2 ಅರಸುಗಳು 18:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆಗ ಹಿಲ್ಕೀಯನ ಮಗನಾದ ಎಲ್ಯಾಕೀಮ್, ಶೆಬ್ನ, ಯೋವ ಎಂಬುವವರು ರಬ್ಷಾಕೆಗೆ, “ನೀನು ಮಾತನಾಡುವುದು ಪೌಳಿಗೋಡೆಯ ಮೇಲಿರುವ ಯೆಹೂದ್ಯರಿಗೂ ಕೇಳಿಸುತ್ತದೆ. ಆದುದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು, ಅದು ನಮಗೆ ತಿಳಿಯುತ್ತದೆ. ಆದರೆ ಯೂದಾಯ ಭಾಷೆಯಲ್ಲಿ ಮಾತನಾಡಬೇಡ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆಗ ಹಿಲ್ಕೀಯನ ಮಗ ಎಲ್ಯಾಕೀಮ್, ಶೆಬ್ನ ಮತ್ತು ಯೋವ ಎಂಬವರು ರಬ್ಷಾಕೆಗೆ, “ದಯವಿಟ್ಟು ನಿಮ್ಮ ಸೇವಕರಾದ ನಮ್ಮೊಡನೆ ಅರಾಮಾಯಿಕ್ ಭಾಷೆಯಲ್ಲಿ ಮಾತನಾಡಿ. ಅದು ನಮಗೆ ಅರ್ಥವಾಗುತ್ತದೆ. ಆದರೆ ಹಿಬ್ರೂ ಭಾಷೆಯಲ್ಲಿ ಮಾತನಾಡಬೇಡಿ. ಅದು ಪೌಳಿಗೋಡೆಯ ಮೇಲಿರುವವರಿಗೂ ಅರ್ಥವಾಗುತ್ತದೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆಗ ಹಿಲ್ಕೀಯನ ಮಗನಾದ ಎಲ್ಯಾಕೀಮ್, ಶೆಬ್ನ, ಯೋವ ಎಂಬವರು ರಬ್ಷಾಕೆಗೆ - ನೀನು ಮಾತಾಡುವದು ಪೌಳಿಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತಾಡು; ಅದು ನಮಗೆ ತಿಳಿಯುತ್ತದೆ. ಆದರೆ ಯೂದಾಯ ಭಾಷೆಯಲ್ಲಿ ಮಾತಾಡಬೇಡ ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ನಂತರ ಹಿಲ್ಕೀಯನ ಮಗನಾದ ಎಲ್ಯಾಕೀಮ್, ಶೆಬ್ನ ಮತ್ತು ಯೋವ ಎಂಬುವರು ಸೇನಾಧಿಪತಿಗೆ, “ದಯವಿಟ್ಟು ನಮ್ಮೊಂದಿಗೆ ಅರಾಮ್ಯರ ಭಾಷೆಯಲ್ಲಿ ಮಾತನಾಡು. ನಾವು ಆ ಭಾಷೆಯನ್ನು ಅರ್ಥಮಾಡಿಕೊಳ್ಳುತ್ತೇವೆ. ಗೋಡೆಯ ಮೇಲಿರುವ ಜನರಿಗೆ ನಮ್ಮ ಮಾತುಗಳು ಕೇಳುವುದರಿಂದ ಯೆಹೂದದ ಭಾಷೆಯಲ್ಲಿ ನಮ್ಮೊಂದಿಗೆ ಮಾತನಾಡಬೇಡ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆಗ ಹಿಲ್ಕೀಯನ ಮಗ ಎಲ್ಯಾಕೀಮ್, ಶೆಬ್ನ, ಯೋವ ಎಂಬುವರು ರಬ್ಷಾಕೆಗೆ, “ನೀನು ಮಾತನಾಡುವುದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ ಆದ್ದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು: ಅದು ನಮಗೆ ತಿಳಿಯುತ್ತದೆ ಆದರೆ ಹಿಬ್ರಿಯ ಭಾಷೆಯಲ್ಲಿ ಮಾತನಾಡಬೇಡ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |