Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೋವನು ಅವನನ್ನು ಕುರಿತು, “ಕನ್ನಿಕೆಯಾಗಿರುವ ಚೀಯೋನಿನ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯಮಾಡುತ್ತಾಳೆ. ಯೆರೂಸಲೇಮಿನ ಕುಮಾರ್ತೆಯು ನಿನ್ನ ಹಿಂದಿನಿಂದ ತಲೆಯಾಡಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ‘ನಿನ್ನನ್ನು ಪರಿಹಾಸ್ಯಮಾಡಿ ತಿರಸ್ಕರಿಸುತಿಹಳು ಕನ್ಯೆಯಾದ ಸಿಯೋನಿನ ಕುವರಿಯು; ನಿನ್ನ ಹಿಂದೆ ತಲೆಯಾಡಿಸಿ ಮೂದಲಿಸುತಿಹಳು ಜೆರುಸಲೇಮಿನ ಆ ಕುವರಿಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆಹೋವನು ಅವನನ್ನು ಕುರಿತು - ಕನ್ನಿಕೆಯಾಗಿರುವ ಚೀಯೋನ್ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯ ಮಾಡುತ್ತಾಳೆ; ಯೆರೂಸಲೇಮ್ ಕುಮಾರ್ತೆಯು ನಿನ್ನ ಹಿಂದಿನಿಂದ ತಲೆಯಾಡಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಸನ್ಹೇರೀಬನನ್ನು ಕುರಿತು ಯೆಹೋವನು ಹೇಳುವುದೇನೆಂದರೆ: “ಚೀಯೋನ್ ಕುವರಿಯು ನಿನ್ನನ್ನು ತಿರಸ್ಕರಿಸುತ್ತಾಳೆ; ನಿನ್ನನ್ನು ಪರಿಹಾಸ್ಯ ಮಾಡುತ್ತಾಳೆ. ಜೆರುಸಲೇಮಿನ ಕುವರಿಯು ನಿನ್ನ ಹಿಂದಿನಿಂದ ತಲೆಯಾಡಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವನನ್ನು ಕುರಿತು ಯೆಹೋವ ದೇವರು ಹೇಳುವುದೇನೆಂದರೆ: “ ‘ಕನ್ನಿಕೆಯಾದ ಚೀಯೋನ್ ಪುತ್ರಿಯು ನಿನ್ನನ್ನು ತಿರಸ್ಕರಿಸಿ, ನಿನಗೆ ಅಪಹಾಸ್ಯ ಮಾಡುತ್ತಾಳೆ. ಯೆರೂಸಲೇಮಿನ ಪುತ್ರಿಯು ನೀನು ಓಡಿ ಹೋಗುವಾಗ ತನ್ನ ತಲೆಯಾಡಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:21
24 ತಿಳಿವುಗಳ ಹೋಲಿಕೆ  

ಯೆರೂಸಲೇಮ್ ಕನ್ಯೆಯೇ, ನಾನು ನಿನಗೆ ಏನು ಹೇಳಲಿ, ನಿನ್ನನ್ನು ಯಾವುದಕ್ಕೆ ಹೋಲಿಸಲಿ? ಚೀಯೋನ್ ಕನ್ಯೆಯೇ, ನಿನ್ನನ್ನು ಸಂತೈಸಲು ಸಮಾಧಾನಕರ ಮಾತುಗಳನ್ನು ಎಲ್ಲಿಂದ ತರಲಿ? ನಿನ್ನ ನಾಶನವು ಸಾಗರದಷ್ಟು ಅಪಾರ, ನಿನ್ನನ್ನು ಯಾರು ಸ್ವಸ್ಥಮಾಡಬಲ್ಲರು?


ಅಲ್ಲಿ ಹಾದುಹೋಗುತ್ತಿರುವವರು ತಲೆ ಅಲ್ಲಾಡಿಸಿ,


ನೀನು ಅವರಿಗೆ, “ನನ್ನ ಕಣ್ಣೀರು ರಾತ್ರಿ ಹಗಲು ನಿರಂತರ ಸುರಿಯಲಿ; ಏಕೆಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟು ಬಿತ್ತು.


ನಾನೂ ನಿಮ್ಮ ಹಾಗೆ ಮಾತನಾಡಬಲ್ಲೆನು; ನಾನು ನಿಮ್ಮಂತೆ ಇದ್ದಿದ್ದರೆ, ನಾನು ನಿಮ್ಮ ವಿರುದ್ಧವಾಗಿ ಮಾತುಗಳನ್ನು ಹೆಣೆದು ನಿಮ್ಮ ವಿಷಯದಲ್ಲಿ ತಲೆಯಾಡಿಸಬಹುದಾಗಿತ್ತು.


ಹಾದುಹೋಗುವವರೆಲ್ಲರೂ ನಿನ್ನನ್ನು ನೋಡಿ ಚಪ್ಪಾಳೆಹೊಡೆಯುತ್ತಾರೆ, ಯೆರೂಸಲೇಮ್ ನಗರಿಯನ್ನು ಕಂಡು, “ಆಹಾ, ಪರಿಪೂರ್ಣಸುಂದರಿ, ಸಮಸ್ತಲೋಕ ಸಂತೋಷಿಣಿ ಎನ್ನಿಸಿಕೊಳ್ಳುತ್ತಿದ್ದ ಪುರಿಯು ಇದೇ ಏನು? ಛೀ ಛೀ” ಎಂದು ತಲೆಯಾಡಿಸುತ್ತಾರೆ.


ನಾನು ಜನರ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ; ನನ್ನನ್ನು ನೋಡುವವರು ತಲೆಯಾಡಿಸುತ್ತಾರೆ.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಕುರಿಮಂದೆಗೆ ರಕ್ಷಣೆ ಕೊಡುವ ಗೋಪುರವೇ, ಚೀಯೋನ್ ಯುವತಿಯ ಸುಭದ್ರ ಕೋಟೆಯೇ, ನಿನ್ನ ಹಿಂದಿನ ಆಡಳಿತವು ನಿನಗೆ ದೊರೆಯುವುದು. ಯೆರೂಸಲೇಮ್ ಪುರಿಯ ರಾಜ್ಯಾಧಿಕಾರವು ನಿನಗೆ ಲಭಿಸುವುದು.


ಇಸ್ರಾಯೇಲೆಂಬ ಯುವತಿಯು ಬಿದ್ದಿದ್ದಾಳೆ; ಮತ್ತೆ ಏಳುವುದೇ ಇಲ್ಲ; ದಿಕ್ಕಿಲ್ಲದೆ ತನ್ನ ನೆಲದ ಮೇಲೆ ಒರಗಿದ್ದಾಳೆ; ಅವಳನ್ನು ಎತ್ತಲು ಯಾರೂ ಇಲ್ಲ.


ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಕನ್ಯೆಯೇ, ಹರ್ಷಿಸು, ಉಲ್ಲಾಸಗೊಳ್ಳು; ಆದರೆ ರೋಷಪಾನದ ಪಾತ್ರೆಯು ನಿನ್ನ ಪಾಲಿಗೂ ಬರುವುದು; ಅಮಲೇರಿದವಳಾಗಿ ನಿನ್ನನ್ನು ನೀನೇ ಬೆತ್ತಲೆಮಾಡಿಕೊಳ್ಳುವಿ.


ಕರ್ತನು ನನ್ನ ಶೂರರನ್ನೆಲ್ಲಾ ನನ್ನ ಕಣ್ಣೆದುರಿಗೆ ಹೊರಳಾಡಿಸಿದ್ದಾನೆ; ನನ್ನ ಯುವಕರನ್ನು ಸದೆಬಡಿದಿದ್ದಾನೆ. ನನ್ನ ಕೇಡಿಗಾಗಿಯೇ ಮಹೋತ್ಸವವನ್ನು ಏರ್ಪಡಿಸಿದ್ದಾನೆ; ಕರ್ತನು ಯೆಹೂದವೆಂಬ ಕನ್ಯೆಯನ್ನು ತೊಟ್ಟಿಯಲ್ಲಿನ ದ್ರಾಕ್ಷಿಯ ಹಾಗೆ ತುಳಿದಿದ್ದಾನೆ.


ಐಗುಪ್ತದ ಕುಮಾರಿಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಸಂಪಾದಿಸು; ನೀನು ಬಗೆಬಗೆಯ ಔಷಧವನ್ನು ಉಪಯೋಗಿಸುವುದು ಪ್ರಯೋಜನವಿಲ್ಲ; ನಿನಗೆ ಗುಣವಾಗದು.


ಇಸ್ರಾಯೇಲೆಂಬ ಯುವತಿಯೇ, ನಾನು ನಿನ್ನ ಹಾಳುಪ್ರದೇಶಗಳನ್ನು ಪುನಃ ಕಟ್ಟುವೆನು; ಅವು ಕಟ್ಟಡಗಳಾಗುವವು. ನೀನು ಮತ್ತೆ ದಮ್ಮಡಿಗಳಿಂದ ವೈಭವಗೊಂಡು ವಿನೋದಪಡುವವರ ನಾಟ್ಯಗಳಲ್ಲಿ ಸೇರಿಕೊಳ್ಳುವಿ.


ಹೀಗಿರಲು ಯೆಹೋವನು ಹೀಗೆನ್ನುತ್ತಾನೆ, “ಜನಾಂಗಗಳಲ್ಲಿ ವಿಚಾರಿಸಿರಿ, ಇಂಥಾ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಯುವತಿಯು ಕೇವಲ ಅಸಹ್ಯಕಾರ್ಯವನ್ನು ಮಾಡಿದ್ದಾಳೆ.


ಕಸ್ದೀಯರ ಯುವತಿಯೇ (ನಗರವೇ), ಮೌನವಾಗಿ ಕುಳಿತುಕೋ, ಕತ್ತಲೊಳಗೆ ಹೋಗು. ಏಕೆಂದರೆ ನೀನು ಇನ್ನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವುದಿಲ್ಲ.


ಯುವತಿಯೇ, ಬಾಬೆಲ್ ಪುರಿಯೇ, ಕೆಳಕ್ಕಿಳಿದು ಧೂಳಿನಲ್ಲಿ ಕುಳಿತುಕೋ, ಕಸ್ದೀಯರ ಯುವತಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ! ನಿನ್ನನ್ನು ಇನ್ನು ಕೋಮಲೆ ಮತ್ತು ಸುಕುಮಾರಿ ಎಂದು ಕರೆಯುವುದಿಲ್ಲ.


ಆತನು, “ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು, ಅಲ್ಲಿಯೂ ನಿನಗೆ ವಿಶ್ರಾಂತಿ ಇರದು” ಎಂದು ಹೇಳಿದ್ದಾನೆ.


ತಾರ್ಷೀಷ್ ನಗರಿಯೇ, ನೈಲ್ ನದಿಯಂತೆ ನಿನ್ನ ಭೂಮಿಯನ್ನು ಬಿತ್ತು. ತೂರ್ ಪಟ್ಟಣದಲ್ಲಿ ಇನ್ನು ಮುಂದೆ ವ್ಯಾಪಾರ ಸ್ಥಳವು ಇರುವುದಿಲ್ಲ.


ಯೆರೂಸಲೇಮಿನ ನಗರವೊಂದೇ ಉಳಿದು, ದ್ರಾಕ್ಷಿತೋಟದ ಮನೆಯಂತೆಯೂ, ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಲ್ಪಟ್ಟ ಪಟ್ಟಣದ ಹಾಗೆಯೂ ಇದೆ.


ಹಾಳಾಗುವುದಕ್ಕಿರುವ ಬಾಬೆಲ್ ಪಟ್ಟಣವೇ, ನೀನು ನನಗೆ ಮಾಡಿದ್ದಕ್ಕೆ ಮುಯ್ಯಿ ತೀರಿಸುವವನು ಧನ್ಯನು.


ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು; ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು.


ನಮ್ಮನ್ನು ಅನ್ಯದೇಶೀಯರ ಗಾದೆಗೆ ಆಸ್ಪದಮಾಡಿದಿ; ಅವರು ನಮ್ಮನ್ನು ನೋಡಿ ತಲೆಯಾಡಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು