Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಹಿಜ್ಕೀಯನು, ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ, ದೇವಾಲಯಕ್ಕೆ ಹೋಗಿ ಅದನ್ನು ಸರ್ವೇಶ್ವರ ಸ್ವಾಮಿಯ ಮುಂದೆ ತೆರೆದಿಟ್ಟು, ಹೀಗೆಂದು ಪ್ರಾರ್ಥನೆ ಮಾಡಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟು ಆತನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಹಿಜ್ಕೀಯನು ಸಂದೇಶಕರಿಂದ ಬಂದ ಪತ್ರಗಳನ್ನು ತೆಗೆದುಕೊಂಡು ಓದಿದನು. ನಂತರ ಹಿಜ್ಕೀಯನು ದೇವಾಲಯದವರೆಗೆ ಹೋಗಿ, ಯೆಹೋವನ ಸನ್ನಿಧಿಯಲ್ಲಿ ಆ ಪತ್ರಗಳನ್ನಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹಿಜ್ಕೀಯನು ಆ ದೂತರ ಕೈಯಿಂದ ಪತ್ರವನ್ನು ತೆಗೆದುಕೊಂಡು ಓದಿದನು, ಅನಂತರ ಯೆಹೋವ ದೇವರ ಆಲಯಕ್ಕೆ ಹೋಗಿ ಅದನ್ನು ಯೆಹೋವ ದೇವರ ಮುಂದೆ ತೆರೆದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:14
10 ತಿಳಿವುಗಳ ಹೋಲಿಕೆ  

ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟನು.


ನಾನು ಸಂಧ್ಯಾ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಸ್ತಬ್ಧನಾಗಿ ಕುಳಿತುಕೊಂಡಿದ್ದೆನು. ಆ ಮೇಲೆ ದೇಹದಂಡನೆಮಾಡುವುದನ್ನು ಬಿಟ್ಟು ಹರಿದ ಬಟ್ಟೆಮೇಲಂಗಿಗಳಿಂದ ಕೂಡಿದವನಾಗಿಯೇ ಮೊಣಕಾಲೂರಿ ನನ್ನ ದೇವರಾದ ಯೆಹೋವನ ಕಡೆಗೆ ಕೈಗಳನ್ನೆತ್ತಿ ಪ್ರಾರ್ಥಿಸಿದ್ದೇನೆಂದರೆ:


ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದಿಂದ ಹೊರಕ್ಕೆ ಬಂದು ಕೈಯನ್ನೆತ್ತಿ ಯೆಹೋವನನ್ನು ಪ್ರಾರ್ಥಿಸಿದನು. ಗುಡುಗೂ, ಆನೆಕಲ್ಲಿನ ಮಳೆಯೂ ನಿಂತುಹೋದವು.


ಸಮುವೇಲನು ಜನರ ಈ ಎಲ್ಲಾ ಮಾತುಗಳನ್ನು ಯೆಹೋವನಿಗೆ ತಿಳಿಸಲಾಗಿ


ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ.


ಹೃದಯವನ್ನೂ, ಅಂತರಿಂದ್ರಿಯವನ್ನೂ ಪರೀಕ್ಷಿಸಿ, ನ್ಯಾಯವಾಗಿ ತೀರ್ಪುಮಾಡುವ ಸೇನಾಧೀಶ್ವರನಾದ ಯೆಹೋವನೇ, ನೀನು ಅವರಿಗೆ ಕೊಡುವ ಪ್ರತಿಫಲವನ್ನು ನಾನು ಕಾಣುವೆನು; ನನ್ನ ವ್ಯಾಜ್ಯವನ್ನು ನಿನಗೇ ಅರಿಕೆಮಾಡಿದ್ದೇನಷ್ಟೆ ಎಂದು ಹೇಳಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು