2 ಅರಸುಗಳು 17:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅಶ್ಶೂರದ ಅರಸನ ಸೇವಕರು ತಮ್ಮ ಅರಸನಿಗೆ, “ನೀನು ಸಮಾರ್ಯ ಪಟ್ಟಣಗಳಿಗೆ ಕಳುಹಿಸಿದ ಆಯಾ ಊರುಗಳ ಜನರು ಆ ದೇಶದ ದೇವರಿಗೆ ನಡೆಯತಕ್ಕ ರೀತಿಯನ್ನು ಅರಿಯದವರಾಗಿದ್ದಾರೆ. ಆದುದರಿಂದ ಅಲ್ಲಿ ದೇವರು ಸಿಂಹಗಳನ್ನು ಕಳುಹಿಸಿ ಅವರನ್ನು ಸಂಹರಿಸುತ್ತಿದ್ದಾನೆ” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅಸ್ಸೀರಿಯದ ರಾಜನ ಸೇವಕರು ಅವನಿಗೆ, “ನೀವು ಸಮಾರಿಯಾ ಪಟ್ಟಣಗಳಿಗೆ ಕಳುಹಿಸಿದ ಆಯಾ ಊರುಗಳ ಜನರು, ಆ ನಾಡಿನ ದೇವರಿಗೆ ಸೇವೆಮಾಡುವ ರೀತಿಯನ್ನು ಅರಿಯದವರಾಗಿದ್ದಾರೆ. ಆದುದರಿಂದ ಅಲ್ಲಿನ ದೇವರು ಸಿಂಹಗಳನ್ನು ಕಳುಹಿಸಿ ಅವರನ್ನು ಸಂಹರಿಸುತ್ತಿರುತ್ತಾನೆ,” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅಶ್ಶೂರದ ಅರಸನ ಸೇವಕರು ತಮ್ಮ ಅರಸನಿಗೆ - ನೀನು ಸಮಾರ್ಯಪಟ್ಟಣಗಳಿಗೆ ಕಳುಹಿಸಿದ ಆಯಾ ಊರುಗಳ ಜನರು ಆ ದೇಶದ ದೇವರಿಗೆ ನಡೆಯತಕ್ಕ ರೀತಿಯನ್ನು ಅರಿಯದವರಾಗಿದ್ದಾರೆ. ಆದದರಿಂದ ಅಲ್ಲಿನ ದೇವರು ಸಿಂಹಗಳನ್ನು ಕಳುಹಿಸಿ ಅವರನ್ನು ಸಂಹರಿಸುತ್ತಿರುತ್ತಾನೆ ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಅಶ್ಶೂರದ ರಾಜನಿಗೆ ಕೆಲವು ಜನರು, “ನೀನು ಕೆಲವು ಜನರನ್ನು ಒಯ್ದು ಸಮಾರ್ಯ ನಗರಗಳಲ್ಲಿ ಇರಿಸಿದೆ. ಅವರು ಆ ದೇಶದ ದೇವರ ನಿಯಮಗಳ ಬಗ್ಗೆ ತಿಳಿದುಕೊಂಡಿಲ್ಲ. ಆದ್ದರಿಂದ ಅವರನ್ನು ಆಕ್ರಮಣಮಾಡಲು ದೇವರು ಸಿಂಹಗಳನ್ನು ಕಳುಹಿಸಿದನು. ಆ ದೇಶದ ದೇವರ ನಿಯಮಗಳನ್ನು ಅವರು ತಿಳಿದಿಲ್ಲದಿರುವುದರಿಂದ ಅವರನ್ನು ಸಿಂಹಗಳು ಕೊಂದುಹಾಕಿದವು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆದಕಾರಣ ಸೇವಕರು ಅಸ್ಸೀರಿಯದ ಅರಸನಿಗೆ, “ನೀನು ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದ ಜನರು ಆ ದೇಶದ ದೇವರು ಅಪೇಕ್ಷಿಸುವುದನ್ನು ತಿಳಿಯದೆ ಇದ್ದಾರೆ. ಆದುದರಿಂದ, ದೇವರು ಅವರ ಮಧ್ಯದಲ್ಲಿ ಸಿಂಹಗಳನ್ನು ಕಳುಹಿಸಿದ್ದಾರೆ. ಅವು ಅವರನ್ನು ಕೊಂದುಹಾಕುತ್ತವೆ,” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿ |