2 ಅರಸುಗಳು 17:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ತಮ್ಮ ಗಂಡು ಹೆಣ್ಣು ಮಕ್ಕಳನ್ನು ಆಹುತಿ ಕೊಟ್ಟರು. ಯೆಹೋವನ ದೃಷ್ಟಿಯಲ್ಲಿ ನೀಚಕೃತ್ಯಗಳಾಗಿರುವ ಕಣಿಹೇಳುವುದು, ಮಾಟ ಮಂತ್ರಗಳನ್ನು ಮಾಡುವುದು ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನು ತೊಡಗಿಸಿಕೊಂಡು, ಯೆಹೋವನಿಗೆ ಕೋಪವನ್ನೆಬ್ಬಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ತಮ್ಮ ಗಂಡುಹೆಣ್ಣು ಮಕ್ಕಳನ್ನು ಬಲಿಯಗ್ನಿಪರೀಕ್ಷೆಗೆ ಗುರಿಮಾಡಿದರು. ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟವುಗಳನ್ನು ಮಾಡಿದರು. ಕಣಿಹೇಳುವುದು, ಯಂತ್ರಮಂತ್ರಗಳನ್ನು ಮಾಡುವುದು, ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನೇ ಮಾರಿಬಿಟ್ಟು ಸರ್ವೇಶ್ವರನಿಗೆ ಕೋಪವನ್ನೆಬ್ಬಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ತಮ್ಮ ಗಂಡು ಹೆಣ್ಣು ಮಕ್ಕಳನ್ನು ಆಹುತಿಕೊಟ್ಟರು; ಯೆಹೋವನ ದೃಷ್ಟಿಯಲ್ಲಿ ಕೆಟ್ಟವುಗಳಾಗಿರುವ ಕಣಿಹೇಳುವದು, ಯಂತ್ರಮಂತ್ರಗಳನ್ನು ಮಾಡುವದು ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನು ಮಾರಿಬಿಟ್ಟು ಆತನಿಗೆ ಕೋಪವನ್ನೆಬ್ಬಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅವರು ತಮ್ಮ ಗಂಡುಮಕ್ಕಳನ್ನು ಮತ್ತು ಹೆಣ್ಣುಮಕ್ಕಳನ್ನು ಬೆಂಕಿಯಲ್ಲಿ ಆಹುತಿಕೊಟ್ಟರು. ಅವರು ಭವಿಷ್ಯವನ್ನು ತಿಳಿಯಲು ಮಾಂತ್ರಿಕ ವಿದ್ಯೆಯನ್ನು ಮತ್ತು ಕಣಿಹೇಳುವುದನ್ನು ಕಲಿತರು. ಯೆಹೋವನು ಕೆಟ್ಟದ್ದೆಂದು ಹೇಳಿದ್ದಕ್ಕೆ ತಮ್ಮನ್ನು ತಾವು ಮಾರಿಕೊಂಡು ಯೆಹೋವನಿಗೆ ಕೋಪವನ್ನು ಉಂಟುಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಕಣಿಗಳನ್ನೂ, ಶಕುನಗಳನ್ನೂ ಬಳಸಿ, ಯೆಹೋವ ದೇವರಿಗೆ ಕೋಪ ಬರುವಂತೆ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು. ಅಧ್ಯಾಯವನ್ನು ನೋಡಿ |