2 ಅರಸುಗಳು 17:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇಸ್ರಾಯೇಲರ ಈ ದುರ್ಗತಿಗೆ, ಅವರ ದುರ್ನಡತೆಯೇ ಕಾರಣ. ಹೇಗೆಂದರೆ ಅವರು ತಮ್ಮನ್ನು ಐಗುಪ್ತದ ಅರಸನಾದ ಫರೋಹನ ಕೈಯಿಂದ ಬಿಡಿಸಿ, ಅವನ ರಾಜ್ಯದಿಂದ ಹೊರತಂದ ದೇವರಾದ ಯೆಹೋವನಿಗೆ ಭಯಪಡದೆ, ಪಾಪಮಾಡಿ ಅನ್ಯದೇವತೆಗಳನ್ನು ಸೇವಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಇಸ್ರಯೇಲರ ಈ ದುರ್ಗತಿಗೆ ಅವರ ದುರ್ನಡತೆಯೇ ಕಾರಣ: ಹೇಗೆಂದರೆ, ಅವರು ತಮ್ಮನ್ನು ಈಜಿಪ್ಟಿನ ಅರಸನಾದ ಫರೋಹನ ಕೈಯಿಂದ ಬಿಡಿಸಿ ಅವನ ರಾಜ್ಯದಿಂದ ಹೊರತಂದ ದೇವರಾದ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿ ಅನ್ಯದೇವತೆಗಳನ್ನು ಪೂಜಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇಸ್ರಾಯೇಲ್ಯರ ಈ ದುರ್ಗತಿಗೆ ಅವರ ದುರ್ನಡತೆಯೇ ಕಾರಣ; ಹೇಗಂದರೆ - ಅವರು ತಮ್ಮನ್ನು ಐಗುಪ್ತದ ಅರಸನಾದ ಫರೋಹನ ಕೈಯಿಂದ ಬಿಡಿಸಿ ಅವನ ರಾಜ್ಯದಿಂದ ಹೊರತಂದ ದೇವರಾದ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿ ಅನ್ಯದೇವತೆಗಳನ್ನು ಸೇವಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಇಸ್ರೇಲರು ತಮ್ಮ ದೇವರಾದ ಯೆಹೋವನ ವಿರುದ್ಧ ಪಾಪಗಳನ್ನು ಮಾಡಿದ್ದರಿಂದ ಇವೆಲ್ಲವೂ ಸಂಭವಿಸಿದವು. ಈಜಿಪ್ಟಿನ ರಾಜನಾದ ಫರೋಹನ ಆಳ್ವಿಕೆಯಿಂದ ಇಸ್ರೇಲರನ್ನು ತಪ್ಪಿಸಿ ಯೆಹೋವನು ಅವರನ್ನು ಈಜಿಪ್ಟ್ ದೇಶದಿಂದ ಹೊರತಂದಿದ್ದನು. ಆದರೆ ಇಸ್ರೇಲರು ಬೇರೆ ದೇವರುಗಳನ್ನು ಪೂಜಿಸಲು ಆರಂಭಿಸಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇಸ್ರಾಯೇಲರನ್ನು ಈಜಿಪ್ಟಿನ ಅರಸನಾದ ಫರೋಹನ ಕೈಯಿಂದ ಬಿಡಿಸಿ ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದ ತಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದರಿಂದ ಇದೆಲ್ಲವೂ ಆಯಿತು. ಅವರು ಬೇರೆ ದೇವರುಗಳನ್ನು ಆರಾಧಿಸಿದರು. ಅಧ್ಯಾಯವನ್ನು ನೋಡಿ |