Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನು ಇಸ್ರಾಯೇಲರ ಕುಲಗಳಲ್ಲಿ ಉಳಿದಿದ್ದವರನ್ನೂ ಅಲಕ್ಷ್ಯಮಾಡಿ, ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ ಅವರನ್ನು ಬಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇಸ್ರಯೇಲ್ ಕುಲಗಳಲ್ಲಿ ಉಳಿದಿದ್ದ ಇವರನ್ನೂ ಹೇಸಿ, ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ, ಶಿಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆತನು ಇಸ್ರಾಯೇಲ್‍ಕುಲಗಳಲ್ಲಿ ಉಳಿದಿದ್ದ ಇವರನ್ನೂ ಹೇಸಿ ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು ಸೂರೆಮಾಡುವವರಿಗೆ ಒಪ್ಪಿಸಿ ಬಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೋವನು ಇಸ್ರೇಲಿನ ಜನರೆಲ್ಲರನ್ನೂ ತಿರಸ್ಕರಿಸಿದನು. ಅವನು ಅವರಿಗೆ ಅನೇಕ ತೊಂದರೆಗಳನ್ನು ಉಂಟುಮಾಡಿದನು. ಅವರನ್ನು ನಾಶಗೊಳಿಸಲು ನಾಶಕರಿಗೆ ಆತನು ಅವಕಾಶ ನೀಡಿದನು. ಕೊನೆಗೆ, ಆತನು ಅವರನ್ನು ದೂರತಳ್ಳಿ, ತನ್ನ ದೃಷ್ಟಿಯಿಂದ ಅವರನ್ನೂ ದೂರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಸಂತತಿಯನ್ನೆಲ್ಲಾ ಅಲಕ್ಷ್ಯಮಾಡಿ, ಅವರನ್ನು ಕುಂದಿಸಿ, ಅವರನ್ನು ತಮ್ಮ ಸಮ್ಮುಖದಿಂದ ತಳ್ಳಿಬಿಡುವವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:20
42 ತಿಳಿವುಗಳ ಹೋಲಿಕೆ  

ಇಸ್ರಾಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬುವವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನು ಗಿಲ್ಯಾದ್ ಮತ್ತು ಗಲಿಲಾಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.


ಯೆಹೋವನಾದ ನಾನು ಇವರನ್ನು ನೂಕಿಬಿಟ್ಟಿದ್ದರಿಂದ ಇವರು ‘ಕಂದು ಬೆಳ್ಳಿ’ ಎನಿಸಿಕೊಳ್ಳುವರು” ಎಂದು ಹೇಳಿದ್ದಾನೆ.


ಆದುದರಿಂದ ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಅರಾಮ್ಯರ ಅರಸನಾದ ಹಜಾಯೇಲನ ಕೈಗೂ ಅವನ ಮಗನಾದ ಬೆನ್ಹದದನ ಕೈಗೂ ಒಪ್ಪಿಸಿದನು. ಅವರು ಯೆಹೋವಾಹಾಜನ ಜೀವಮಾನದಲ್ಲೆಲ್ಲಾ ಅವರ ಅಧೀನದಲ್ಲಿದ್ದರು.


ಅವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು.


ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ನಾನು ಯೆಹೋವನ ಸನ್ನಿಧಿಯಿಂದ ಓಡಿಹೋಗುತ್ತಿದ್ದೇನೆ ಎಂದು ಅವನು ಅವರಿಗೆ ಸೂಚಿಸಿದನು. ಇದನ್ನು ಕೇಳಿ ಅವರು ಬಹಳವಾಗಿ ಹೆದರಿ “ಇದೇನು ನೀನು ಮಾಡಿದ್ದು?” ಎಂದು ಕೇಳಿದರು.


ಆದರೆ ಯೋನನು ಯೆಹೋವನ ಸನ್ನಿಧಿಯಿಂದ ತಪ್ಪಿಸಿಕೊಳ್ಳಲು ತಾರ್ಷೀಷಿಗೆ ಓಡಿಹೋಗಬೇಕೆಂದು ಯೋಚಿಸಿ ಹೊರಟು ಯೊಪ್ಪ ಎಂಬ ಊರಿಗೆ ಬಂದು ಅಲ್ಲಿ ತಾರ್ಷೀಷಿಗೆ ಹೊರಡುವ ಹಡಗನ್ನು ಕಂಡು ಪ್ರಯಾಣದ ದರವನ್ನು ಕೊಟ್ಟು ತಾರ್ಷೀಷಿಗೆ ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ಅದನ್ನು ಹತ್ತಿದನು.


ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ, ನಾನು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿದ್ದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು; ನಿನ್ನನ್ನೋ ನಿರ್ಮೂಲಮಾಡೆನು. ಮಿತಿಮೀರಿ ಶಿಕ್ಷಿಸೆನು, ಆದರೆ ಶಿಕ್ಷಿಸದೆ ಬಿಡುವುದಿಲ್ಲ. ಇದು ಯೆಹೋವನ ನುಡಿ.”


ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು” ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ.


ಇಸ್ರಾಯೇಲ್ ಸಂತಾನದವರು ಎಲ್ಲಾ ಅನ್ಯಕುಲದವರಿಂದ ತಮ್ಮನ್ನು ಬೇರ್ಪಡಿಸಿಕೊಂಡು, ಎದ್ದು ನಿಂತುಕೊಂಡು ತಮ್ಮ ಪಾಪಗಳನ್ನೂ, ತಮ್ಮ ಪೂರ್ವಿಕರ ಪಾಪಗಳನ್ನೂ ಆತನಿಗೆ ಅರಿಕೆಮಾಡಿದರು.


ಮಹತ್ಕಾರ್ಯಗಳನ್ನು, ನ್ಯಾಯ ನಿರ್ಣಯಗಳನ್ನು ಸ್ಮರಿಸಿರಿ.


ಇಸ್ರಾಯೇಲರ ಅರಸನೂ ಏಲನ ಮಗನೂ ಆದ ಹೋಶೇಯನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅಂದರೆ ಹಿಜ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಶಲ್ಮನೆಸರನು ಸಮಾರ್ಯಕ್ಕೆ ವಿರೋಧವಾಗಿ ಬಂದು ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆ ಹಾಕಿ ಅದನ್ನು ವಶಪಡಿಸಿಕೊಂಡನು.


ಇಸ್ರಾಯೇಲರು ಈ ಪ್ರಕಾರ ನಡೆದುಕೊಂಡುದರಿಂದ, ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡು, ಯೆಹೂದ ಕುಲದವರ ಹೊರತು ಎಲ್ಲ ಕುಲಗಳವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು.


ಆತನು ತಮ್ಮ ಪೂರ್ವಿಕರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ, ತಮಗೆ ಹೇಳಿಸಿದ ಒಡಂಬಡಿಕೆಯನ್ನು ತಿರಸ್ಕರಿಸಿ, ವ್ಯರ್ಥವಾದ ದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ, ಅವರನ್ನು ಅನುಸರಿಸಿದರು.


ಯೆಹೋವಾಹಾಜನಿಗೆ ಐವತ್ತು ಮಂದಿ ರಾಹುತರು, ಹತ್ತು ರಥಗಳು, ಹತ್ತು ಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದರು. ಅರಾಮ್ಯರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ ಕಣದ ಧೂಳಿನಂತೆ ಮಾಡಿದನು.


ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.


ಅದಕ್ಕೆ ಸಮುವೇಲನು, “ನಾನು ಹಿಂದಿರುಗಿ ನಿನ್ನ ಜೊತೆಯಲ್ಲಿ ಬರುವುದಿಲ್ಲ; ನೀನು ಯೆಹೋವನ ಮಾತನ್ನು ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಇಸ್ರಾಯೇಲರ ಅರಸುತನದಿಂದ ನಿವಾರಿಸಿದ್ದಾನೆ” ಎಂದು ಹೇಳಿ ತಿರುಗಿಕೊಂಡು ಹೊರಡಲು


ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವುದು. ಹಟವು ಮಿಥ್ಯಾಭಕ್ತಿಗೂ, ವಿಗ್ರಹಾರಾಧನೆಗೂ ಸಮಾನವಾಗಿರುವುದು. ನೀನು ಯೆಹೋವನ ಮಾತಿನಂತೆ ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಅರಸುತನದಿಂದ ನಿವಾರಿಸಿಬಿಟ್ಟಿದ್ದಾನೆ” ಎಂದು ಹೇಳಿದನು.


ಅದು ನಿಮ್ಮ ದೇವರಾದ ಯೆಹೋವನು ಪರಾಂಬರಿಸುವ ದೇಶ; ವರ್ಷದ ಪ್ರಾರಂಭ ಮೊದಲುಗೊಂಡು ಕೊನೆಯ ವರೆಗೂ ಆತನು ಅದನ್ನು ಸದಾ ಕಟಾಕ್ಷಿಸುವನು.


ಆಗ ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈರಿಗಳಿಗೆ ಮಾರಿಬಿಟ್ಟನು. ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು.


ಭಯಪಡುವುದಕ್ಕೆ ಕಾರಣವಿಲ್ಲದಿದ್ದರೂ, ಅವರು ಪಕ್ಕನೆ ಭಯಭ್ರಾಂತರಾದರು; ದುಷ್ಟರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ಅವರು ಅವಮಾನಕ್ಕೊಳಗಾಗುವರು.


ಯೆಹೋವನು ನನಗೆ ಹೀಗೆ ಹೇಳಿದನು, “ಮೋಶೆಯು ಮತ್ತು ಸಮುವೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ!


ಆತನು ಅವರ ವಿಷಯದಲ್ಲಿ ಹೀಗೆ ಅಂದುಕೊಂಡನು, “ನಾನು ಅವರಿಗೆ ವಿಮುಖನಾಗಿ ಅವರಿಗೆ ಪ್ರಾಪ್ತವಾಗುವ ಗತಿಯನ್ನು ನೋಡುವೆನು. ಅವರು ಸತ್ಯವನ್ನು ತಿಳಿದೂ ಅದನ್ನು ಅನುಸರಿಸದೆ, ದ್ರೋಹಿಗಳಾದ ಮಕ್ಕಳಾಗಿದ್ದಾರೆ.


ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸುವುದೇ ಇಲ್ಲವೆಂದು ತಿಳಿದುಕೊಳ್ಳಿರಿ. ಅವರೇ ನಿಮಗೆ ಉರುಲೂ ಬೋನೂ ಆಗಿರುವರು. ಅವರು ಪಕ್ಕೆಗೆ ಹೊಡೆಯುವ ಕೊರಡೆಯಂತೆಯೂ ಕಣ್ಣಿಗೆ ಚುಚ್ಚುವ ಮುಳ್ಳಿನಂತೆಯೂ ಇರುವರು. ಕಡೆಯಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟ ಈ ಉತ್ತಮ ದೇಶದಲ್ಲಿ ನೀವು ಇಲ್ಲದಂತಾಗುವಿರಿ.


ಇದಲ್ಲದೆ ದಾನ್ಯರು ಆ ವಿಗ್ರಹವನ್ನು ತಮ್ಮ ಪಟ್ಟಣದಲ್ಲಿಟ್ಟರು. ಇಸ್ರಾಯೇಲರು ಸೆರೆಗೆ ಹೋಗುವವರೆಗೆ ಮೋಶೆಯ ಮೊಮ್ಮಗನೂ, ಗೇರ್ಷೋಮನ ಮಗನೂ ಆದ ಯೋನಾತಾನನೂ ಅವನ ವಂಶದವರೂ ದಾನ್ಯರಿಗೆ ಯಾಜಕರಾಗಿದ್ದರು.


ಆದರೂ ಯೆಹೋವನು ಅವರನ್ನು ಸಂಪೂರ್ಣವಾಗಿ ಹಾಳುಮಾಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತನ್ನ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾನು ಅಬ್ರಹಾಮ್, ಇಸಾಕ್, ಯಾಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪು ಮಾಡಿಕೊಂಡು ಅವರಿಗೆ ದಯೆ ತೋರಿಸಿ, ಅವರ ಮೇಲೆ ಅನುಕಂಪಗೊಂಡನು.


ನನ್ನ ಪ್ರಜೆಗಳಲ್ಲಿ ಉಳಿದಿರುವವರನ್ನು ಶತ್ರುಗಳ ಕೈಗೆ ಒಪ್ಪಿಸುವೆನು. ಅವರ ಎಲ್ಲಾ ಶತ್ರುಗಳು ಬಂದು ಅವರ ಸ್ವತ್ತನ್ನು ಸುಲಿದು ಸೂರೆಮಾಡುವರು.


ಯೆಹೋವನು, “ಇಸ್ರಾಯೇಲರನ್ನು ತೆಗೆದುಹಾಕಿದಂತೆ, ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು, ನಾನು ಆರಿಸಿಕೊಂಡ ಯೆರೂಸಲೇಮ್ ಪಟ್ಟಣವನ್ನೂ ನನ್ನ ನಾಮದ ಮಹಿಮೆಗಾಗಿ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು” ಎಂದು ಹೇಳಿದನು.


ಯೆಹೂದ ರಾಜ್ಯದ ನಿರಪರಾಧಿಗಳ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ ಮನಸ್ಸೆಯ ದುಷ್ಕೃತ್ಯಗಳನ್ನು ಯೆಹೋವನು ಕ್ಷಮಿಸದೆ ಹೋದನು.


ಆಗ ನಿನ್ನ ಮಾರ್ಗವನ್ನು ದ್ರೋಹಿಗಳಿಗೆ ಬೋಧಿಸುವೆನು; ಪಾಪಿಗಳು ನಿನ್ನ ಕಡೆಗೆ ತಿರುಗಿಕೊಳ್ಳುವರು.


ಕಾಡುಹಂದಿಯು ಅದನ್ನು ನಿರ್ಮೂಲಮಾಡುತ್ತದೆ; ಅರಣ್ಯಮೃಗಗಳು ಅದನ್ನು ತಿಂದುಹಾಕುತ್ತವೆ.


ಯಾಕೋಬಿನ ಮನೆತನದವರು ಪೂರ್ವದೇಶಗಳಲ್ಲಿ ಮಂತ್ರತಂತ್ರಗಳಲ್ಲಿ ಮಗ್ನರೂ, ಫಿಲಿಷ್ಟಿಯರ ಹಾಗೆ ಕಣಿ ಹೇಳುವವರೂ, ಅನ್ಯದೇಶಗಳವರ ಸಂಗಡ ಒಪ್ಪಂದ ಮಾಡುವವರೂ ಆಗಿರುವುದರಿಂದ ಯೆಹೋವನೇ ಈ ನಿನ್ನ ಜನರನ್ನು ಕೈಬಿಟ್ಟಿದ್ದೀ.


ಮತ್ತು ನಾನು ನಿಮ್ಮ ಎಲ್ಲಾ ಸಹೋದರರನ್ನು ಅಂದರೆ ಸಮಸ್ತ ಎಫ್ರಾಯೀಮ್ ವಂಶದವರನ್ನು ತೊಲಗಿಸಿಬಿಟ್ಟ ಹಾಗೆ ನಿಮ್ಮನ್ನೂ ನನ್ನ ಕಣ್ಣೆದುರಿನಿಂದ ತೊಲಗಿಸುವೆನು.


ಯೆಹೋವನು ಯೆರೂಸಲೇಮಿನವರ ಮೇಲೆಯೂ ಮತ್ತು ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ, ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದನು.


ಗೋಮೆರಳು ಪುನಃ ಗರ್ಭಿಣಿಯಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದಾಗ ಯೆಹೋವನು ಹೋಶೇಯನಿಗೆ, “ಈ ಮಗುವಿಗೆ ‘ಲೋ ರುಹಾಮ’ ಎಂಬ ಹೆಸರಿಡು; ಏಕೆಂದರೆ ನಾನು ಇಸ್ರಾಯೇಲ್ ವಂಶದವರಲ್ಲಿ ಇನ್ನು ವಾತ್ಸಲ್ಯವಿಡುವುದಿಲ್ಲ, ಅವರನ್ನು ಕ್ಷಮಿಸುವುದಿಲ್ಲ.


ಯಾಕೋಬನು ಗರ್ಭದಲ್ಲಿ ತನ್ನ ಅಣ್ಣನ ಹಿಮ್ಮಡಿಯನ್ನು ಎಳೆದನು, ಪೂರ್ಣಪ್ರಾಯದಲ್ಲಿ ದೇವರೊಂದಿಗೆ ಹೋರಾಡಿದನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು