2 ಅರಸುಗಳು 19:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಯೆರೂಸಲೇಮಿನಲ್ಲಿ ಉಳಿದವರು ಹಬ್ಬಿ ಹರಡಿಕೊಳ್ಳುವರು, ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ದಿಹೊಂದುವರು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವೇ ಇದನ್ನು ನೆರವೇರಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಅಳಿದುಳಿದವರು ಜೆರುಸಲೇಮಿನಲ್ಲೇ ಹರಡಿಕೊಳ್ಳುವರು; ಸಿಯೋನ್ ಪರ್ವತದಲ್ಲಿ ಅಭಿವೃದ್ಧಿಯಾಗುವರು. ಸರ್ವೇಶ್ವರಸ್ವಾಮಿಯ ಆಗ್ರಹವೇ ಇದನ್ನು ಸಾಧಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಯೆರೂಸಲೇವಿುನಲ್ಲಿ ಉಳಿದವರು ಹರಡಿಕೊಳ್ಳುವರು; ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ಧಿ ಹೊಂದುವರು; ಯೆಹೋವನ ಆಗ್ರಹವೇ ಇದನ್ನು ನೆರವೇರಿಸುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಜೆರುಸಲೇಮಿನಲ್ಲಿ ಉಳಿದವರು ಹರಡಿಕೊಳ್ಳುವರು; ಚಿಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ಧಿ ಹೊಂದುವರು; ಯೆಹೋವನ ಸ್ವಾಭಿಮಾನವೇ ಇದನ್ನು ನೆರವೇರಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಏಕೆಂದರೆ ಯೆರೂಸಲೇಮಿನಿಂದ ಉಳಿದವರೂ, ಚೀಯೋನ್ ಪರ್ವತದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೇನಾಧೀಶ್ವರ ಯೆಹೋವ ದೇವರ ಆಸಕ್ತಿಯು ಇದನ್ನು ನೆರವೇರಿಸುವುದು. ಅಧ್ಯಾಯವನ್ನು ನೋಡಿ |
ಜೀವಸ್ವರೂಪನಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದನೆಯ ಮಾತುಗಳನ್ನು, ನಿನ್ನ ದೇವರಾದ ಯೆಹೋವನು ಕೇಳಿರುವನು. ನಿನ್ನ ದೇವರಾದ ಯೆಹೋವನು ತಾನು ಹೇಳಿದ ಮಾತುಗಳ ನಿಮಿತ್ತ ಮುಯ್ಯಿತೀರಿಸುವನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗಾಗಿಯಾದರೂ ಆತನನ್ನು ಪ್ರಾರ್ಥಿಸು ಎಂಬುದಾಗಿ ಹಿಜ್ಕೀಯನು ಹೇಳುತ್ತಾನೆ” ಎಂದು ಹೇಳಿರಿ ಅಂದನು.