Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು ಅವನನ್ನು ಕುಷ್ಠರೋಗದಿಂದ ಶಿಕ್ಷಿಸಿದನು. ಆದುದರಿಂದ ಇವನು ಜೀವದಿಂದಿರುವವರೆಗೂ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾಧಿಪತ್ಯವನ್ನೂ, ಪ್ರಜಾಪಾಲನೆಯನ್ನೂ ಇವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸರ್ವೇಶ್ವರಸ್ವಾಮಿ ಇವನನ್ನು ಕುಷ್ಠರೋಗದಿಂದ ಶಿಕ್ಷಿಸಿದರು. ಆದುದರಿಂದ ಇವನು ಜೀವದಿಂದಿರುವವರೆಗೂ ಪ್ರತ್ಯೇಕವಾದ ಮನೆಯಲ್ಲಿ ವಾಸಿಸಬೇಕಾಯಿತು. ರಾಜಗೃಹಾಧಿಪತ್ಯವನ್ನೂ ಪ್ರಜಾಪಾಲನೆಯನ್ನೂ ಇವನ ಮಗ ಯೋತಾಮನು ನೋಡಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನು ಇವನನ್ನು ಕುಷ್ಠ ರೋಗದಿಂದ ಬಾಧಿಸಿದನು. ಆದದರಿಂದ ಇವನು ಜೀವದಿಂದಿರುವವರೆಗೂ ಪ್ರತ್ಯೇಕವಾದ ಮನೆಯಲ್ಲಿ ವಾಸಿಸಬೇಕಾಯಿತು; ರಾಜಗೃಹಾಧಿಪತ್ಯವನ್ನೂ ಪ್ರಜಾಪಾಲನೆಯನ್ನೂ ಇವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ರಾಜನಾದ ಅಜರ್ಯನು ಕುಷ್ಠರೋಗ ಪೀಡಿತನಾಗುವಂತೆ ಯೆಹೋವನು ಮಾಡಿದನು. ಅವನು ಸಾಯುವವರೆಗೂ ಕುಷ್ಠರೋಗಿಯಾಗಿಯೇ ಇದ್ದನು. ಅಜರ್ಯನು ಪ್ರತ್ಯೇಕವಾದ ಮನೆಯಲ್ಲಿ ವಾಸಿಸುತ್ತಿದ್ದನು. ರಾಜನ ಮಗನಾದ ಯೋತಾಮನು ರಾಜನ ಅರಮನೆಯನ್ನು ನೋಡಿಕೊಳ್ಳುತ್ತಿದ್ದನು ಮತ್ತು ಜನರನ್ನು ಪಾಲಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರು ಅರಸನನ್ನು ಮರಣದ ದಿವಸದವರೆಗೂ ಕುಷ್ಠರೋಗದಿಂದ ಬಾಧಿಸಿದ್ದರಿಂದ, ಅವನು ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅರಸನ ಮಗ ಯೋತಾಮನು ರಾಜಗೃಹಾಧಿಪತ್ಯವನ್ನು ಮತ್ತು ಪ್ರಜಾಪಾಲನೆಯನ್ನೂ ನೋಡಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:5
20 ತಿಳಿವುಗಳ ಹೋಲಿಕೆ  

ಆ ರೋಗದ ಗುರುತುಗಳು ಅವನಲ್ಲಿ ಇರುವ ದಿನಗಳೆಲ್ಲಾ ಅವನು ಅಶುದ್ಧನಾಗಿರುವನು. ಅವನು ಅಶುದ್ಧನಾದುದರಿಂದ ಪ್ರತ್ಯೇಕವಾಗಿಯೇ ವಾಸವಾಗಿರಬೇಕು; ಅವನ ನಿವಾಸವು ಪಾಳೆಯದ ಹೊರಗೆ ಇರಬೇಕು.


ಅದಕ್ಕೆ ಯೆಹೋವನು ಮೋಶೆಗೆ, “ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ, ಆಕೆ ಏಳು ದಿನ ನಾಚಿಕೆಯಿಂದ ಮರೆಯಾಗುತ್ತಿದ್ದಳಲ್ಲವೇ? ಹಾಗಾದರೆ ಆಕೆ ಏಳು ದಿನ ಪಾಳೆಯದ ಹೊರಗೆ ಇರಲಿ, ತರುವಾಯ ನೀನು ಆಕೆಯನ್ನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು” ಎಂದು ಉತ್ತರಕೊಟ್ಟನು.


ದೇವರೇ, ಅರಸನಿಗೆ ನಿನ್ನ ನ್ಯಾಯವನ್ನು; ರಾಜಕುಮಾರನಿಗೆ ನಿನ್ನ ನೀತಿಯನ್ನು ಅನುಗ್ರಹಿಸು.


ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ, ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ.


ಊರುಬಾಗಿಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು ತಮ್ಮೊಳಗೆ, “ನಾವು ಸಾಯುವ ತನಕ ಇಲ್ಲೇ ಕುಳಿತಿರಬೇಕೋ?


ನಾಮಾನನ ಕುಷ್ಠವು ನಿನ್ನನ್ನೂ, ನಿನ್ನ ಸಂತಾನದವರನ್ನೂ ಸದಾಕಾಲ ಹಿಡಿದಿರುವುದು” ಎಂದನು. ಕೂಡಲೆ ಅವನಿಗೆ ಕುಷ್ಠ ಹತ್ತಿತು. ಗೇಹಜಿ ಹಿಮದಂತೆ ಬಿಳುಪಾಗಿ ಎಲೀಷನ ಸನ್ನಿಧಿಯಿಂದ ಹೊರಟುಹೋದನು.


ಇಸ್ರಾಯೇಲರೆಲ್ಲರೂ ಈ ತೀರ್ಪನ್ನು ಕೇಳಿ ನ್ಯಾಯ ನಿರ್ಣಯಿಸುವುದಕ್ಕೆ ಈತನಲ್ಲಿ ದೈವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.


ಆದುದರಿಂದ ಅವರನ್ನು ಆಳುವುದಕ್ಕೂ, ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಬಲ್ಲ ಸಮರ್ಥರು ಯಾರಿದ್ದಾರೆ?” ಎಂದು ಬೇಡಿಕೊಂಡನು.


ದಾವೀದನು ಇಸ್ರಾಯೇಲ್ಯರ ಅರಸನಾಗಿ, ಎಲ್ಲಾ ಪ್ರಜೆಗಳನ್ನು ನೀತಿನ್ಯಾಯಗಳಿಂದ ನಡೆಸುತ್ತಾ ಬಂದನು.


ಈ ಅಪರಾಧವು ಯೋವಾಬನ ಮೇಲೆಯೂ ಅವನ ಸಂತಾನದವರ ಮೇಲೆಯೂ ಇರಲಿ. ಅವನ ಮನೆಯಲ್ಲಿ ಮೇಹಸ್ರಾವವುಳ್ಳವರೂ (ರಕ್ತ, ಕೀವುಸ್ರವಿಸುವ ಚರ್ಮ ರೋಗ), ಕುಷ್ಠರೋಗಿಗಳೂ, ಕುಂಟರೂ, ಕತ್ತಿಯಿಂದ ಹತರಾಗುವವರೂ, ಭಿಕ್ಷೇ ಬೇಡುವವರು ಇದ್ದೇ ಇರಲಿ” ಅಂದನು.


ಕುಷ್ಠರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವುದಕ್ಕೆ ನೀವು ಜಾಗರೂಕರಾಗಿರಬೇಕು. ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.


ಆ ಮೇಘವು ದೇವದರ್ಶನದ ಗುಡಾರದ ಮೇಲಿನಿಂದ ಬಿಟ್ಟುಹೋಯಿತು. ಪಕ್ಕನೆ ಮಿರ್ಯಾಮಳಿಗೆ ತೊನ್ನು ಹತ್ತಿದ್ದರಿಂದ ಆಕೆಯ ಚರ್ಮ ಹಿಮದಂತೆ ಬೆಳ್ಳಗಾಗಿ ಹೋಯಿತು. ಆರೋನನು ಮಿರ್ಯಾಮಳನ್ನು ನೋಡಿದಾಗ ಆಕೆಗೆ ತೊನ್ನು ಹಿಡಿದಿದೆ ಎಂದು ತಿಳಿದುಕೊಂಡನು.


ಅಜರ್ಯನ ಉಳಿದ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲದ ವೃತಾಂತ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.


ಅವರೆಲ್ಲರೂ ಯೆಹೂದ್ಯರ ಅರಸನಾದ ಯೋತಾಮನ ಕಾಲದಲ್ಲಿಯೂ, ಇಸ್ರಾಯೇಲರ ಅರಸನಾದ ಯಾರೊಬ್ಬಾಮನ ಕಾಲದಲ್ಲಿಯೂ ವಂಶಾವಳಿಯ ಪಟ್ಟಿಯಲ್ಲಿ ದಾಖಲಿಸಲ್ಪಟ್ಟರು.


ಯೆಹೂದದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ, ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಬೆಯೇರಿಯ ಮಗನಾದ ಹೋಶೇಯನಿಗೆ ಯೆಹೋವನು ತನ್ನ ವಾಕ್ಯವನ್ನು ದಯಪಾಲಿಸಿದನು.


ಯೆಹೂದದ ಅರಸನಾದ ಯೋಥಾಮ, ಆಹಾಜ ಮತ್ತು ಹಿಜ್ಕೀಯ ಇವರ ಕಾಲದಲ್ಲಿ ಸಮಾರ್ಯದ ಮತ್ತು ಯೆರೂಸಲೇಮಿನ ವಿಷಯವಾಗಿ ಮೋರೆಷೆತ್ ಊರಿನವನಾದ ಮೀಕನಿಗೆ ಕೇಳಿ ಬಂದ ಯೆಹೋವನ ವಾಕ್ಯ.


ಇಸ್ರಾಯೇಲರ ಅರಸನೂ, ರೆಮಲ್ಯನ ಮಗನೂ ಆದ ಪೆಕಹನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯೆಹೂದ್ಯರ ಅರಸನಾದ ಉಜ್ಜೀಯನ ಮಗನಾದ ಯೋತಾಮನು ಆಳತೊಡಗಿದನು.


ಯೋವಾಷನ ಮಗ ಅಮಚ್ಯ. ಅಮಚ್ಯ ಮಗ ಅಜರ್ಯ; ಅಜರ್ಯನ ಮಗ ಯೋತಾಮ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು