2 ಅರಸುಗಳು 17:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವರಿಗೆ ಆರಂಭದಲ್ಲಿ ಯೆಹೋವನ ಭಯಭಕ್ತಿ ಇರಲಿಲ್ಲ. ಆದುದರಿಂದ ಆತನು ಸಿಂಹಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅವರಿಗೆ ಆರಂಭದಲ್ಲಿ ಸರ್ವೇಶ್ವರನಲ್ಲಿ ಭಯಭಕ್ತಿ ಇರಲಿಲ್ಲ. ಆದ್ದರಿಂದ ಸರ್ವೇಶ್ವರ ಸಿಂಹಗಳನ್ನು ಕಳುಹಿಸಿದರು; ಅವು ಅವರಲ್ಲಿ ಅನೇಕರನ್ನು ಕೊಂದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅವರಿಗೆ ಆರಂಭದಲ್ಲಿ ಯೆಹೋವನ ಭಯಭಕ್ತಿ ಇರಲಿಲ್ಲವಾದದರಿಂದ ಆತನು ಸಿಂಹಗಳನ್ನು ಕಳುಹಿಸಿದನು; ಅವು ಅವರಲ್ಲಿ ಅನೇಕರನ್ನು ಕೊಂದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆದರೆ ಅವರು ಯೆಹೋವನನ್ನು ಗೌರವಿಸಲಿಲ್ಲ. ಆದ್ದರಿಂದ ಅವರ ಮೇಲೆ ಆಕ್ರಮಣಮಾಡಲು ಯೆಹೋವನು ಸಿಂಹಗಳನ್ನು ಕಳುಹಿಸಿದನು. ಈ ಸಿಂಹಗಳು ಆ ಜನರಲ್ಲಿ ಕೆಲವರನ್ನು ಕೊಂದುಹಾಕಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆದರೆ ಅವರು ಅಲ್ಲಿ ವಾಸಿಸಲು ಆರಂಭಿಸಿದಾಗ, ಯೆಹೋವ ದೇವರಿಗೆ ಭಯಪಡದ ಕಾರಣ, ಯೆಹೋವ ದೇವರು ಅವರ ಮಧ್ಯದಲ್ಲಿ ಸಿಂಹಗಳನ್ನು ಕಳುಹಿಸಿದರು. ಅವು ಅವರಲ್ಲಿ ಕೆಲವರನ್ನು ಕೊಂದುಹಾಕಿದವು. ಅಧ್ಯಾಯವನ್ನು ನೋಡಿ |