2 ಅರಸುಗಳು 18:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
4 ಪೂಜಾಸ್ಥಳಗಳನ್ನು ಹಾಳುಮಾಡಿ, ಕಲ್ಲುಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕತ್ತರಿಸಿ ಹಾಕಿದನು. ಮೋಶೆಯು ಮಾಡಿಸಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಇಸ್ರಾಯೇಲರು ಅದಕ್ಕೆ ಆ ವರೆಗೂ ಧೂಪವನ್ನರ್ಪಿಸುತ್ತಿದ್ದರು. ಅದಕ್ಕೆ “ನೆಹುಷ್ಟಾನ್” ಎಂಬ ಹೆಸರಿತ್ತು.
4 ಪೂಜಾಸ್ಥಳಗಳನ್ನು ಹಾಳುಮಾಡಿ ಕಲ್ಲುಕಂಬಗಳನ್ನು ಒಡೆದು ಅಶೇರವಿಗ್ರಹ ಸ್ತಂಭಗಳನ್ನು ಕಡಿದುಹಾಕಿದನು; ಮೋಶೆಯು ಮಾಡಿಸಿದ ತಾಮ್ರಸರ್ಪವನ್ನು ಚೂರು ಚೂರು ಮಾಡಿದನು. ಇಸ್ರಾಯೇಲ್ಯರು ಅದಕ್ಕೆ ಆವರೆಗೂ ಧೂಪಸುಡುತ್ತಿದ್ದರು. ಅದಕ್ಕೆ ನೆಹುಷ್ಟಾನ್ ಎಂಬ ಹೆಸರಿತ್ತು;
4 ಹಿಜ್ಕೀಯನು ಉನ್ನತಸ್ಥಳಗಳನ್ನು ನಾಶಗೊಳಿಸಿದನು. ಅವನು ಸ್ಮಾರಕಕಲ್ಲುಗಳನ್ನು ಒಡೆದುಹಾಕಿದನು ಮತ್ತು ಅಶೇರ ಕಲ್ಲುಗಳನ್ನು ಕತ್ತರಿಸಿಹಾಕಿದನು. ಆ ಸಮಯದಲ್ಲಿ ಇಸ್ರೇಲರು ಮೋಶೆಯು ಮಾಡಿದ ತಾಮ್ರಸರ್ಪಕ್ಕೆ ಧೂಪವನ್ನು ಸುಡುತ್ತಿದ್ದರು. ಈ ತಾಮ್ರಸರ್ಪವನ್ನು “ನೆಹುಷ್ಟಾನ್” ಎಂದು ಕರೆಯುತ್ತಿದ್ದರು. ಜನರು ಈ ಸರ್ಪವನ್ನು ಆರಾಧಿಸುತ್ತಿದ್ದುದರಿಂದ ಹಿಜ್ಕೀಯನು ಈ ತಾಮ್ರಸರ್ಪವನ್ನು ಒಡೆದು ಚೂರುಚೂರು ಮಾಡಿದನು.
4 ಹಿಜ್ಕೀಯನು ಉನ್ನತ ಪೂಜಾಸ್ಥಳಗಳನ್ನು ತೆಗೆದುಹಾಕಿ, ವಿಗ್ರಹಗಳನ್ನು ಒಡೆದುಬಿಟ್ಟು, ಅಶೇರ ಸ್ತಂಭಗಳನ್ನು ಕಡಿದುಹಾಕಿದನು. ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಮುರಿದುಬಿಟ್ಟನು. ಏಕೆಂದರೆ ಆ ದಿವಸಗಳವರೆಗೂ ಇಸ್ರಾಯೇಲರು ಅದಕ್ಕೆ ಧೂಪ ಸುಡುತ್ತಿದ್ದರು. ಅದನ್ನು ನೆಹುಷ್ಟಾನ್ ಎಂದು ಕರೆಯುತ್ತಿದ್ದರು.
ಇದಾದನಂತರ ನೆರೆದುಬಂದ ಇಸ್ರಾಯೇಲರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ, ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಲ್ಲದೆ ಎಫ್ರಾಯೀಮ್, ಮನಸ್ಸೆ ಪ್ರಾಂತ್ಯಗಳಲ್ಲಿಯೂ ಯಾವುದೊಂದನ್ನೂ ಉಳಿಸಲಿಲ್ಲ. ಆ ಮೇಲೆ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.
ಒಂದು ವೇಳೆ ನೀವು, ‘ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಟ್ಟಿದ್ದೇವೆ’ ಎಂದು ಹೇಳುವುದಾದರೆ ಹಿಜ್ಕೀಯನು, ‘ಯೆರೂಸಲೇಮಿನ ಯಜ್ಞವೇದಿಯ ಮುಂದೆಯೇ ಆರಾಧನೆಮಾಡಬೇಕು’ ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾಸ್ಥಳಗಳನ್ನೂ, ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದ್ದಾನಲ್ಲಾ,
ಅವನು ತಪ್ಪದೆ ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದರೂ, ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ಆ ಸ್ಥಳಗಳಲ್ಲಿ ಯಜ್ಞಮಾಡುತ್ತಾ ಧೂಪಹಾಕುತ್ತಾ ಇದ್ದರು.
ಊರಿನ ಜನರು ಹೊತ್ತಾರೆಯಲ್ಲೆದ್ದು ಬಾಳನ ಯಜ್ಞವೇದಿಯು ಕೆಡವಲ್ಪಟ್ಟಿರುವುದನ್ನೂ, ಅದರ ಸಮೀಪದಲ್ಲಿದ್ದ ವಿಗ್ರಹಸ್ತಂಭವು ಕಡಿಯಲ್ಪಟ್ಟಿರುವುದನ್ನೂ, ಹೊಸದಾಗಿ ಕಟ್ಟಿದ ಯಜ್ಞವೇದಿಯ ಮೇಲೆ ಎರಡನೆಯ ಹೋರಿಯು ಯಜ್ಞವಾದದ್ದನ್ನೂ ಕಂಡು,
ಅದೇ ದಿನ ರಾತ್ರಿಯಲ್ಲಿ ಯೆಹೋವನು ಅವನಿಗೆ, “ನೀನು ನಿನ್ನ ತಂದೆಯ ಹೋರಿಗಳಲ್ಲಿ ಒಂದು ಚಿಕ್ಕ ಹೋರಿಯನ್ನೂ, ಏಳು ವರ್ಷದ ಇನ್ನೊಂದು ಹೋರಿಯನ್ನೂ ತೆಗೆದುಕೊಂಡು ಹೋಗಿ ನಿನ್ನ ತಂದೆಯು ಕಟ್ಟಿರುವ ಬಾಳನ ಯಜ್ಞವೇದಿಯನ್ನು ಕೆಡವಿ, ಅದರ ಬಳಿಯಲ್ಲಿರುವ ಅಶೇರವೆಂಬ ವಿಗ್ರಹಸ್ತಂಭವನ್ನು ಕಡಿದುಹಾಕು.
ಆದುದರಿಂದ ನೀವು ಹೀಗೆ ಮಾಡಬೇಕು, ಅವರ ಬಲಿಪೀಠಗಳನ್ನು ಕೆಡವಬೇಕು; ಅವರ ಪವಿತ್ರವಾದ ಕಲ್ಲಿನ ಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದು, ಅವರ ದೇವತಾಪ್ರತಿಮೆಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದುಹಾಕುವೆನು; ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಬೀಸಾಡುವೆನು; ನಾನು ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.
ಆದರೂ, ನೀನು ದೇಶದೊಳಗಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದು ಹಾಕಿ, ಯೆಹೋವನ ಭಕ್ತಿಯಲ್ಲಿ ಮನಸ್ಸಿಟ್ಟಿದ್ದರಿಂದ ನಿನ್ನಲ್ಲಿ ಒಳ್ಳೆಯದು ಉಂಟೆಂದು ತಿಳಿದು ಬಂದಿದೆ” ಎಂಬುದಾಗಿ ಹೇಳಿದನು.
ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ, “ಉದಯಕಾಲದಲ್ಲಿ ಸರ್ವಾಂಗಹೋಮವನ್ನೂ, ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ, ಅರಸನು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ ಇವುಗಳನ್ನೂ, ಜನರು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನೂ ಈ ಮಹಾವೇದಿಯ ಮೇಲೆ ಸಮರ್ಪಿಸಬೇಕು ಮತ್ತು ಸರ್ವಾಂಗಹೋಮಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿಮುಕಿಸಬೇಕು. ತಾಮ್ರ ಯಜ್ಞವೇದಿಯನ್ನು ಕುರಿತಾಗಿ ನಾನೇ ಆಲೋಚಿಸಿ ನೋಡಿಕೊಳ್ಳುವೆನು” ಎಂದು ಹೇಳಿದನು.
ಆದರೆ ಇವನ ಕಾಲದಲ್ಲಿ ಪೂಜಾಸ್ಥಳಗಳು ಇನ್ನೂ ತೆಗೆಯಲ್ಪಟ್ಟಿರಲಿಲ್ಲ. ಆದುದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಸಮರ್ಪಿಸುತ್ತಿದ್ದರು. ಯೆಹೋವನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿದವನು ಇವನೇ.
ತರುವಾಯ ಅರಸನು ಮಹಾಯಾಜಕನಾದ ಹಿಲ್ಕೀಯನಿಗೆ, ಅವನ ಕೈಕೆಳಗಿರುವ ಯಾಜಕರ ಮತ್ತು ದ್ವಾರಪಾಲಕರ ಮುಖಾಂತರವಾಗಿ ಬಾಳ್, ಅಶೇರ್ ಎಂಬ ದೇವತೆಗಳಿಗಾಗಿಯೂ, ಆಕಾಶಸೈನ್ಯಗಳಿಗಾಗಿಯೂ, ಉಪಯೋಗಿಸುತ್ತಿದ್ದ ಎಲ್ಲಾ ಸಾಮಾನುಗಳನ್ನು ಯೆಹೋವನ ಆಲಯದಿಂದ ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಬಯಲಿನಲ್ಲಿ ಅವುಗಳನ್ನು ಸುಟ್ಟು ಬೂದಿಯನ್ನು ಬೇತೇಲಿಗೆ ಕಳುಹಿಸಿದನು.
ತನ್ನ ತಂದೆಯಾದ ಹಿಜ್ಕೀಯನು ತೆಗೆದು ಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ ಇಸ್ರಾಯೇಲರ ಅರಸನಾದ ಅಹಾಬನಂತೆ ಬಾಳದೇವತೆಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.
ಒಂದು ವೇಳೆ ನೀನು, ನಮ್ಮ ದೇವರಾದ ಯೆಹೋವನನ್ನು ನಂಬಿಕೊಂಡಿದ್ದೇವೆ’ ಎಂದು ಹೇಳಬಹುದು. ಹಿಜ್ಕೀಯನು, ‘ನೀವು ಯೆರೂಸಲೇಮಿನಲ್ಲಿರುವ ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕು’ ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ಆ ಯೆಹೋವನ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದನಲ್ಲಾ!
ನೀವು ಆ ಬೆಂಕಿಯ ಜ್ವಾಲೆಯ ದೆಸೆಯಿಂದ ಭಯಪಟ್ಟು, ಬೆಟ್ಟವನ್ನು ಹತ್ತದೆ ಇದ್ದುದರಿಂದ ನಾನು ಯೆಹೋವನಿಗೂ ಮತ್ತು ನಿಮಗೂ ನಡುವೆ ನಿಂತು ಆತನು ಹೇಳಿದ ಮಾತುಗಳನ್ನು ನಿಮಗೆ ತಿಳಿಸಿದೆನು. ಆತನು ಹೇಳಿದ್ದೇನೆಂದರೆ,