Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ನೀವು ಇಂತಹ ಕೃತ್ಯಗಳನ್ನು ಮಾಡಬಾರದು” ಎಂದು ಯೆಹೋವನು ಅವರಿಗೆ ಆಜ್ಞಾಪಿಸಿದ್ದರೂ ಅವರು ಆತನ ಅಜ್ಞೆಯನ್ನು ಮೀರಿ ಅವರು ವಿಗ್ರಹಗಳನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರನ ಆಜ್ಞೆಯನ್ನು ಮೀರಿ ವಿಗ್ರಹಗಳನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋವನ ಆಜ್ಞೆಯನ್ನು ಮೀರಿ ವಿಗ್ರಹಗಳನ್ನು ಆರಾಧಿಸಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವರು ವಿಗ್ರಹಗಳ ಸೇವೆಮಾಡಿದರು. ಯೆಹೋವನು ಇಸ್ರೇಲರಿಗೆ, “ನೀವು ವಿಗ್ರಹಗಳನ್ನು ಪೂಜಿಸಲೇಬಾರದು” ಎಂದು ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ನೀವು ಈ ಕಾರ್ಯವನ್ನು ಮಾಡಬೇಡಿರಿ,” ಎಂದು ಯೆಹೋವ ದೇವರು ಅವರಿಗೆ ಹೇಳಿದ್ದರೂ, ಅವರು ಮೂರ್ತಿಗಳಿಗೆ ಪೂಜೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:12
13 ತಿಳಿವುಗಳ ಹೋಲಿಕೆ  

ಅವರು ಮಾಡಿದ ರೀತಿಯಲ್ಲಿ ನೀವು ನಿಮ್ಮ ದೇವರಾದ ಯೆಹೋವನನ್ನು ಪೂಜಿಸಬಾರದು.


“ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು; ಕೆತ್ತಿದ ಪ್ರತಿಮೆಯನ್ನಾಗಲಿ ಅಥವಾ ಕಲ್ಲು ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬಾರದು; ಅಡ್ಡಬೀಳುವುದಕ್ಕಾಗಿ ವಿಚಿತ್ರವಾಗಿ ಕೆತ್ತಿದ ಕಲ್ಲುಗಳನ್ನು ನಿಮ್ಮ ದೇಶದಲ್ಲಿ ಇಡಬಾರದು; ನಾನೇ ಯೆಹೋವನೆಂಬ ನಿಮ್ಮ ದೇವರು.


ಏಕೆಂದರೆ ತೀಕ್ಷ್ಣತೆಯುಳ್ಳವನು ಎಂಬ ಹೆಸರುಳ್ಳ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದ್ದರಿಂದ ನೀವು ಬೇರೆ ಯಾವ ದೇವರ ಮುಂದೆಯೂ ಅಡ್ಡಬೀಳಬಾರದು.


ಯೆಹೋವನು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆಯು ಕೇವಲ ಅಸಹ್ಯವಾಗಿತ್ತು.


ಅಲ್ಲಿ ಅವರು ಯೆಹೋವನು ತಮ್ಮ ಎದುರಿನಿಂದ ಹೊರಡಿಸಿ ಜಡಿಸಿದ ಅನ್ಯಜನಾಂಗಗಳಂತೆ ಎಲ್ಲಾ ಪೂಜಾಸ್ಥಳಗಳಲ್ಲಿಯೂ ಧೂಪವನ್ನು ಹಾಕಿ, ತಮ್ಮ ದುಷ್ಕೃತ್ಯಗಳಿಂದ ಆತನನ್ನು ರೇಗಿಸಿದರು.


“ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’


ಉಳಿದಿರುವ ಈ ಅನ್ಯಜನಾಂಗಗಳ ಜೊತೆಯಲ್ಲಿ ಇಜ್ಜೋಡಾಗಬೇಡಿರಿ. ಅವರ ದೇವತೆಗಳ ಹೆಸರನ್ನು ಹೇಳಿ ಆರಾಧಿಸಲೂ ಬಾರದು ಪ್ರಮಾಣಮಾಡಲೂ ಬಾರದು. ಅವುಗಳಿಗೆ ಅಡ್ಡ ಬಿದ್ದು ಸೇವಿಸಲೂ ಬಾರದು.


ಅವರು ಅದನ್ನು ಲಕ್ಷ್ಯಕ್ಕೆ ತಂದುಕೊಳ್ಳದೆ ತಮ್ಮ ಹಿಂದಿನ ಪದ್ಧತಿಗಳನ್ನೇ ಅನುಸರಿಸಿದರು.


ನಾನು ಪ್ರಮಾಣ ಪೂರ್ವಕವಾಗಿ ಅವರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧ ಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಅರ್ಪಿಸುತ್ತಿದ್ದರು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು