2 ಅರಸುಗಳು 19:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನೀನು ನನಗೆ ವಿರುದ್ಧವಾಗಿ ಉಬ್ಬಿಕೊಂಡಿರುವುದೂ, ಕೋಪವುಳ್ಳವನಾಗಿರುವುದೂ ನನಗೆ ತಿಳಿದು ಬಂದಿದೆ. ಆದುದರಿಂದ ನಿನ್ನ ಮೂಗಿಗೂ, ನಿನ್ನ ಬಾಯಿಗೂ ಕಡಿವಾಣವನ್ನೂ ಹಾಕಿ, ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ನನ್ನ ವಿರುದ್ಧ ನಿನಗಿರುವ ಕ್ರೋಧ, ಗರ್ವ ತಿಳಿದಿದೆ ನನಗೆ ಎಂದೇ ಹಾಕುವೆ ದಾರ ಕಡಿವಾಣ ಮೂಗಿಗೆ, ಬಾಯಿಗೆ; ನೀ ಬಂದ ದಾರಿಯಿಂದಲೇ ಅಟ್ಟುವೆ ನಿನ್ನನ್ನು ಹಿಂದಕ್ಕೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನೀನು ನನಗೆ ವಿರೋಧವಾಗಿ ಉಬ್ಬಿಕೊಂಡಿರುವದೂ ಕುಪಿತನಾಗಿರುವದೂ ನನಗೆ ತಿಳಿದು ಬಂತು. ಆದದರಿಂದ ನಿನಗೆ ಮೂಗುದಾಣವನ್ನೂ ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ನೀನು ನನ್ನ ವಿರುದ್ಧ ದಂಗೆ ಎದ್ದಿರುವೆ. ನಿನ್ನ ಗರ್ವದ ನಿಂದನೆಯನ್ನು ನಾನು ಕೇಳಿರುವೆ. ಆದ್ದರಿಂದ ನಾನು ನಿನ್ನ ಬಾಯಿಗೆ ಕಡಿವಾಣವನ್ನು ಹಾಕಿ ನೀನು ಬಂದ ದಾರಿಯಲ್ಲಿಯೇ ಹಿಂದಿರುಗುವಂತೆ ಮಾಡುತ್ತೇನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ, ನಿನ್ನ ಅಹಂಕಾರವೂ ನನ್ನ ಕಿವಿಗಳಿಗೆ ತಲುಪಿದೆ. ಆದ್ದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ, ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ, ನೀನು ಬಂದ ದಾರಿಯಿಂದಲೇ ನಿನ್ನನ್ನು ಹಿಂದಿರುಗಿಸುವೆನು.’ ಅಧ್ಯಾಯವನ್ನು ನೋಡಿ |