Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇಸ್ರಾಯೇಲರ ಅರಸನೂ ಏಲನ ಮಗನೂ ಆದ ಹೋಶೇಯನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅಂದರೆ ಹಿಜ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಶಲ್ಮನೆಸರನು ಸಮಾರ್ಯಕ್ಕೆ ವಿರೋಧವಾಗಿ ಬಂದು ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆ ಹಾಕಿ ಅದನ್ನು ವಶಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇಸ್ರಯೇಲರ ಅರಸನೂ ಏಲನ ಮಗನೂ ಆದ ಹೋಶೇಯನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅಂದರೆ ಹಿಜ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಅಸ್ಸೀರಿಯದ ಅರಸನಾದ ಶಲ್ಮನೆಸೆರನು ಸಮಾರಿಯಕ್ಕೆ ವಿರುದ್ಧ ದಂಡೆತ್ತಿಬಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇಸ್ರಾಯೇಲ್ಯರ ಅರಸನೂ ಏಲನ ಮಗನೂ ಆದ ಹೋಶೇಯನ ಆಳಿಕೆಯ ಏಳನೆಯ ವರುಷದಲ್ಲಿ ಅಂದರೆ ಹಿಜ್ಕೀಯನ ಆಳಿಕೆಯ ನಾಲ್ಕನೆಯ ವರುಷದಲ್ಲಿ ಅಶ್ಶೂರದ ಅರಸನಾದ ಶಲ್ಮನೆಸೆರನು ಸಮಾರ್ಯಕ್ಕೆ ವಿರೋಧವಾಗಿ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅಶ್ಶೂರದ ರಾಜನಾದ ಶಲ್ಮನೆಸರನು ಸಮಾರ್ಯದ ವಿರುದ್ಧ ಹೋರಾಡಲು ಹೋದನು. ಅವನ ಸೈನ್ಯವು ನಗರವನ್ನು ಸುತ್ತುವರಿಯಿತು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ನಾಲ್ಕನೆಯ ವರ್ಷದಲ್ಲಿ ಇದು ಸಂಭವಿಸಿತು. (ಅದು ಏಲನ ಮಗನಾದ ಹೋಶೇಯನು ಇಸ್ರೇಲಿನ ರಾಜನಾಗಿ ಆಳುತ್ತಿದ್ದ ಏಳನೆಯ ವರ್ಷದಲ್ಲಿ ಸಂಭವಿಸಿತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇಸ್ರಾಯೇಲಿನ ಅರಸನಾದ ಏಲನ ಮಗ ಹೋಶೇಯನ ಆಳ್ವಿಕೆಯ ಏಳನೆಯ ವರ್ಷ, ಹಿಜ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಅಸ್ಸೀರಿಯದ ಅರಸನಾದ ಶಲ್ಮನೆಸೆರನು ಸಮಾರ್ಯಕ್ಕೆ ವಿರೋಧವಾಗಿ ಬಂದು ಅದಕ್ಕೆ ಮುತ್ತಿಗೆಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:9
6 ತಿಳಿವುಗಳ ಹೋಲಿಕೆ  

ಹೀಗಿರಲು ನಿಮ್ಮ ಕುಲಗಳವರಿಗೆ ವಿರುದ್ಧವಾಗಿ ಯುದ್ಧಘೋಷವು ಮೊಳಗುವುದು. ಕಾಳಗದ ದಿನದಲ್ಲಿ ಶಲ್ಮಾನನು ತಾಯಿ ಮತ್ತು ಮಕ್ಕಳನ್ನು ಒಟ್ಟಿಗೆ ಬಂಡೆಗೆ ಅಪ್ಪಳಿಸಲ್ಪಡುವುದು. ಬೇತ್ ಅರ್ಬೇಲ್ ಪಟ್ಟಣವನ್ನು ಸೂರೆಮಾಡಿದಂತೆ ನಿಮ್ಮ ಎಲ್ಲಾ ಕೋಟೆಗಳು ಸೂರೆಮಾಡಲ್ಪಡುವವು.


ಇಸ್ರಾಯೇಲರ ಅರಸನೂ ಏಲನ ಮಗನಾದ ಹೋಶೇಯನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಯೆಹೂದ ರಾಜನಾದ ಆಹಾಜನ ಮಗ ಹಿಜ್ಕೀಯನು ಆಳ್ವಿಕೆಗೆ ಬಂದನು.


ಇಸ್ರಾಯೇಲು ಚದರಿಹೋದ ಕುರಿ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.


ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು.”


ಆದಕಾರಣ ನಾನು ಸಮಾರ್ಯವನ್ನು ಹೊಲದಲ್ಲಿನ ಹಾಳು ದಿಬ್ಬವನ್ನಾಗಿಯೂ, ದ್ರಾಕ್ಷಿಯ ತೋಟದ ಮಡಿಗಳನ್ನಾಗಿಯೂ ಮಾಡುವೆನು. ಅದರ ಕಲ್ಲುಗಳನ್ನು ತಗ್ಗಿಗೆ ಸುರಿದುಬಿಡುವೆನು. ಅದರ ಅಸ್ತಿವಾರಗಳನ್ನು ಬಯಲನ್ನಾಗಿ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು