Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಯೆಹೋವನು ಇಸ್ರಾಯೇಲರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ, “ನೀವು ಅನ್ಯದೇವತೆಗಳಿಗೆ ಭಯಪಡಬಾರದು, ಅವುಗಳಿಗೆ ಕೈಮುಗಿಯಲೂ ಬಾರದು, ಆರಾಧಿಸಲೂಬಾರದು, ಯಜ್ಞವನ್ನರ್ಪಿಸಲೂಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಇಸ್ರಯೇಲರಿಗೆ ಸರ್ವೇಶ್ವರ, “ನೀವು ಅನ್ಯದೇವತೆಗಳನ್ನು ಆರಾಧಿಸಬಾರದು, ಅವುಗಳಿಗೆ ಕೈಮುಗಿಯಲೂಬಾರದು. ಸೇವೆಮಾಡಬಾರದು, ಬಲಿ ಅರ್ಪಿಸಲೂಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಯೆಹೋವನು ಇಸ್ರಾಯೇಲ್ಯರಿಗೆ ನೀವು ಅನ್ಯದೇವತೆಗಳನ್ನು ಆರಾಧಿಸಬಾರದು, ಅವುಗಳಿಗೆ ಕೈಮುಗಿಯಲೂ ಬಾರದು, ಸೇವೆಮಾಡಲೂ ಯಜ್ಞವರ್ಪಿಸಲೂಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಯೆಹೋವನು ಇಸ್ರೇಲಿನ ಜನರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ, “ನೀವು ಅನ್ಯದೇವತೆಗಳನ್ನು ಪೂಜಿಸಬಾರದು; ನೀವು ಅವುಗಳಿಗೆ ಕೈಮುಗಿಯಬಾರದು; ಅವುಗಳ ಸೇವೆಯನ್ನು ಮಾಡಬಾರದು; ಅವುಗಳಿಗೆ ಯಜ್ಞಗಳನ್ನು ಅರ್ಪಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಯೆಹೋವ ದೇವರು ಅವರ ಸಂಗಡ ಒಡಂಬಡಿಕೆ ಮಾಡಿ ಅವರಿಗೆ ಆಜ್ಞಾಪಿಸಿ, “ನೀವು ಇತರ ದೇವರುಗಳಿಗೆ ಭಯಪಡದೆ ಅವುಗಳಿಗೆ ಅಡ್ಡಬೀಳದೆ, ಅವುಗಳನ್ನು ಸೇವಿಸದೆ, ಅವುಗಳಿಗೆ ಬಲಿಯನ್ನು ಅರ್ಪಿಸದೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:35
19 ತಿಳಿವುಗಳ ಹೋಲಿಕೆ  

ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ, ನೀವು ಅಮೋರಿಯರ ಮಧ್ಯದಲ್ಲಿ ವಾಸಿಸುತ್ತಿದ್ದಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಆಜ್ಞಾಪಿಸಿದ್ದೆನು; ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ’” ಅಂದನು.


ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ ಅನ್ಯದೇವತೆಗಳಿಗೆ ಅಡ್ಡಬಿದ್ದು ಸೇವಿಸಿದರೆ ಯೆಹೋವನ ಕೋಪಾಗ್ನಿಯು ನಿಮ್ಮ ಮೇಲೆ ಉರಿಯುವುದು ಮತ್ತು ಆತನು ಕೊಟ್ಟ ಒಳ್ಳೆಯ ದೇಶದಿಂದ ನೀವು ತೆಗೆದುಹಾಕಲ್ಪಟ್ಟು ಬೇಗನೆ ನಾಶವಾದೀರಿ” ಎಂದನು.


ಉಳಿದಿರುವ ಈ ಅನ್ಯಜನಾಂಗಗಳ ಜೊತೆಯಲ್ಲಿ ಇಜ್ಜೋಡಾಗಬೇಡಿರಿ. ಅವರ ದೇವತೆಗಳ ಹೆಸರನ್ನು ಹೇಳಿ ಆರಾಧಿಸಲೂ ಬಾರದು ಪ್ರಮಾಣಮಾಡಲೂ ಬಾರದು. ಅವುಗಳಿಗೆ ಅಡ್ಡ ಬಿದ್ದು ಸೇವಿಸಲೂ ಬಾರದು.


ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಮಾತನಾಡಲಾರವು; ಹೊತ್ತುಕೊಂಡು ಹೋಗಬೇಕು, ನಡೆಯಲಾರವು. ಅವುಗಳಿಗೆ ಹೆದರಬೇಡಿರಿ, ಕೇಡುಮಾಡಲಾರವು; ಒಳ್ಳೆಯದನ್ನು ಮಾಡಲಿಕ್ಕೂ ಅವುಗಳಿಗೆ ಸಾಮರ್ಥ್ಯವಿಲ್ಲ” ಎಂದು ಹೇಳುತ್ತಾನೆ


ಆತನು ತಮ್ಮ ಪೂರ್ವಿಕರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ, ತಮಗೆ ಹೇಳಿಸಿದ ಒಡಂಬಡಿಕೆಯನ್ನು ತಿರಸ್ಕರಿಸಿ, ವ್ಯರ್ಥವಾದ ದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ, ಅವರನ್ನು ಅನುಸರಿಸಿದರು.


ನಾನಲ್ಲದೆ ನಿಮಗೆ ಬೇರೆ ದೇವರುಗಳು ಇರಬಾರದು.


ಅವುಗಳಿಗೆ ಅಡ್ಡಬೀಳಲೂ ಬಾರದು, ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದ್ದರಿಂದ, ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ಪೂರ್ವಿಕರ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳ ವರೆಗೆ ಬರಮಾಡುವವನಾಗಿದ್ದೇನೆ.


ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸಬೇಡಿರಿ; ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸಬೇಡಿರಿ; ಹೀಗಾದರೆ ನಾನು ನಿಮಗೆ ಯಾವ ಕೇಡನ್ನೂ ಮಾಡುವುದಿಲ್ಲ’ ಎಂಬುದೇ.


ನಮ್ಮ ದೇವರಾದ ಯೆಹೋವನು ಹೋರೇಬಿನಲ್ಲಿ ನಮ್ಮ ಸಂಗಡ ನಿಬಂಧನೆಯನ್ನು ಮಾಡಿದನು.


ಸುತ್ತಮುತ್ತಲಿರುವ ಜನಾಂಗಗಳು ಸೇವಿಸುವ ದೇವರುಗಳನ್ನು ನೀವು ಆರಾಧಿಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು