Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 16:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅರಸನಾದ ಆಹಾಜನು ಅಶ್ಶೂರದ ಅರಸನಾದ ತಿಗ್ಲತ್ಪಿಲೆಸೆರನ ದರ್ಶನಕ್ಕಾಗಿ ದಮಸ್ಕಕ್ಕೆ ಹೋದನು. ಅವನು ಅಲ್ಲಿದ್ದ ಯಜ್ಞವೇದಿಯನ್ನು ಕಂಡು, ಅದರ ಒಂದು ಪ್ರತಿಮೆಯನ್ನೂ, ಅದರ ಎಲ್ಲಾ ಅಲಂಕಾರದ ನಕ್ಷೆಯನ್ನೂ ಬರೆಯಿಸಿ, ಯಾಜಕನಾದ ಊರೀಯನಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅರಸ ಆಹಾಜನು ಅಸ್ಸೀರಿಯದ ಅರಸ ತಿಗ್ಲತ್ಪಿಲೆಸರನ ದರ್ಶನಕ್ಕಾಗಿ ದಮಸ್ಕಕ್ಕೆ ಹೋದನು; ಅಲ್ಲಿದ್ದ ಬಲಿಪೀಠವನ್ನು ಕಂಡು ಅದರ ಒಂದು ಚಿತ್ರವನ್ನೂ ಅದರ ಎಲ್ಲಾ ಅಲಂಕಾರದ ನಕ್ಷೆಯನ್ನೂ ಬರೆಯಿಸಿ ಯಾಜಕ ಊರೀಯನಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅರಸನಾದ ಆಹಾಜನು ಅಶ್ಶೂರದ ಅರಸನಾದ ತಿಗ್ಲತ್ಪಿಲೆಸೆರನ ದರ್ಶನಕ್ಕಾಗಿ ದಮಸ್ಕಕ್ಕೆ ಹೋದನು. ಅವನು ಅಲ್ಲಿದ್ದ ಯಜ್ಞವೇದಿಯನ್ನು ಕಂಡು ಅದರ ಒಂದು ಚಿತ್ರವನ್ನೂ ಅದರ ಎಲ್ಲಾ ಅಲಂಕಾರದ ನಕ್ಷೆಯನ್ನೂ ಬರೆಯಿಸಿ ಯಾಜಕನಾದ ಊರೀಯನಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ರಾಜನಾದ ಅಹಾಜನು ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನನ್ನು ಭೇಟಿಮಾಡಲು ದಮಸ್ಕಕ್ಕೆ ಹೋದನು. ಅಹಾಜನು ದಮಸ್ಕದಲ್ಲಿದ್ದ ಯಜ್ಞವೇದಿಕೆಯನ್ನು ನೋಡಿದನು. ರಾಜನಾದ ಅಹಾಜನು ಯಜ್ಞವೇದಿಕೆಯ ವಿನ್ಯಾಸವನ್ನು ಮತ್ತು ಮಾದರಿಯನ್ನು ಯಾಜಕನಾದ ಊರೀಯನಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅರಸನಾದ ಆಹಾಜನು ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನನ್ನು ಎದುರುಗೊಳ್ಳಲು ದಮಸ್ಕಕ್ಕೆ ಹೋಗಿ, ದಮಸ್ಕದಲ್ಲಿ ಒಂದು ಬಲಿಪೀಠವನ್ನು ಕಂಡನು. ಅರಸನಾದ ಆಹಾಜನು ಆ ಬಲಿಪೀಠದ ರೂಪವನ್ನೂ, ಅದರ ಎಲ್ಲಾ ಕೈಕೆಲಸದ ಪ್ರಕಾರ ಮಾದರಿಯನ್ನೂ ಯಾಜಕನಾದ ಊರೀಯನಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 16:10
22 ತಿಳಿವುಗಳ ಹೋಲಿಕೆ  

ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.


ನೀನು ಹೀಗೆ ಬರೆದದ್ದಕ್ಕೆ ಯಾಜಕನಾದ ಊರೀಯ, ಯೆಬೆರೆಕ್ಯನ ಮಗನಾದ ಜೆಕರ್ಯ ಈ ನಂಬಿಗಸ್ತರಾದ ಸಾಕ್ಷಿಗಳನ್ನು ಕರೆಯುವೆನು” ಎಂದು ಹೇಳಿದನು.


ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ.


ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಅವರು ಉಪದೇಶವಾಗಿ ಬೋಧಿಸುತ್ತಿರುವುದರಿಂದ ನನ್ನನ್ನು ವ್ಯರ್ಥವಾಗಿ ಆರಾಧಿಸುವರು” ಎಂಬುದೇ.


ಅವನು ‘ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕಾಗಿಲ್ಲ’ ಅನ್ನುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ಸಲುವಾಗಿ ದೇವರ ವಾಕ್ಯವನ್ನು ನಿರರ್ಥಕ ಮಾಡಿದ್ದೀರಿ.


ತಾವು ನಡೆಸಿದ ದುಷ್ಕೃತ್ಯಗಳಿಗೆಲ್ಲಾ ನಾಚಿಕೆಪಟ್ಟರೆ, ನೀನು ಆಲಯದ ರೂಪವನ್ನೂ, ವ್ಯವಸ್ಥೆಯನ್ನೂ ಅದರ ಆಗಮನ ಮತ್ತು ನಿರ್ಗಮನಗಳನ್ನೂ ಮತ್ತು ಅದರ ಎಲ್ಲಾ ಕಟ್ಟಳೆಗಳನ್ನೂ, ಸಕಲ ರಚನಾವಿಧಾನಗಳನ್ನೂ, ಸಮಸ್ತ ವಿಧಿಗಳನ್ನೂ, ಸರ್ವ ನಿರ್ಮಾಣ ರೀತಿಗಳನ್ನೂ ಅವರಿಗೆ ತಿಳಿಸು. ಅವರು ಅದರ ಪೂರ್ಣಕ್ರಮವನ್ನೂ, ಎಲ್ಲಾ ವಿಧಿಗಳನ್ನೂ ಅನುಸರಿಸಿ ಕೈಕೊಳ್ಳುವಂತೆ ಅವರ ಕಣ್ಣೆದುರಿಗೆ ಬರೆ.


ನನ್ನ ಹೊಸ್ತಿಲುಗಳ ಪಕ್ಕದಲ್ಲಿ ತಮ್ಮ ಹೊಸ್ತಿಲುಗಳನ್ನು ಹಾಕಿಕೊಂಡು ನನ್ನ ಮನೆಗೂ, ತಮ್ಮ ಮನೆಗೂ ಒಂದೇ ಗೋಡೆಯಾಗುವಂತೆ ಮಾಡಿಕೊಳ್ಳುವುದರಿಂದ ಇನ್ನು ಮೇಲೆ ನನ್ನ ಪವಿತ್ರ ನಾಮವನ್ನು ಅಪವಿತ್ರ ಮಾಡುವುದಿಲ್ಲ. ತಾವು ನಡೆಸಿದ ದುರಾಚಾರಗಳಿಂದ ನನ್ನ ಪವಿತ್ರ ನಾಮವನ್ನು ಅಪವಿತ್ರ ಮಾಡಿದರು. ಆದಕಾರಣ ನಾನು ಕೋಪಗೊಂಡು ಅವರನ್ನು ನಾಶಮಾಡಿದೆನು.


ಯೆಹೋವನು, “ಜನಾಂಗಗಳ ಆಚರಣೆಯನ್ನು ಅಭ್ಯಾಸ ಮಾಡಿಕೊಳ್ಳಬೇಡಿರಿ, ಜನಾಂಗಗಳು ಹೆದರುವ ಆಕಾಶದ ಉತ್ಪಾತಗಳಿಗೆ ನೀವು ಹೆದರಬೇಡಿರಿ.


ಅವರು ತಮ್ಮ ದುಷ್ಕೃತ್ಯಗಳಿಂದ ಅಶುದ್ಧರಾದರು. ದುರಾಚಾರಗಳಿಂದ ದೇವದ್ರೋಹಿಗಳಾದರು.


ಆ ನಕ್ಷೆಯಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ವಿವರವಾದ ಜ್ಞಾನವು ತನಗೆ ಯೆಹೋವನು ಸೂಚಿಸಿದಂತೆ ಪ್ರಾಪ್ತವಾಯಿತೆಂದು ಹೇಳಿದನು.


ಇಸ್ರಾಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬುವವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನು ಗಿಲ್ಯಾದ್ ಮತ್ತು ಗಲಿಲಾಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.


ನೀವು ಭ್ರಮೆಗೊಂಡು ನಿಮ್ಮ ಎದುರಿನಿಂದ ನಾಶವಾಗಿ ಹೋದವರ ದುಷ್ಟಪದ್ಧತಿಗಳನ್ನು ಅನುಸರಿಸಬಾರದು. ನೀವು, “ಈ ದೇಶದ ಜನರು ತಮ್ಮ ದೇವರುಗಳನ್ನು ಹೇಗೆ ಸೇವಿಸುತ್ತಿದ್ದರೋ ಹಾಗೆಯೇ ನಾವೂ ಸೇವಿಸುವೆವು” ಎಂದು ಹೇಳಿಕೊಳ್ಳುವವರಾಗಿ ಅವರ ದೇವರುಗಳ ವಿಷಯದಲ್ಲಿ ವಿಚಾರಣೆಯನ್ನು ಎಷ್ಟು ಮಾತ್ರವೂ ಮಾಡಬಾರದು.


ಅವರು ಮಾಡಿದ್ದ ಕೆಲಸವನ್ನು ಮೋಶೆಯು ಪರೀಕ್ಷಿಸಿ ನೋಡಲಾಗಿ ಯೆಹೋವನ ಅಪ್ಪಣೆಯಂತೆಯೇ ಅವರು ಎಲ್ಲವನ್ನು ಮಾಡಿದ್ದರಿಂದ ಮೋಶೆಯು ಅವರನ್ನು ಆಶೀರ್ವದಿಸಿದನು.


ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದ ತಪ್ಪಲಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ಹನ್ನೆರಡು ಕುಲಗಳಿಗೆ ಸರಿಯಾಗಿ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆಮಾಡಿಸಿದನು.


ಅರಸನಾದ ಆಹಾಜನು ದಮಸ್ಕದಿಂದ ಬರುವಷ್ಟರಲ್ಲಿ ಊರೀಯನು ಅರಸನಿಂದ ತನಗೆ ಬಂದ ಮಾದರಿಯ ಪ್ರಕಾರ ಒಂದು ಯಜ್ಞವೇದಿಯನ್ನು ಮಾಡಿಸಿಟ್ಟಿದ್ದನು.


ಇದಲ್ಲದೆ, “ಯೆರೂಸಲೇಮಿನಲ್ಲಿ ನನ್ನ ಹೆಸರನ್ನು ಸ್ಥಾಪಿಸುವೆನು” ಎಂದು ಯೆಹೋವನು ಯಾವುದನ್ನು ಕುರಿತು ಹೇಳಿದ್ದನೋ, ಆ ಯೆಹೋವನ ಆಲಯದಲ್ಲಿ ಮನಸ್ಸೆಯು ಯಜ್ಞವೇದಿಗಳನ್ನು ಕಟ್ಟಿಸಿದನು.


ಮತ್ತು ಇಷ್ಟೂ ಸಾಲದೆಂದು ಅಶ್ಶೂರ್ಯರೊಂದಿಗೂ ವ್ಯಭಿಚಾರಮಾಡಿದಿ; ಹೌದು, ಅವರೊಡನೆ ವ್ಯಭಿಚಾರಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ.


ಅವರು ತಮ್ಮ ವಿಗ್ರಹಗಳ ಮುಂದೆ ಜನರಿಗಾಗಿ ಸೇವೆ ಮಾಡಿ ಇಸ್ರಾಯೇಲ್ ವಂಶದವರಿಗೆ ಪಾಪಕಾರಿಯಾದ ವಿಘ್ನವಾದುದರಿಂದ ನಾನು ಅವರ ಮೇಲೆ ಕೈಯೆತ್ತಿದ್ದೇನೆ, ಅವರು ತಮ್ಮ ದೋಷಫಲವನ್ನು ಅನುಭವಿಸಲೇಬೇಕು.’ ಇದು ಕರ್ತನಾದ ಯೆಹೋವನ ನುಡಿ.


ಅವರು ಮುಂದೆ ನಮಗಾಗಲಿ, ನಮ್ಮ ಸಂತಾನದವರಿಗಾಗಲಿ ಈ ರೀತಿಯಾಗಿ ಹೇಳಿದರೆ ನಾವು ಅವರಿಗೆ ‘ಯೆಹೋವನ ಯಜ್ಞವೇದಿಯ ಮಾದರಿಯನ್ನು ನೋಡಿರಿ: ನಮ್ಮ ಪೂರ್ವಿಕರು ಇದನ್ನು ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸುವುದಕ್ಕೋಸ್ಕರ ಕಟ್ಟಲಿಲ್ಲ; ಇದು ನಮ್ಮ ನಿಮ್ಮ ಮಧ್ಯದಲ್ಲಿ ಒಂದು ಸಾಕ್ಷಿಯಾಗಿದೆಯಷ್ಟೆ’ ಎಂದು ಹೇಳುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು