Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಹೋಶೇಯನು ತನ್ನ ಪೂರ್ವಿಕರಾದ ಇಸ್ರಾಯೇಲರ ಅರಸರಷ್ಟು ಕೆಟ್ಟವನಾಗಿರಲಿಲ್ಲವಾದರೂ, ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇವನು ತನ್ನ ಪೂರ್ವಿಕರಾದ ಇಸ್ರಯೇಲಿನ ಅರಸರಷ್ಟು ಕೆಟ್ಟವನಾಗಿರಲಿಲ್ಲ. ಆದರೂ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇವನು ತನ್ನ ಪೂರ್ವಿಕರಾದ ಇಸ್ರಾಯೇಲ್ಯರ ಅರಸರಷ್ಟು ಕೆಟ್ಟವನಾಗಿರಲಿಲ್ಲವಾದರೂ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಹೋಶೇಯನು ಮಾಡಿದನು. ಆದರೆ ಹೋಶೇಯನು ಅವನಿಗಿಂತ ಮೊದಲು ಇಸ್ರೇಲನ್ನು ಆಳಿದ ರಾಜರುಗಳಷ್ಟು ಕೆಟ್ಟವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ತನಗೆ ಮುಂಚೆ ಇದ್ದ ಇಸ್ರಾಯೇಲಿನ ಅರಸರ ಹಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:2
13 ತಿಳಿವುಗಳ ಹೋಲಿಕೆ  

ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಇವನು ಜೀವದಿಂದ ಇರುವವರೆಗೂ ಇಸ್ರಾಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಆದರೆ ಯೇಹುವು ಇಸ್ರಾಯೇಲರ ದೇವರಾದ ಯೆಹೋವನ ಧರ್ಮನಿಯಮಗಳನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವುದಕ್ಕೆ ಮನಸ್ಸುಮಾಡಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲೂ ಇಲ್ಲ.


ಇವನು ತನ್ನ ತಂದೆತಾಯಿಗಳಷ್ಟು ದುಷ್ಟನಾಗಿರಲಿಲ್ಲ. ಆದರೂ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ತನ್ನ ತಂದೆ ಬಾಳನಿಗೋಸ್ಕರ ನಿಲ್ಲಿಸಿದ ಕಲ್ಲಿನ ಸ್ತಂಭ, ಸ್ಮಾರಕಗಳನ್ನು ತೆಗೆದುಹಾಕಿದನು.


ಯೆಹೂದದ ಅರಸನಾದ ಆಹಾಜನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಏಲನ ಮಗನಾದ ಹೋಶೇಯನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಒಂಭತ್ತು ವರ್ಷ ಆಳಿದನು.


ಅಶ್ಶೂರದ ಅರಸನಾದ ಶಲ್ಮನೆಸರನು ಹೋಶೇಯನಿಗೆ ವಿರುದ್ಧವಾಗಿ ಬಂದಾಗ, ಹೋಶೇಯನು ಅವನಿಗೆ ಅಧೀನನಾಗಿ ಕಪ್ಪಕೊಡುವವನಾದನು.


ಒಮ್ರಿಯು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯೂ ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತ ದುಷ್ಟನಾಗಿದ್ದನು.


ಅವನು ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತಲೂ ದುಷ್ಟನಾಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು


ಅವನು ಯೆಹೋವನು ಇಸ್ರಾಯೇಲರ ರಾಜ್ಯದಿಂದ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು