2 ಅರಸುಗಳು 18:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ ಆಹಾರ, ದ್ರಾಕ್ಷಿತೋಟ, ಎಣ್ಣೆಮರ, ಜೇನುತುಪ್ಪವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು. ನೀವು ಸಾಯುವುದಿಲ್ಲ, ಬದುಕುವಿರಿ. ಯೆಹೋವನು ನಿಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುವ ಹಿಜ್ಕೀಯನಿಗೆ ಕಿವಿಗೊಡಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಸ್ವಲ್ಪಕಾಲವಾದ ನಂತರ ನಾನು ಬಂದು ನಿಮ್ಮನ್ನು ಇನ್ನೊಂದು ನಾಡಿಗೆ ಕರೆದುಕೊಂಡು ಹೋಗುವೆನು. ಅಲ್ಲಿ ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷೀತೋಟ, ಎಣ್ಣೇಮರ, ಜೇನುತುಪ್ಪ ಸಮೃದ್ಧಿಯಾಗಿರುವುವು. ನಿಮ್ಮ ನಾಡಿಗೆ ಸರಿಸಮಾನವಾಗಿರುವುವು; ನೀವು ಸಾಯುವುದಿಲ್ಲ, ಬದುಕುವಿರಿ; ‘ಸರ್ವೇಶ್ವರ ನಮ್ಮನ್ನು ರಕ್ಷಿಸುವರು’ ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಮೂಡಿಸದಂತೆ ಎಚ್ಚರಿಕೆಯಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಸ್ವಲ್ಪ ಕಾಲವಾದನಂತರ ನಾನು ಬಂದು ನಿಮ್ಮನ್ನು ಧಾನ್ಯ ದ್ರಾಕ್ಷಾರಸ ಆಹಾರ ದ್ರಾಕ್ಷೇತೋಟ ಎಣ್ಣೇಮರ ಜೇನುತುಪ್ಪ ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರಕೊಂಡುಹೋಗುವೆನು; ನೀವು ಸಾಯುವದಿಲ್ಲ, ಬದುಕುವಿರಿ. ಯೆಹೋವನು ನಮ್ಮನ್ನು ರಕ್ಷಿಸುವನು ಎಂದು ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವದಕ್ಕೆ ಪ್ರಯತ್ನಿಸುವ ಹಿಜ್ಕೀಯನಿಗೆ ಕಿವಿಗೊಡಬೇಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ನಾನು ಬಂದು, ನಿಮ್ಮನ್ನು ಈ ದೇಶಕ್ಕೆ ಸಮಾನವಾದ ಬೇರೊಂದು ದೇಶಕ್ಕೆ ಕರೆದೊಯ್ಯುವವರೆಗೆ ನೀವು ಹೀಗೆ ಮಾಡಬಹುದು. ಆ ದೇಶವು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಆಲೀವ್ ಮರ ಮತ್ತು ಜೇನುತುಪ್ಪ ಮುಂತಾದವುಗಳಿಂದ ಸಮೃದ್ಧಿಯಾಗಿದೆ. ನೀವು ಅಲ್ಲಿ ಸಾಯದೆ ಜೀವಿಸಬಹುದು. ಆದರೆ ಹಿಜ್ಕೀಯನ ಮಾತುಗಳನ್ನು ಕೇಳಬೇಡಿ! ಅವನು ನಿಮ್ಮ ಮನಸ್ಸನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾನೆ. “ಯೆಹೋವನು ನಮ್ಮನ್ನು ರಕ್ಷಿಸುತ್ತಾನೆ” ಎಂದು ಅವನು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಸ್ವಲ್ಪ ಕಾಲವಾದ ನಂತರ ನಾನು ಬಂದು, ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಎಣ್ಣೆಮರಗಳು, ಜೇನು ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾಗಿರುವ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು. ಜೀವವನ್ನು ಆಯ್ದುಕೊಳ್ಳಿರಿ, ಮರಣವನ್ನಲ್ಲ. “ ‘ಯೆಹೋವ ದೇವರು ನಮ್ಮನ್ನು ರಕ್ಷಿಸುವರು,’ ಎಂದು ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸಿ ತಪ್ಪು ಮಾರ್ಗದಲ್ಲಿ ನಡೆಸುವಾಗ, ಅವನ ಮಾತನ್ನು ಕೇಳಬೇಡಿರಿ. ಅಧ್ಯಾಯವನ್ನು ನೋಡಿ |