2 ಅರಸುಗಳು 18:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನನ್ನ ಒಡೆಯನಾದ ಅಶ್ಶೂರದ ಅರಸನೊಂದಿಗೆ ಸವಾಲು ಮಾಡಿನೋಡು. ಆಗ ಕುದುರೆ ಸವಾರರನ್ನು ಬಳಸಲು ನಿನಗೆ ಸಾಮರ್ಥ್ಯವಿದ್ದರೆ ಆತನು ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆದುದರಿಂದ ಬಾ, ಬಂದು ನನ್ನ ಒಡೆಯರಾದ ಅಸ್ಸೀರಿಯದ ಅರಸನೊಂದಿಗೆ ಒಂದು ಒಪ್ಪಂದ ಮಾಡಿಕೊ. ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುವನು; ಅವುಗಳ ಮೇಲೆ ಕೂರಿಸುವಷ್ಟು ಮಂದಿ ಸವಾರರು ನಿನಗಿದ್ದಾರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನನ್ನ ಒಡೆಯನಾದ ಅಶ್ಶೂರದ ಅರಸನೊಂದಿಗೆ ಪಂಥಹಾಕುವದಕ್ಕೆ ನಿನಗೆ ಮನಸ್ಸುಂಟೋ? ಹಾಗಾದರೆ ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ; ನೀನು ಎಷ್ಟು ಮಂದಿ ಸವಾರರನ್ನು ಅವುಗಳ ಮೇಲೆ ಕುಳ್ಳಿರಿಸುವಿಯೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ‘ಈಗ ನಮ್ಮ ಒಡೆಯನಾದ ಅಶ್ಶೂರದ ರಾಜನೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊ. ನಿನ್ನಲ್ಲಿ ಸವಾರಿಮಾಡಬಲ್ಲ ಸವಾರರು ಇದ್ದರೆ ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆಂದು ನಾನು ಪ್ರಮಾಣ ಮಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 “ ‘ಹಾಗಾದರೆ ಈಗ ನೀನು ಅಸ್ಸೀರಿಯದ ಅರಸನಾದ ನನ್ನ ಯಜಮಾನನೊಂದಿಗೆ ಒಪ್ಪಂದ ಮಾಡಿಕೋ, ಆಗ ನಿನಗೆ ಎರಡು ಸಾವಿರ ಕುದುರೆಸವಾರರನ್ನು ಬಳಸಲು ಸಾಮರ್ಥ್ಯವಿದ್ದರೆ ನಾನು ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆ. ಅಧ್ಯಾಯವನ್ನು ನೋಡಿ |