2 ಅರಸುಗಳು 19:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿಯೂ, ಲೇಖಕನಾದ ಶೆಬ್ನ, ವೃದ್ಧ ಯಾಜಕರು ಇವರನ್ನು ಕರೆಯಿಸಿ ಅವರಿಗೆ ಆಜ್ಞಾಪಿಸಿದ್ದೇನೆಂದರೆ, ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಹಿರಿಯ ಯಾಜಕರು, ಇವರನ್ನು ಕರೆಯಿಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ಬಳಿಗೆ ಹೋಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇದಲ್ಲದೆ ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ವೃದ್ಧಯಾಜಕರು ಇವರನ್ನು ಕರಿಸಿ ಅವರಿಗೆ ಆಜ್ಞಾಪಿಸಿದ್ದೇನಂದರೆ - ನೀವು ಗೋಣೀತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿ ಅವನಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಹಿಜ್ಕೀಯನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ ಮತ್ತು ಹಿರಿಯರಾದ ಯಾಜಕರನ್ನು ಆಮೋಚನ ಮಗನೂ ಪ್ರವಾದಿಯೂ ಆಗಿದ್ದ ಯೆಶಾಯನ ಬಳಿಗೆ ಕಳುಹಿಸಿದನು. ಅವರು ತಮ್ಮ ದುಃಖವನ್ನೂ ಕಳವಳವನ್ನೂ ತೋರ್ಪಡಿಸುವಂತೆ ಗೋಣಿತಟ್ಟನ್ನು ಧರಿಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಇದಲ್ಲದೆ ಅವನು ಅರಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನಾದ ಪ್ರವಾದಿ ಯೆಶಾಯನ ಬಳಿಗೆ ಹೋಗಿರಿ,” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿ |
ಇದು ಯೆಶಾಯನೆಂಬ ಪ್ರವಾದಿಯ ಗ್ರಂಥದಲ್ಲಿ ಬರೆದಿರುವ ಮಾತಿಗೆ ಅನುಸಾರವಾಗಿ ನಡೆಯಿತು. ಆ ಮಾತು ಏನೆಂದರೆ, “‘ಕರ್ತನ ದಾರಿಯನ್ನು ಸಿದ್ಧಮಾಡಿರಿ, ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ. ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವುದು, ಡೊಂಕಾಗಿರುವಂಥದು ನೆಟ್ಟಗಾಗುವುದು, ಕೊರಕಲಾದ ದಾರಿಗಳು ಸಮವಾಗುವವು. ಎಲ್ಲಾ ಮನುಷ್ಯರೂ ದೇವರಿಂದಾಗುವ ರಕ್ಷಣೆಯನ್ನು ಕಾಣುವರು’ ಎಂಬುದಾಗಿ ಮರುಭೂಮಿಯಲ್ಲಿ ಕೂಗುವವನ ಶಬ್ದವದೆ” ಎಂಬುದೇ.