Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆತನು ಇಸ್ರಾಯೇಲರ ರಾಜ್ಯವನ್ನು ದಾವೀದ ಸಂತಾನದವರ ಕೈಯಿಂದ ಕಿತ್ತುಕೊಂಡ ನಂತರ ಇಸ್ರಾಯೇಲರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಅವನು ಅವರನ್ನು ಯೆಹೋವನ ಭಕ್ತಿಯಿಂದ ಬೀಳಿಸಿ ಮಹಾ ಪಾಪಕ್ಕೆ ಒಳಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇಸ್ರಯೇಲ್ ರಾಜ್ಯವನ್ನು ದಾವೀದ ಸಂತಾನದವರ ಕೈಯಿಂದ ಕಿತ್ತುಕೊಂಡ ನಂತರ, ಇಸ್ರಯೇಲರು ನೆಬಾಟನ ಮಗ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಅವನು ಅವರನ್ನು ಸರ್ವೇಶ್ವರನ ಭಕ್ತಿಮಾರ್ಗದಿಂದ ತಪ್ಪಿಸಿ ಮಹಾಪಾಪಕ್ಕೆ ಒಳಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆತನು ಇಸ್ರಾಯೇಲ್ ರಾಜ್ಯವನ್ನು ದಾವೀದಸಂತಾನದವರ ಕೈಯಿಂದ ಕಿತ್ತುಕೊಂಡನಂತರ ಇಸ್ರಾಯೇಲ್ಯರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಳ್ಳಲು ಅವನು ಅವರನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೋವನು ಇಸ್ರೇಲನ್ನು ದಾವೀದನ ವಂಶಾವಳಿಯಿಂದ ಕಿತ್ತುಹಾಕಿದನು. ಇಸ್ರೇಲರು ನೆಬಾಟನ ಮಗನಾದ ಯಾರೊಬ್ಬಾಮನನ್ನು ತಮ್ಮ ರಾಜನನ್ನಾಗಿಸಿಕೊಂಡರು. ಯಾರೊಬ್ಬಾಮನು ಇಸ್ರೇಲರನ್ನು ಯೆಹೋವನಿಂದ ದೂರಮಾಡಿದನು. ಇಸ್ರೇಲರು ಮಹಾಪಾಪಗಳನ್ನು ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ದೇವರು ಇಸ್ರಾಯೇಲನ್ನು ದಾವೀದನ ಸಂತಾನದಿಂದ ವಿಭಾಗಿಸಿದಾಗ, ಅವರು ನೆಬಾಟನ ಮಗ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಆಗ ಯಾರೊಬ್ಬಾಮನು ಇಸ್ರಾಯೇಲನ್ನು ಯೆಹೋವ ದೇವರ ಮಾರ್ಗದಿಂದ ತಪ್ಪಿಸಿ, ಮಹಾ ಪಾಪಮಾಡಲು ಪ್ರೇರೇಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:21
19 ತಿಳಿವುಗಳ ಹೋಲಿಕೆ  

ಯೆಹೋವನು ಅವನಿಗೆ, “ನೀನು ಈ ರೀತಿಯಾಗಿ ಮಾಡಿ ನನ್ನ ವಿಧಿನಿಬಂಧನೆಗಳನ್ನು ಮೀರಿದ್ದರಿಂದ ನಿನ್ನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ಸೇವಕನಿಗೆ ಕೊಡುವೆನು.


ಅವನು ಯಾರೊಬ್ಬಾಮನಿಗೆ, “ನೀನು ಇವುಗಳಲ್ಲಿ ಹತ್ತು ತುಂಡುಗಳನ್ನು ತೆಗೆದುಕೋ. ಇಸ್ರಾಯೇಲ್ ದೇವರಾದ ಯೆಹೋವನು ರಾಜ್ಯವನ್ನು ಸೊಲೊಮೋನನಿಂದ ಕಿತ್ತುಕೊಂಡು,


ಯೆಹೋವನು ಯಾರೊಬ್ಬಾಮನ ಪಾಪಗಳ ನಿಮಿತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲರು ಮಾಡಿದ ಅಪರಾಧಗಳ ನಿಮಿತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು” ಎಂದು ಆಕೆಗೆ ಹೇಳಿದನು.


ಅದಕ್ಕೆ ಯೇಸು, “ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ” ಎಂದು ಉತ್ತರ ಕೊಟ್ಟನು.


ಯೆಹೋವನು ನಿನ್ನ ಮೇಲೆಯೂ, ನಿನ್ನ ಪ್ರಜೆಯ ಮೇಲೆಯೂ, ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾಯೀಮು ಅಗಲಿದಂದಿನಿಂದ ಅಂದರೆ ಅಶ್ಶೂರದ ಅರಸನ ಕಾಲದಿಂದಲೂ ಬಾರದೆ ಇದ್ದ ದುರ್ದಿನಗಳನ್ನು ಬರಮಾಡುವನು.”


ಯೆಹೋವನೇ, ನನ್ನ ಪಾಪವು ಬಹುಘೋರವಾಗಿದೆ; ಆದರೂ ನಿನ್ನ ಹೆಸರಿನ ನಿಮಿತ್ತ ಅದನ್ನು ಕ್ಷಮಿಸು.


ಯಾರೊಬ್ಬಾಮನು ತಾನು ಏರ್ಪಡಿಸಿದ ಪೂಜಾ ಸ್ಥಳಗಳಿಗಾಗಿ ಹಾಗೂ ಹೋರಿಕುರಿಗಳ ಮೂರ್ತಿ ಪೂಜೆಗಳಿಗಾಗಿ ಬೇರೆ ಪೂಜಾರಿಗಳನ್ನು ನೇಮಿಸಿದನು.


ಅವನು ಈ ಕೋಟೆಗಳನ್ನು ಬಲಪಡಿಸಿ, ನಾಯಕರ ವಶಕ್ಕೆ ಕೊಟ್ಟು, ಪ್ರತಿ ಒಂದರಲ್ಲಿ ಆಹಾರಪದಾರ್ಥ, ಎಣ್ಣೆ, ದ್ರಾಕ್ಷಾರಸವನ್ನು ಸಂಗ್ರಹಿಸಿಟ್ಟನು. ಗುರಾಣಿ ಬರ್ಜಿಗಳನ್ನೂ ಸಂಗ್ರಹಿಸಿಟ್ಟನು.


ರಾಜ್ಯವನ್ನು ದಾವೀದನ ಕುಟುಂಬದವರಿಂದ ಕಿತ್ತುಕೊಂಡು ನಿನಗೆ ಕೊಟ್ಟೆನು. ಆದರೂ ನೀನು ನನ್ನ ಆಜ್ಞೆಗಳನ್ನು ಕೈಕೊಂಡು ಪೂರ್ಣ ಮನಸ್ಸಿನಿಂದ ನನ್ನನ್ನು ಹಿಂಬಾಲಿಸಿ ನನ್ನನ್ನು ಮೆಚ್ಚಿಸಿದಂಥ ನನ್ನ ಸೇವಕನಾದ ದಾವೀದನಂತೆ ನಡೆಯಲಿಲ್ಲ.


ನನ್ನ ಮಕ್ಕಳೇ, ಹೀಗೆ ಮಾಡಬಾರದು, ನೀವು ಯೆಹೋವನ ಜನರನ್ನು ದುರ್ಮಾರ್ಗಕ್ಕೆ ಎಳೆಯುವವರಾಗಿದ್ದೀರೆಂದು ಕೇಳಿದ್ದೇನೆ; ಇದು ಒಳ್ಳೆಯದಲ್ಲ.


ಹೀಗೆ ಆ ಯೌವನಸ್ಥರು ಯೆಹೋವನ ನೈವೇದ್ಯವನ್ನು ತುಚ್ಛೀಕರಿಸಿದ್ದರಿಂದ ಅವರ ಪಾಪವು ಯೆಹೋವನ ದೃಷ್ಟಿಯಲ್ಲಿ ಆಧಿಕವಾಯಿತು.


ಆಗ ಮೋಶೆ ಆರೋನನನ್ನು ಕುರಿತು, “ನೀನು ಈ ಜನರಿಂದ ಮಹಾ ಅಪರಾಧವನ್ನು ಮಾಡಿಸಿದಿಯಲ್ಲಾ ಹೀಗೆ ಮಾಡಿಸುವುದಕ್ಕೆ ಇವರು ನಿನಗೇನು ಮಾಡಿದರು?” ಎಂದು ವಿಚಾರಿಸಲು,


ಅಬೀಮೆಲೆಕನು ಅಬ್ರಹಾಮನನ್ನು ಕರೆದು, “ನೀನು ನಮಗೆ ಮಾಡಿದ್ದೇನು? ನಾನು ಯಾವ ಪಾಪ ಮಾಡಿದ್ದರಿಂದ ನೀನು ನನ್ನನ್ನೂ ನನ್ನ ರಾಜ್ಯವನ್ನೂ ಮಹಾಪಾತಕಕ್ಕೆ ಒಳಪಡಿಸಿದಿ? ನೀನು ಮಾಡಬಾರದ ಕಾರ್ಯಗಳನ್ನು ಮಾಡಲು ನಾನು ನಿನಗೇನು ಮಾಡಿದೆ” ಎಂದು ಹೇಳಿ,


ಈ ಕಾರಣದಿಂದ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ತೆಗೆದುಹಾಕಲ್ಪಟ್ಟು ನಿರ್ನಾಮವಾದರು.


ಇಸ್ರಾಯೇಲರು ಯಾರೊಬ್ಬಾಮನ ದುರ್ಮಾರ್ಗದಲ್ಲಿ ನಡೆದು ಅವನು ಮಾಡಿದ ಪಾಪಗಳನ್ನು ತೊರೆದು ಬಿಡಲಿಲ್ಲ.


ಆದರೂ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು