Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲರ ಅರಸನೂ ಏಲನ ಮಗನಾದ ಹೋಶೇಯನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಯೆಹೂದ ರಾಜನಾದ ಆಹಾಜನ ಮಗ ಹಿಜ್ಕೀಯನು ಆಳ್ವಿಕೆಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲರ ಅರಸನೂ ಏಲನ ಮಗನೂ ಆದ ಹೋಶೇಯನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಜುದೇಯ ರಾಜನಾದ ಆಹಾಜನ ಮಗ ಹಿಜ್ಕೀಯನು ಆಳತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲ್ಯರ ಅರಸನೂ ಏಲನ ಮಗನೂ ಆದ ಹೋಶೇಯನ ಆಳಿಕೆಯ ಮೂರನೆಯ ವರುಷದಲ್ಲಿ ಯೆಹೂದರಾಜನಾದ ಆಹಾಜನ ಮಗ ಹಿಜ್ಕೀಯನು ಆಳತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅಹಾಜನ ಮಗನಾದ ಹಿಜ್ಕೀಯನು ಯೆಹೂದದ ರಾಜನಾದನು. ಏಲನ ಮಗನಾದ ಹೋಶೇಯನು ಇಸ್ರೇಲಿನ ರಾಜನಾಗಿದ್ದ ಮೂರನೆಯ ವರ್ಷದಲ್ಲಿ ಹಿಜ್ಕೀಯನು ಆಳಲಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲಿನ ಅರಸನಾಗಿರುವ ಏಲನ ಮಗ ಹೋಶೇಯನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಯೆಹೂದದ ಅರಸನಾಗಿದ್ದ ಆಹಾಜನ ಮಗ ಹಿಜ್ಕೀಯನು ಆಳಲು ಆರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:1
12 ತಿಳಿವುಗಳ ಹೋಲಿಕೆ  

ಆಹಾಜನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನನ್ನು ಇಸ್ರಾಯೇಲ್ ರಾಜಸ್ಮಶಾನದಲ್ಲಿ ಹೂಣಿಡದೆ ಯೆರೂಸಲೇಮ್ ಪಟ್ಟಣದೊಳಗಣ ಒಂದು ಸ್ಥಳದಲ್ಲಿ ಹೂಣಿಟ್ಟರು, ಅವನ ನಂತರ ಅವನ ಮಗನಾದ ಹಿಜ್ಕೀಯನು ಅರಸನಾದನು.


ಯೋತಾಮನ ಮಗ ಆಹಾಜ; ಆಹಾಜನ ಮಗ ಹಿಜ್ಕೀಯನು. ಹಿಜ್ಕೀಯನ ಮಗ ಮನಸ್ಸೆಯು.


ಆಹಾಜನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನ ಪಟ್ಟಣದೊಳಗೆ ಅವನ ಕುಟುಂಬ ಸ್ಮಶಾನದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಹಿಜ್ಕೀಯನು ಅರಸನಾದನು.


ಇಸ್ರಾಯೇಲರ ಅರಸನೂ ಏಲನ ಮಗನೂ ಆದ ಹೋಶೇಯನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅಂದರೆ ಹಿಜ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಶಲ್ಮನೆಸರನು ಸಮಾರ್ಯಕ್ಕೆ ವಿರೋಧವಾಗಿ ಬಂದು ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆ ಹಾಕಿ ಅದನ್ನು ವಶಪಡಿಸಿಕೊಂಡನು.


ಆಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಇವನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರಲಿಲ್ಲ. ತನ್ನ ಪೂರ್ವಿಕನಾದ ದಾವೀದನ ಮಾರ್ಗವನ್ನು ಬಿಟ್ಟು ಇಸ್ರಾಯೇಲರ ಮಾರ್ಗವನ್ನು ಹಿಡಿದನು.


ಆಗ ಏಲನ ಮಗನಾದ ಹೋಶೇಯನು, ರೆಮಲ್ಯನ ಮಗನಾದ ಪೆಕಹನಿಗೆ ವಿರುದ್ಧವಾಗಿ ಒಳಸಂಚು ಮಾಡಿ, ಇವನನ್ನು ಉಜ್ಜೀಯನ ಮಗನಾದ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.


ಯೆಹೂದದ ಅರಸನಾದ ಆಹಾಜನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಏಲನ ಮಗನಾದ ಹೋಶೇಯನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಒಂಭತ್ತು ವರ್ಷ ಆಳಿದನು.


ಹಿಜ್ಕೀಯನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷ ಆಳಿದನು. ಜೆಕರ್ಯನ ಮಗಳಾದ ಅಬೀಯ ಎಂಬಾಕೆಯು ಅವನ ತಾಯಿ.


ಯೆಹೂದದ ಅರಸನಾದ ಯೋಥಾಮ, ಆಹಾಜ ಮತ್ತು ಹಿಜ್ಕೀಯ ಇವರ ಕಾಲದಲ್ಲಿ ಸಮಾರ್ಯದ ಮತ್ತು ಯೆರೂಸಲೇಮಿನ ವಿಷಯವಾಗಿ ಮೋರೆಷೆತ್ ಊರಿನವನಾದ ಮೀಕನಿಗೆ ಕೇಳಿ ಬಂದ ಯೆಹೋವನ ವಾಕ್ಯ.


ಸರ್ವಾಂಗಹೋಮ ಸಮರ್ಪಣೆಯು ಮುಗಿದ ಮೇಲೆ ಅರಸನೂ ಅವನ ಜೊತೆಯಲ್ಲಿದ್ದವರೆಲ್ಲರೂ ಸಾಷ್ಟಾಂಗ ನಮಸ್ಕಾರ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು