Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 16:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಹಾಜನು ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ನಿನ್ನ ದಾಸನೂ, ಮಗನೂ ಆಗಿದ್ದೇನೆ. ನೀನು ಬಂದು ನನ್ನನ್ನು, ನನಗೆ ವಿರೋಧವಾಗಿ ಎದ್ದಿರುವ ಅರಾಮ್ಯರ ಮತ್ತು ಇಸ್ರಾಯೇಲರ ಅರಸುಗಳ ಕೈಗೆ ಸಿಕ್ಕದಂತೆ ತಪ್ಪಿಸು” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಹಾಜನು ಅಸ್ಸೀರಿಯಾ ದೇಶದ ಅರಸನಾದ ತಿಗ್ಲತ್ಪೆಲೆಸರನ ಬಳಿಗೆ ದೂತರನ್ನು ಕಳುಹಿಸಿ, “ನಾನು ನಿಮ್ಮ ಸೇವಕ ಹಾಗು ಕುವರ; ನೀವು ಬಂದು ನನ್ನನ್ನು, ನನಗೆ ವಿರುದ್ಧ ದಂಡೆತ್ತಿ ಬಂದಿರುವ ಸಿರಿಯಾದವರ ಮತ್ತು ಇಸ್ರಯೇಲರ ಅರಸುಗಳ ಕೈಗೆ ಸಿಕ್ಕದಂತೆ, ಕಾಪಾಡಿ,” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಹಾಜನು ಅಶ್ಶೂರ್‍ದೇಶದ ಅರಸನಾದ ತಿಗ್ಲತ್ಪಿಲೆಸೆರನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ನಾನು ನಿನ್ನ ದಾಸನೂ ಮಗನೂ ಆಗಿದ್ದೇನೆ; ನೀನು ಬಂದು ನನ್ನನ್ನು ನನಗೆ ವಿರೋಧವಾಗಿ ಎದ್ದಿರುವ ಅರಾಮ್ಯರ ಮತ್ತು ಇಸ್ರಾಯೇಲ್ಯರ ಅರಸುಗಳ ಕೈಗೆ ಸಿಕ್ಕದಂತೆ ತಪ್ಪಿಸು ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅಹಾಜನು ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಆ ಸಂದೇಶವೇನೆಂದರೆ: “ನಾನು ನಿನ್ನ ಸೇವಕ. ನಾನು ನಿನಗೆ ಮಗನಂತಿದ್ದೇನೆ. ನೀನು ಬಂದು, ಅರಾಮ್ಯರ ರಾಜನಿಂದ ಮತ್ತು ಇಸ್ರೇಲಿನ ರಾಜನಿಂದ ನನ್ನನ್ನು ರಕ್ಷಿಸು. ಅವರು ನನ್ನ ವಿರುದ್ಧ ಯುದ್ಧಕ್ಕೆ ಬಂದಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಹಾಜನು ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನಿಗೆ, “ನಾನು ನಿನ್ನ ಸೇವಕನೂ, ನಿನ್ನ ಮಗನೂ ಆಗಿದ್ದೇನೆ. ನನಗೆ ವಿರೋಧವಾಗಿ ಎದ್ದ ಅರಾಮಿನ ಅರಸನ ಕೈಗೂ, ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ, ರಕ್ಷಿಸುವುದಕ್ಕೆ ಬರಬೇಕು,” ಎಂದು ಹೇಳಿ ಸೇವಕರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 16:7
17 ತಿಳಿವುಗಳ ಹೋಲಿಕೆ  

ಇಸ್ರಾಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬುವವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನು ಗಿಲ್ಯಾದ್ ಮತ್ತು ಗಲಿಲಾಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.


ಅಶ್ಶೂರವು ನಮ್ಮನ್ನು ರಕ್ಷಿಸುವುದೆಂದು ನಂಬುವುದಿಲ್ಲ, ಐಗುಪ್ತದ ಕುದುರೆಗಳನ್ನು ಹತ್ತುವುದಿಲ್ಲ, ನಮ್ಮ ಕೈಕೆಲಸದ ಬೊಂಬೆಗಳಿಗೆ, ‘ನೀವು ನಮ್ಮ ದೇವರುಗಳು’ ಎಂದು ಇನ್ನು ಹೇಳುವುದಿಲ್ಲ; ನೀನೇ ದಿಕ್ಕಿಲ್ಲದ ಈ ಅನಾಥರನ್ನು ಕರುಣಿಸುವವನು” ಎಂಬುದಾಗಿ ಅರಿಕೆಮಾಡಿಕೊಳ್ಳಿರಿ.


ನಮಗೆ ಬರತಕ್ಕ ಸಹಾಯವನ್ನು ವ್ಯರ್ಥವಾಗಿ ಎದುರುನೋಡಿ ಕಣ್ಣು ಮೊಬ್ಬಾಯಿತು. ನಮ್ಮನ್ನು ಉದ್ಧರಿಸಲಾರದ ಜನಾಂಗದ ಆಗಮನವನ್ನು ನಮ್ಮ ಬುರುಜುಗಳಲ್ಲಿ ಕಾದುಕೊಂಡಿದ್ದೇವಲ್ಲಾ.


ಯೆಹೋವನು ಹೀಗೆನ್ನುತ್ತಾನೆ, “ಮಾನವ ಮಾತ್ರದವರಲ್ಲಿ ಭರವಸವಿಟ್ಟು, ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು, ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ಥನು.


ಅಶ್ಶೂರದ ಅರಸನಾದ ತಿಗ್ಲತ್ಪಿಲೆಸರನು ಬಂದು ಅವನಿಗೆ ನೆರವಾಗುವುದಕ್ಕೆ ಬದಲಾಗಿ ಅವನನ್ನು ಕುಗ್ಗಿಸಿದನು.


ಆ ಕಾಲದಲ್ಲಿ ಅರಸನಾದ ಆಹಾಜನು ತನಗೆ ಸಹಾಯ ಮಾಡಬೇಕೆಂದು ಅಶ್ಶೂರದ ರಾಜರನ್ನು ದೂತರ ಮುಖಾಂತರ ಬೇಡಿಕೊಂಡನು.


ಆದುದರಿಂದ ಅಶ್ಶೂರದ ಅರಸನಾದ ಪೂಲ್, ತಿಗ್ಲತ್ಪಿಲೆಸರ್ ಎಂಬವರು ಇಸ್ರಾಯೇಲ್ ದೇವರ ಪ್ರೇರಣೆಯಿಂದ ಬಂದು ರೂಬೇನ್ಯರು, ಗಾದ್ಯರು, ಮನಸ್ಸೆ ಕುಲದ ಅರ್ಧ ಜನರು ಇವರನ್ನು ಹಲಹ, ಹಾಬೋರ್, ಹಾರ ಎಂಬ ಪ್ರಾಂತ್ಯಗಳಿಗೂ, ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆ ಹಿಡಿದು ಕರೆದೊಯ್ದರು. ಅವರು ಇಂದಿನವರೆಗೂ ಅಲ್ಲಿಯೇ ನೆಲೆಸುವಂತೆ ದೇವರು ಮಾಡಿದ್ದಾನೆ .


ಅದಕ್ಕೆ ಇಸ್ರಾಯೇಲರ ಅರಸನು, “ನನ್ನ ಒಡೆಯನಾದ ಅರಸನೇ, ನೀನು ಹೇಳಿದಂತೆ ನಾನು ನಿನ್ನವನೇ, ನನಗಿರುವುದೆಲ್ಲವೂ ನಿನ್ನದೇ” ಎಂದು ಉತ್ತರಕೊಟ್ಟು ಕಳುಹಿಸಿದನು.


ಯೆಹೋವನು ಹಿಜ್ಕೀಯನ ಸಂಗಡ ಇದ್ದುದರಿಂದ ಅವನು ಹೋದ ಎಲ್ಲ ಕಡೆ ಅಭಿವೃದ್ಧಿ ಹೊಂದಿದನು. ಇವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ದಂಗೆ ಎದ್ದು ಸ್ವತಂತ್ರನಾದನು.


ಯಾಕೋಬಿನ ಮನೆತನದವರು ಪೂರ್ವದೇಶಗಳಲ್ಲಿ ಮಂತ್ರತಂತ್ರಗಳಲ್ಲಿ ಮಗ್ನರೂ, ಫಿಲಿಷ್ಟಿಯರ ಹಾಗೆ ಕಣಿ ಹೇಳುವವರೂ, ಅನ್ಯದೇಶಗಳವರ ಸಂಗಡ ಒಪ್ಪಂದ ಮಾಡುವವರೂ ಆಗಿರುವುದರಿಂದ ಯೆಹೋವನೇ ಈ ನಿನ್ನ ಜನರನ್ನು ಕೈಬಿಟ್ಟಿದ್ದೀ.


ಮತ್ತು ಇಷ್ಟೂ ಸಾಲದೆಂದು ಅಶ್ಶೂರ್ಯರೊಂದಿಗೂ ವ್ಯಭಿಚಾರಮಾಡಿದಿ; ಹೌದು, ಅವರೊಡನೆ ವ್ಯಭಿಚಾರಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ.


“ಒಹೊಲಳು ನನ್ನ ವಶವಾಗಿರುವಾಗಲೇ, ವ್ಯಭಿಚಾರ ಮಾಡಿದಳು. ಅವಳು ತನ್ನ ಪ್ರಿಯರನ್ನು, ತನ್ನ ನೆರೆಯವರಾದ ಅಶ್ಶೂರ್ಯರನ್ನು,


ಇವಳು ತನ್ನ ನೆರೆಯವರಾದ ಅಶ್ಶೂರ್ಯರನ್ನೂ, ನಾಯಕರನ್ನೂ, ಅಧಿಕಾರಿಗಳನ್ನು ವಿಚಿತ್ರವಾಗಿ ಉಡುಪು ಧರಿಸಿ ಕುದರೆಗಳ ಮೇಲೆ ಸವಾರಿಮಾಡುವ ರಾಹುತರನ್ನು, ಸುಂದರವಾದ ಯುವಕರನ್ನು ಮೋಹಿಸಿದಳು.


ನಿನ್ನೊಡನೆ ಗೆಳೆಯರಂತೆ ಬಾಳಲು ನೀನು ಅಭ್ಯಾಸಮಾಡಿಸಿದವರನ್ನು ಯೆಹೋವನು ನಿನಗೆ ತಲೆಯಾಗಿ ನೇಮಿಸುವಾಗ ಏನು ಹೇಳುವಿ? ವೇದನೆಯು ನಿನ್ನನ್ನು ಹೆರುವವಳನ್ನೋ ಎಂಬಂತೆ ಹಿಡಿಯುವುದಲ್ಲವೇ.


ಎಫ್ರಾಯೀಮು ಬುದ್ಧಿ ವಿವೇಕಗಳಿಲ್ಲದ ಪಾರಿವಾಳದಂತಿದೆ; ಅದರ ಜನರು ಐಗುಪ್ತವನ್ನು ಕೂಗುತ್ತಾರೆ, ಅಶ್ಶೂರಕ್ಕೆ ಹೊರಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು