Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 16:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದಲ್ಲದೆ, ಆಹಾಜನು ಯೆಹೋವನ ಆಲಯದಲ್ಲಿಯೂ, ಅರಮನೆಯ ಭಂಡಾರದಲ್ಲಿಯೂ ಇದ್ದ, ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅಶ್ಶೂರದ ಅರಸನಿಗೆ ಕಾಣಿಕೆಯಾಗಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇದಲ್ಲದೆ ಆಹಾಜನು ಸರ್ವೇಶ್ವರನ ಆಲಯದಲ್ಲೂ ಅರಮನೆಯ ಭಂಡಾರದಲ್ಲೂ ಇದ್ದ ಬೆಳ್ಳಿ ಬಂಗಾರವನ್ನು ತೆಗೆದುಕೊಂಡು ಅಸ್ಸೀರಿಯಾದ ಅರಸನಿಗೆ ಕಪ್ಪವಾಗಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದಲ್ಲದೆ ಆಹಾಜನು ಯೆಹೋವನ ಆಲಯದಲ್ಲಿಯೂ ಅರಮನೆಯ ಭಂಡಾರದಲ್ಲಿಯೂ ಇದ್ದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅಶ್ಶೂರದ ಅರಸನಿಗೆ ಕಾಣಿಕೆಯಾಗಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅಹಾಜನು ಯೆಹೋವನ ಆಲಯದಲ್ಲಿದ್ದ ಮತ್ತು ರಾಜನ ಅರಮನೆಯಲ್ಲಿದ್ದ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡು ಅಶ್ಶೂರದ ರಾಜನಿಗೆ ಕಾಣಿಕೆಯಾಗಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಹಾಜನು ಯೆಹೋವ ದೇವರ ಆಲಯದಲ್ಲಿಯೂ, ಅರಮನೆಯ ಖಜಾನೆಯಲ್ಲಿಯೂ ಇದ್ದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅಸ್ಸೀರಿಯದ ಅರಸನಿಗೆ ಕಾಣಿಕೆಯಾಗಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 16:8
13 ತಿಳಿವುಗಳ ಹೋಲಿಕೆ  

ಯೆಹೋವನು ನಿನ್ನ ಮೇಲೆಯೂ, ನಿನ್ನ ಪ್ರಜೆಯ ಮೇಲೆಯೂ, ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾಯೀಮು ಅಗಲಿದಂದಿನಿಂದ ಅಂದರೆ ಅಶ್ಶೂರದ ಅರಸನ ಕಾಲದಿಂದಲೂ ಬಾರದೆ ಇದ್ದ ದುರ್ದಿನಗಳನ್ನು ಬರಮಾಡುವನು.”


ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಿಂದ ಬೆಳ್ಳಿ ಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿದ್ದ ಅರಾಮ್ಯರ ಅರಸನಾದ ಬೆನ್ಹದದನಿಗೆ ಕಳುಹಿಸಿ


ಯಾಕೋಬಿನ ಮನೆತನದವರು ಪೂರ್ವದೇಶಗಳಲ್ಲಿ ಮಂತ್ರತಂತ್ರಗಳಲ್ಲಿ ಮಗ್ನರೂ, ಫಿಲಿಷ್ಟಿಯರ ಹಾಗೆ ಕಣಿ ಹೇಳುವವರೂ, ಅನ್ಯದೇಶಗಳವರ ಸಂಗಡ ಒಪ್ಪಂದ ಮಾಡುವವರೂ ಆಗಿರುವುದರಿಂದ ಯೆಹೋವನೇ ಈ ನಿನ್ನ ಜನರನ್ನು ಕೈಬಿಟ್ಟಿದ್ದೀ.


ಆದಕಾರಣ ನೀವು ಮೋರೆಷತ್ ಗತ್ ಊರಿಗೆ ಬಳುವಳಿ ಕೊಡಬೇಕಾಗುವುದು. ಅಕ್ಜೀಬಿನ ಮನೆಗಳಿಂದ ಇಸ್ರಾಯೇಲಿನ ಅರಸರಿಗೆ ಮೋಸವಾಗುವುದು.


ಯೆಹೋವಾಷನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಅಶ್ಶೂರ ದೇಶದ ಅರಸನಾದ ಪೂಲನೆಂಬವನು ಇಸ್ರಾಯೇಲ್ ದೇಶಕ್ಕೆ ವಿರುದ್ಧವಾಗಿ ಬಂದಾಗ ಮೆನಹೇಮನು ಅವನ ಮುಖಾಂತರವಾಗಿ ತನ್ನ ಅರಸುತನವನ್ನು ಜನರು ದೃಢಪಡಿಸಿಕೊಳ್ಳುವುದಕ್ಕೋಸ್ಕರ ಅವನಿಗೆ ಸಾವಿರ ತಲಾಂತು ಬೆಳ್ಳಿಯನ್ನು ಕೊಟ್ಟನು.


ಅಶ್ಶೂರದ ಅರಸನಾದ ಶಲ್ಮನೆಸರನು ಹೋಶೇಯನಿಗೆ ವಿರುದ್ಧವಾಗಿ ಬಂದಾಗ, ಹೋಶೇಯನು ಅವನಿಗೆ ಅಧೀನನಾಗಿ ಕಪ್ಪಕೊಡುವವನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು