಗನಾದ ಪೆಕಹನನ್ನೂ ಯೆಹೂದ್ಯರಿಗೆ ವಿರೋಧವಾಗಿ ಕಳುಹಿಸತೊಡಗಿದನು.


ಅನಂತರ ದಾವೀದನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು.


ಯೆಹೋರಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದ ನಗರದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಅಹಜ್ಯನು ಅರಸನಾದನು.


ಯೋತಾಮನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಆಹಾಜನು ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು