2 ಅರಸುಗಳು 16:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅರಸನಾದ ಆಹಾಜನು ಅಶ್ಶೂರದ ಅರಸನ ನಿಮಿತ್ತವಾಗಿ ಯಜ್ಞವೇದಿಗಳ ಪಟ್ಟಿಗಳನ್ನು ಕತ್ತರಿಸಿದನು, ಅವುಗಳ ಮೇಲಿದ್ದ ಗಂಗಾಳಗಳನ್ನು ತೆಗೆದಿಟ್ಟನು. ಕಡಲೆನಿಸುವ ಪಾತ್ರೆಯನ್ನು ತಾಮ್ರದ ಹೋರಿಗಳ ಮೇಲಣಿಂದ ಇಳಿಸಿ ಕಲ್ಲುಕಟ್ಟೆಗಳ ಮೇಲೆ ಇಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅರಸನಾದ ಆಹಾಜನು ಅಸ್ಸೀರಿಯದ ಅರಸನ ನಿಮಿತ್ತ ಪೀಠಗಳ ಪಟ್ಟಿಗಳನ್ನು ಕತ್ತರಿಸಿದನು; ಅವುಗಳ ಮೇಲಿದ್ದ ನೀರಿನ ತೊಟ್ಟಿಗಳನ್ನು ತೆಗೆದಿಟ್ಟನು; ಕಂಚಿನ ಕಡಲೆಂಬ ದೊಡ್ಡ ಪಾತ್ರೆಯನ್ನು ತಾಮ್ರದ ಹೋರಿಗಳ ಮೇಲಿನಿಂದ ಇಳಿಸಿ ಕಲ್ಲುಕಟ್ಟೆಗಳ ಮೇಲೆ ಇಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅರಸನಾದ ಆಹಾಜನು ಅಶ್ಶೂರದ ಅರಸನ ನಿವಿುತ್ತವಾಗಿ ಪೀಠಗಳ ಪಟ್ಟಿಗಳನ್ನು ಕತ್ತರಿಸಿದನು; ಅವುಗಳ ಮೇಲಿದ್ದ ಗಂಗಾಳಗಳನ್ನು ತೆಗೆದಿಟ್ಟನು; ಸಮುದ್ರವೆನಿಸುವ ಪಾತ್ರೆಯನ್ನು ತಾಮ್ರದ ಹೋರಿಗಳ ಮೇಲಣಿಂದ ಇಳಿಸಿ ಕಲ್ಲುಕಟ್ಟೆಗಳ ಮೇಲೆ ಇಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಂತರ ರಾಜನಾದ ಅಹಾಜನು ಪೀಠಗಳ ಪಟ್ಟಿಗಳನ್ನು ಕತ್ತರಿಸಿದನು. ಅವುಗಳ ಮೇಲಿದ್ದ ಗಂಗಾಳಗಳನ್ನು ತೆಗೆದಿಟ್ಟನು; ಸಮುದ್ರವೆಂಬ ತೊಟ್ಟಿಯನ್ನು ತಾಮ್ರದ ಹೋರಿಗಳಿಂದ ಕೆಳಗಿಳಿಸಿ ಕಲ್ಲುಕಟ್ಟೆಯ ಮೇಲಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅರಸನಾದ ಆಹಾಜನು ಪೀಠದ ಅಂಚುಗಳನ್ನು ಕೊಯ್ದು, ಕಂಚಿನ ಕಡಲೆಂಬ ದೊಡ್ಡ ಪಾತ್ರೆಯನ್ನು ಅದರ ಮೇಲಿನಿಂದ ಇಳಿಸಿ, ಅದನ್ನು ಕಲ್ಲುಗಳ ಕಟ್ಟೆಯ ಮೇಲೆ ಇಟ್ಟನು. ಅಧ್ಯಾಯವನ್ನು ನೋಡಿ |