Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ತಮ್ಮ ಎದುರಿನಿಂದ ಹೊರಡಿಸಿಬಿಟ್ಟ ಜನಾಂಗಗಳ ಮತ್ತು ಇಸ್ರಾಯೇಲ್ ರಾಜರ ದುರಾಚಾರಗಳನ್ನು ಅನುಸರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ತಮ್ಮ ನಾಡಿನಿಂದ ಸರ್ವೇಶ್ವರ ಹೊರಡಿಸಿಬಿಟ್ಟಿದ್ದ ಜನಾಂಗಗಳ ಮತ್ತು ಇಸ್ರಯೇಲ್ ರಾಜರ ದುರಾಚಾರಗಳನ್ನು ಅವರು ಅನುಸರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನು ತಮ್ಮ ಎದುರಿನಿಂದ ಹೊರಡಿಸಿಬಿಟ್ಟ ಜನಾಂಗಗಳ ಮತ್ತು ಇಸ್ರಾಯೇಲ್‍ರಾಜರ ದುರಾಚಾರಗಳನ್ನು ಅನುಸರಿಸಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅನ್ಯರು ಮಾಡುವಂತಹ ಕಾರ್ಯಗಳನ್ನೇ ಮಾಡತೊಡಗಿದರು. ಇಸ್ರೇಲರು ಈಜಿಪ್ಟಿನಿಂದ ತಮ್ಮ ದೇಶಕ್ಕೆ ಬಂದಾಗ ಯೆಹೋವನು ಅಲ್ಲಿಯ ನಿವಾಸಿಗಳನ್ನು ಬಲವಂತವಾಗಿ ಹೊರಗಟ್ಟಿದ್ದನು. ಆದರೆ ಇಸ್ರೇಲರು ತಮ್ಮನ್ನು ಆಳುವುದಕ್ಕಾಗಿ ದೇವರನ್ನು ತೊರೆದು ರಾಜರನ್ನು ಆರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರ ಮುಂದೆ ಯೆಹೋವ ದೇವರು ಓಡಿಸಿಬಿಟ್ಟಿದ್ದ ಜನರ ಮತ್ತು ಇಸ್ರಾಯೇಲ್ ರಾಜರ ದುರಾಚಾರಗಳನ್ನು ಅವರು ಅನುಸರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:8
19 ತಿಳಿವುಗಳ ಹೋಲಿಕೆ  

ಇದಲ್ಲದೆ, ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದುದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯವಾದ ಪೂಜಾಕಾರ್ಯಗಳನ್ನು ಅನುಸರಿಸಿ ತನ್ನ ಮಗನನ್ನು ಅಗ್ನಿಗೆ ಬಲಿಕೊಟ್ಟನು.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದಾಗ ಅಲ್ಲಿರುವ ಜನಗಳು ಮಾಡುವ ಅಸಹ್ಯವಾದ ಕೆಲಸಗಳನ್ನು ನೀವು ಅನುಸರಿಸಲೇಬಾರದು.


ನೀವು ವಾಸವಾಗಿದ್ದ ಐಗುಪ್ತ ದೇಶದ ಆಚಾರಗಳನ್ನು ಅನುಸರಿಸಬಾರದು; ನಾನು ನಿಮ್ಮನ್ನು ಬರಮಾಡುವ ಕಾನಾನ್ ದೇಶದ ಆಚರಣೆಗಳನ್ನು ನೀವು ಅನುಸರಿಸಬಾರದು, ಅವರಲ್ಲಿರುವ ನಿಯಮಗಳಿಗೆ ನೀವು ಒಳಗಾಗಬಾರದು.


ಒಮ್ರಿ ರಾಜನ ನಿಯಮಗಳೂ ಮತ್ತು ಅಹಾಬನ ಮನೆತನದ ಸಕಲ ಆಚಾರಗಳೂ ನಿನ್ನಲ್ಲಿ ಸಲ್ಲುತ್ತಿವೆ. ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ. ಆದಕಾರಣ ನಾನು ನಿನ್ನನ್ನು ಬೆರಗಿಗೂ, ನಿನ್ನ ನಿವಾಸಿಗಳನ್ನು ಅಪಹಾಸ್ಯಕ್ಕೂ ಗುರಿಮಾಡುವೆನು. ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.”


ಎಫ್ರಾಯೀಮು ವ್ಯರ್ಥಾಚಾರಗಳನ್ನು ಅನುಸರಿಸಲು ಮನಸ್ಸುಮಾಡಿದ ಕಾರಣ, ಅದು ದೇವರ ನ್ಯಾಯತೀರ್ಪಿಗೆ ಗುರಿಯಾಗಿ ಹಿಂಸಿಸಲ್ಪಟ್ಟಿದೆ, ಜಜ್ಜಲ್ಪಟ್ಟಿದೆ.


ಯೆಹೋವನು, “ಜನಾಂಗಗಳ ಆಚರಣೆಯನ್ನು ಅಭ್ಯಾಸ ಮಾಡಿಕೊಳ್ಳಬೇಡಿರಿ, ಜನಾಂಗಗಳು ಹೆದರುವ ಆಕಾಶದ ಉತ್ಪಾತಗಳಿಗೆ ನೀವು ಹೆದರಬೇಡಿರಿ.


ಅವರೊಡನೆ ಕೂಡಿಕೊಂಡು, ಅವರ ದುರಾಚಾರಗಳನ್ನು ಕಲಿತುಕೊಂಡರು.


ಅವನು ಯೆಹೋವನು ಇಸ್ರಾಯೇಲರ ರಾಜ್ಯದಿಂದ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ಯೆಹೂದ್ಯರೂ ಸಹ ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಇಸ್ರಾಯೇಲರ ಪದ್ಧತಿಯನ್ನು ಅನುಸರಿಸಿದರು.


ಅರಸನಾದ ಆಹಾಜನು ಅಶ್ಶೂರದ ಅರಸನಾದ ತಿಗ್ಲತ್ಪಿಲೆಸೆರನ ದರ್ಶನಕ್ಕಾಗಿ ದಮಸ್ಕಕ್ಕೆ ಹೋದನು. ಅವನು ಅಲ್ಲಿದ್ದ ಯಜ್ಞವೇದಿಯನ್ನು ಕಂಡು, ಅದರ ಒಂದು ಪ್ರತಿಮೆಯನ್ನೂ, ಅದರ ಎಲ್ಲಾ ಅಲಂಕಾರದ ನಕ್ಷೆಯನ್ನೂ ಬರೆಯಿಸಿ, ಯಾಜಕನಾದ ಊರೀಯನಿಗೆ ಕಳುಹಿಸಿದನು.


ಯೆಹೋವನು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆಯು ಕೇವಲ ಅಸಹ್ಯವಾಗಿತ್ತು.


ಅವನು ಬಹಳವಾಗಿ ಆಲೋಚಿಸಿ, ಕಡೆಯಲ್ಲಿ ಬಂಗಾರದ ಎರಡು ಬಸವನ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲರಿಗೆ, “ನೀವು ಜಾತ್ರೆಗಾಗಿ ಯೆರೂಸಲೇಮಿಗೆ ಹೋದದ್ದು ಸಾಕಾಯಿತು, ಇಗೋ, ನಿಮ್ಮನ್ನು ಐಗುಪ್ತದಿಂದ ಕರೆತಂದ ದೇವರುಗಳು ಇಲ್ಲಿರುತ್ತವೆ” ಎಂದು ಹೇಳಿದನು.


ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಜನಾಂಗಗಳಿಗಿಂತಲೂ, ಸುತ್ತಲಿನ ದೇಶಗಳವರಿಗಿಂತಲೂ ಹೆಚ್ಚು ಅಧರ್ಮವನ್ನು ನಡೆಸಿದೆ; ಅದರ ನಿವಾಸಿಗಳು ನನ್ನ ನಿಯಮಗಳನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.”


ಅವರ ದೇವತೆಗಳಿಗೆ ನೀವು ಅಡ್ಡಬಿದ್ದು ನಮಸ್ಕರಿಸಲೂ ಬಾರದು, ಅವರ ಆಚರಣೆಗಳನ್ನು ಅನುಸರಿಸಲೇ ಬಾರದು. ಆ ಜನಗಳನ್ನು ನಿರ್ಮೂಲಮಾಡಿ ವಿಗ್ರಹಸ್ತಂಭಗಳನ್ನು ನಾಶಮಾಡಬೇಕು.


“ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು; ಕೆತ್ತಿದ ಪ್ರತಿಮೆಯನ್ನಾಗಲಿ ಅಥವಾ ಕಲ್ಲು ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬಾರದು; ಅಡ್ಡಬೀಳುವುದಕ್ಕಾಗಿ ವಿಚಿತ್ರವಾಗಿ ಕೆತ್ತಿದ ಕಲ್ಲುಗಳನ್ನು ನಿಮ್ಮ ದೇಶದಲ್ಲಿ ಇಡಬಾರದು; ನಾನೇ ಯೆಹೋವನೆಂಬ ನಿಮ್ಮ ದೇವರು.


ಅವರು ಅದನ್ನು ಲಕ್ಷ್ಯಕ್ಕೆ ತಂದುಕೊಳ್ಳದೆ ತಮ್ಮ ಹಿಂದಿನ ಪದ್ಧತಿಗಳನ್ನೇ ಅನುಸರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು