Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕೆಲವು ವರ್ಷಗಳಾದ ನಂತರ ಅರಸನಾದ ಹೋಶೇಯನು ಪ್ರತಿವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆಹೋದುದರಿಂದಲೂ, ಐಗುಪ್ತದ ಅರಸನಾದ ಸೋ ಎಂಬುವವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದ್ದರಿಂದಲೂ ಅಶ್ಶೂರದ ಅರಸನು ಇವನನ್ನು ದ್ರೋಹಿಯೆಂದು ತಿಳಿದು ಬಂಧಿಸಿ ಸೆರೆಯಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಕೆಲವು ವರ್ಷಗಳಾದನಂತರ, ಇವನು ಪ್ರತಿ ವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆಹೋದನು; ಅದು ಮಾತ್ರವಲ್ಲ, ಈಜಿಪ್ಟಿನ ಅರಸನಾದ ಸೋ ಎಂಬವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದ್ದನು. ಈ ಕಾರಣ ಅಸ್ಸೀರಿಯದ ಅರಸನು ಇವನನ್ನು ದ್ರೋಹಿಯೆಂದು ತಿಳಿದು, ಬಂಧಿಸಿ ಸೆರೆಯಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಕೆಲವು ವರುಷಗಳಾದನಂತರ ಇವನು ಪ್ರತಿವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆ ಹೋದದರಿಂದಲೂ ಐಗುಪ್ತದ ಅರಸನಾದ ಸೋ ಎಂಬವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದದರಿಂದಲೂ ಅಶ್ಶೂರದ ಅರಸನು ಇವನನ್ನು ದ್ರೋಹಿಯೆಂದು ತಿಳಿದು ಬಂಧಿಸಿ ಸೆರೆಯಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಹೋಶೇಯನು ಈಜಿಪ್ಟಿನ ರಾಜನಲ್ಲಿಗೆ ಸಂದೇಶಕರನ್ನು ಕಳುಹಿಸಿದ್ದನು. ಈಜಿಪ್ಟಿನ ರಾಜನಿಗೆ ಸೋ ಎಂಬ ಹೆಸರಿತ್ತು. ಹೋಶೇಯನು ಅಶ್ಶೂರದ ರಾಜನಿಗೆ ಪ್ರತಿವರ್ಷ ಕಪ್ಪಕಾಣಿಕಯನ್ನು ಕೊಡುತ್ತಿದ್ದನು, ಆದರೆ ಆ ವರ್ಷ ಕೊಡಲಿಲ್ಲ. ಆದರೆ ಅಶ್ಶೂರದ ರಾಜನಿಗೆ ಹೋಶೇಯನು ತನ್ನ ವಿರುದ್ಧ ಮಾಡಿರುವ ಒಳಸಂಚು ತಿಳಿದುಬಂದಿತು. ಆದ್ದರಿಂದ ಅಶ್ಶೂರದ ರಾಜನು ಹೋಶೇಯನನ್ನು ಬಂಧಿಸಿ, ಸೆರೆಯಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಅಸ್ಸೀರಿಯದ ಅರಸನು ಹೋಶೇಯನಲ್ಲಿ ಒಳಸಂಚನ್ನು ಕಂಡುಹಿಡಿದನು. ಏನೆಂದರೆ, ಹೋಶೇಯನು ಅಸ್ಸೀರಿಯದ ಅರಸನಿಗೆ ವರ್ಷ ವರ್ಷಕ್ಕೂ ಕೊಡುವ ಕಪ್ಪವನ್ನು ಕೊಡದೆ, ಈಜಿಪ್ಟಿನ ಅರಸನಾದ ಸೋ ಎಂಬವನ ಬಳಿಗೆ ದೂತರನ್ನು ಕಳುಹಿಸಿದನು. ಆದ್ದರಿಂದ ಅಸ್ಸೀರಿಯದ ಅರಸನು ಅವನನ್ನು ಕಟ್ಟಿ, ಸೆರೆಮನೆಯಲ್ಲಿ ಬಂಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:4
17 ತಿಳಿವುಗಳ ಹೋಲಿಕೆ  

ಹಿಜ್ಕೀಯನು, ‘ನಮ್ಮ ದೇವರಾದ ಯೆಹೋವನು ಅಶ್ಶೂರದ ಅರಸನ ಕೈಯಿಂದ ನಮ್ಮನ್ನು ರಕ್ಷಿಸುವನು’ ಎಂಬ ನಂಬಿಕೆ ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುತ್ತಿರುವುದು ನಿಮ್ಮನ್ನು ಹಸಿವೆ ನೀರಡಿಕೆಗಳಿಂದ ಸಾಯಿಸುವುದಕ್ಕಾಗಿಯೇ ಅಲ್ಲದೆ ಮತ್ತ್ಯಾವುದಕ್ಕೂ ಅಲ್ಲ.


ಚಿದ್ಕೀಯನ ಇಬ್ಬರು ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರಲ್ಲದೆ ಅವನಿಗೆ ಬೇಡಿಹಾಕಿ, ಅವನ ಎರಡು ಕಣ್ಣುಗಳನ್ನು ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು.


ಯೆಹೋವನು ಯೆರೂಸಲೇಮಿನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕೊನೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ನಾಶಮಾಡುವಷ್ಟು ರೋಷವುಳ್ಳವನಾಗಿದ್ದನು. ಆದರೆ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು.


ಯೆಹೋಯಾಕೀಮನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊರಟು ಬಂದನು. ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರ್ಷಗಳಾದ ನಂತರ ಅವನ ವಿರುದ್ಧವಾಗಿ ತಿರುಗಿ ಬಿದ್ದನು.


ಜಜ್ಜಿದ ದಂಟಿಗೆ ಸಮಾನವಾಗಿರುವ ಐಗುಪ್ತದಲ್ಲಿ ಭರವಸವಿಟ್ಟಿರುವೆಯೋ? ಒಬ್ಬನು ಅಂಥ ದಂಟಿನ ಮೇಲೆ ಕೈಯೂರಿಕೊಳ್ಳುವುದಾದರೆ ಅದು ಅವನ ಕೈಯನ್ನು ತಿವಿದು ಒಳಗೆ ಹೋಗುತ್ತದಲ್ಲವೇ; ಐಗುಪ್ತದ ಅರಸನಾದ ಫರೋಹನನಲ್ಲಿ ಭರವಸವಿಟ್ಟವರಿಗೆ ಇದೇ ಗತಿಯಾಗುವುದು.


ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ಯೆಹೋವನು ನಿಮ್ಮನ್ನೂ ಮತ್ತು ನೀವು ನೇಮಿಸಿಕೊಳ್ಳುವ ಅರಸರನ್ನೂ ಒಯ್ಯುವನು; ಅಲ್ಲಿ ನೀವು ಮರದ ದೇವರುಗಳನ್ನೂ ಮತ್ತು ಕಲ್ಲಿನ ದೇವರುಗಳನ್ನೂ ಸೇವಿಸುವಿರಿ.


ಅಶ್ಶೂರದ ಅರಸನಾದ ಶಲ್ಮನೆಸರನು ಹೋಶೇಯನಿಗೆ ವಿರುದ್ಧವಾಗಿ ಬಂದಾಗ, ಹೋಶೇಯನು ಅವನಿಗೆ ಅಧೀನನಾಗಿ ಕಪ್ಪಕೊಡುವವನಾದನು.


ಇದಲ್ಲದೆ, ಅಶ್ಶೂರದ ಅರಸನು ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಸಮಾರ್ಯಕ್ಕೆ ಬಂದು ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆ ಹಾಕಿದನು.


ಹರಟೆಹರಟುತ್ತಾರೆ, ಸುಳ್ಳಾಣೆಯಿಡುತ್ತಾರೆ, ಸಂಧಾನ ಮಾಡಿಕೊಳ್ಳುತ್ತಾರೆ; ಅಲ್ಲಿನ ನ್ಯಾಯವು ನೇಗಿಲಗೆರೆಗಳಲ್ಲಿ ಹುಟ್ಟುವ ವಿಷದ ಕಳೆಗಳಂತಿದೆ.


ಈಗ ನಿನ್ನ ಅರಸನು ಎಲ್ಲಿ? ನಿನ್ನ ಪಟ್ಟಣಗಳಲ್ಲೆಲ್ಲಾ ನಿನ್ನವರನ್ನು ಉದ್ಧರಿಸುವನೋ? ನನಗೆ ರಾಜನನ್ನೂ ರಾಜ್ಯಾಧಿಕಾರಿಗಳನ್ನೂ ದಯಪಾಲಿಸು ಎಂದು ನನ್ನನ್ನು ಕೇಳಿಕೊಂಡಿಯಷ್ಟೆ; ನಿನ್ನನ್ನು ರಕ್ಷಿಸಬಲ್ಲ ನಗರಪಾಲಕರು ಎಲ್ಲಿ?


ಅದು ಜನಾಂಗಗಳೊಳಗೆ ಜಾರರನ್ನು ಸಂಪಾದಿಸಿದರೂ, ಅದನ್ನು ನಾನು ಈಗ ಸೆರೆಗೆ ಒಳಪಡಿಸುವೆನು. ರಾಜಾಧಿರಾಜನು ಹೊರಿಸುವ ಹೊರೆಯಿಂದ ಅದು ಕುಗ್ಗಿಹೋಗಲಿಕ್ಕೆ ಆರಂಭವಾಗುವುದು.


ಯೆಹೋವನು ಯೆಹೂದದ ಮೇಲೆ ವ್ಯಾಜ್ಯಕ್ಕೆ ತೊಡಗಿದ್ದಾನೆ, ಯಾಕೋಬನ್ನು ಅದರ ನಡತೆಗೆ ತಕ್ಕ ಹಾಗೆ ದಂಡಿಸುವನು, ಅದರ ದುಷ್ಕೃತ್ಯಗಳಿಗೆ ಪ್ರತಿಕಾರಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು