Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ, “ಇಸ್ರಾಯೇಲರ ದೇವರಾದ ಯೆಹೋವನು ಹೀಗೆ ಅನ್ನುತ್ತಾನೆ, ‘ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿದ್ದೇನೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ: ” ಇಸ್ರಯೇಲಿನ ದೇವರಾದ ಸರ್ವೇಶ್ವರಸ್ವಾಮಿಯ ಈ ಮಾತುಗಳನ್ನು ಕೇಳು: ನೀನು ಅಸ್ಸೀರಿಯದ ರಾಜನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳು ಸರ್ವೇಶ್ವರಸ್ವಾಮಿಗೆ ಮುಟ್ಟಿವೆ. ಅವರು ಅವನನ್ನು ಕುರಿತು ಹೀಗೆಂದಿದ್ದಾರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನಂದರೆ - ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿದ್ದೇನೆಂಬದಾಗಿ ಇಸ್ರಾಯೇಲ್‍ದೇವರಾದ ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಈ ಸಂದೇಶವನ್ನು ಕಳುಹಿಸಿದನು: “ಇಸ್ರೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ಅಶ್ಶೂರದ ರಾಜನಾದ ಸನ್ಹೇರೀಬನ ವಿರುದ್ಧವಾಗಿ ನೀವು ನನ್ನಲ್ಲಿ ಪಾರ್ಥಿಸಿರುವಿರಿ. ನಾನು ನಿಮ್ಮ ಪ್ರಾರ್ಥನೆಯನ್ನು ಕೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನೆಂದರೆ: “ಇಸ್ರಾಯೇಲಿನ ಯೆಹೋವ ದೇವರ ಮಾತಿದು: ನೀನು ಅಸ್ಸೀರಿಯದ ಅರಸನಾದ ಸನ್ಹೇರೀಬನನ್ನು ಕುರಿತು ಮಾಡಿದ ಪ್ರಾರ್ಥನೆಯನ್ನು ಕೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:20
17 ತಿಳಿವುಗಳ ಹೋಲಿಕೆ  

“ನೀನು ಹಿಂದಿರುಗಿ ಹೋಗಿ, ನನ್ನ ಜನಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ನಿನ್ನ ಪಿತೃವಾದ ದಾವೀದನ ದೇವರಾದ ಯೆಹೋವನು ಹೇಳಿದ್ದೇನೆಂದರೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.


ಕೊರ್ನೆಲ್ಯನೇ ‘ನಿನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನೆ, ನಿನ್ನ ದಾನಧರ್ಮಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.


‘ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ, ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


ಆಗ ಅವರು ಬೇಡುವುದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು.


ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ; “ಕರ್ತನೇ, ಇದೇನು?” ಎಂದು ಕೇಳಲು, ಆ ದೂತನು ಅವನಿಗೆ; “ನಿನ್ನ ಪ್ರಾರ್ಥನೆಗಳೂ, ನಿನ್ನ ದಾನಧರ್ಮಗಳೂ ದೇವರ ಸನ್ನಿಧಿಗೆ ಜ್ಞಾಪರ್ಥಕವಾಗಿ ಬಂದು ತಲುಪಿದೆ.


ನೀನು ನನಗೆ ಯಾವಾಗಲೂ ಕಿವಿಗೊಡುತ್ತೀ ಎಂದು ನನಗೆ ತಿಳಿದೇ ಇದೆ. ಆದರೂ ನೀನೇ ನನ್ನನ್ನು ಕಳುಹಿಸಿಕೊಟ್ಟಿರುವಿ ಎಂದು ಸುತ್ತಲೂ ನಿಂತಿರುವ ಈ ಜನರು ನಂಬುವಂತೆ ಅವರಿಗೋಸ್ಕರ ಈ ಮಾತುಗಳನ್ನಾಡಿದ್ದೇನೆ” ಎಂದು ಹೇಳಿದನು.


ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದಾಗ ಅವನು ಕತ್ತೆಗೆ ತಡಿಹಾಕಿಸಿ, ಅದರ ಮೇಲೆ ತನ್ನ ಊರಿಗೆ ಹೋದನು. ತನ್ನ ಮನೆಯಲ್ಲಿ ವ್ಯವಸ್ಥೆಮಾಡಿದ ನಂತರ, ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.


ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು, “ಯೆಹೋವನೇ ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು” ಎಂದು ಪ್ರಾರ್ಥಿಸಿದನು.


ಆಗ ನೀವು ಕೂಗಿದರೆ ಯೆಹೋವನು ಉತ್ತರಕೊಡುವನು, ಮೊರೆಯಿಟ್ಟು ಕರೆದರೆ, “ಇಗೋ, ಇದ್ದೇನೆ” ಅನ್ನುವನು. ನೀವು ನಿಮ್ಮ ಮಧ್ಯದೊಳಗಿಂದ ನೊಗವನ್ನು, ಇನ್ನೊಬ್ಬರನ್ನು ದೂಷಣೆಗೆ ಗುರಿಮಾಡಿ ತೋರುವ ಬೆರಳನ್ನು, ಕೆಡುಕಿನ ನುಡಿಯನ್ನು ಬಿಟ್ಟು,


ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ನೀನು ಪ್ರಾರ್ಥಿಸುವಿ, ಆತನು ಲಾಲಿಸುವನು, ಆತನಿಗೆ ಹರಕೆಗಳನ್ನು ಒಪ್ಪಿಸುವಿ.


ಪ್ರಾರ್ಥನೆಯನ್ನು ಕೇಳುವವನೇ, ನರರೆಲ್ಲರೂ ನಿನ್ನ ಬಳಿಗೆ ಬರುವರು.


ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತ್ಯದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.


ನನ್ನ ಪಾಪಗಳನ್ನು ನಿವಾರಿಸಲು ನನ್ನಿಂದಾಗುವುದಿಲ್ಲ. ಆದರೆ ನಮ್ಮ ದೋಷಪರಿಹಾರಕನು ನೀನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು