Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಅದೇ ರಾತ್ರಿಯಲ್ಲಿ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಸೈನಿಕರನ್ನು ಸಂಹರಿಸಿದನು. ಅಶ್ಶೂರ್ಯರು ಬೆಳಿಗ್ಗೆ ಎದ್ದು ನೋಡಿದಾಗ ಪಾಳೆಯದ ತುಂಬಾ ಹೆಣಗಳು ಬಿದ್ದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಅದೇ ರೀತಿಯಲ್ಲಿ ಸರ್ವೇಶ್ವರಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಅಸ್ಸೀರಿಯರು ಬೆಳಿಗ್ಗೆ ಎದ್ದು ನೋಡುವಾಗ ಪಾಳೆಯ ತುಂಬ ಹೆಣಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಅದೇ ರಾತ್ರಿಯಲ್ಲಿ ಯೆಹೋವನ ದೂತನು ಹೊರಟುಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರಮಂದಿ ಸೈನಿಕರನ್ನು ಸಂಹರಿಸಿದನು. ಅಶ್ಶೂರ್ಯರು ಬೆಳಿಗ್ಗೆ ಎದ್ದು ನೋಡುವಲ್ಲಿ ಪಾಳೆಯತುಂಬಾ ಹೆಣಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಆ ರಾತ್ರಿ ಯೆಹೋವನ ದೂತನು ಹೊರಕ್ಕೆ ಹೋಗಿ, ಅಶ್ಶೂರದ ಶಿಬಿರದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಜನರನ್ನು ಕೊಂದುಹಾಕಿದನು. ಜನರು ಬೆಳಗಿನ ಜಾವದಲ್ಲಿ ಮೇಲಕ್ಕೆದ್ದಾಗ ಸತ್ತ ದೇಹಗಳನ್ನು ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಅದೇ ರಾತ್ರಿಯಲ್ಲಿ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:35
24 ತಿಳಿವುಗಳ ಹೋಲಿಕೆ  

ದೇವದೂತನು ಯೆರೂಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಯೆಹೋವನು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕ ದೂತನಿಗೆ, “ಈಗ ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.


ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.


ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು. ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತರ, ಮೂಲಕವಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು” ಅಂದನು.


ಅದೇ ರಾತ್ರಿಯಲ್ಲಿ ಕಸ್ದೀಯ ರಾಜನಾದ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.


ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.


ಆಹಾ, ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಂಬೆಗಳನ್ನು ಕತ್ತರಿಸುವನು. ಅವು ಧಡಮ್ಮನೆ ಬೀಳುವವು. ಉನ್ನತವಾದ ವೃಕ್ಷಗಳು ಕಡಿದು ಕೆಳಗೆ ಬೀಳುವವು. ಎತ್ತರವಾದ ಮರಗಳು ನೆಲದ ಪಾಲಾಗುವವು.


ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.


ದಾವೀದನು ಕಣ್ಣೆತ್ತಿ ನೋಡಿ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನೂ, ಚಾಚಿದ ಕೈಯಲ್ಲಿ ಯೆರೂಸಲೇಮಿಗೆ ವಿರುದ್ಧವಾಗಿ ಹಿರಿದ ಕತ್ತಿಯಿರುವುದನ್ನೂ ಕಂಡಾಗ ಅವನೂ, ಹಿರಿಯರೂ ಗೋಣಿತಟ್ಟನ್ನು ಹೊದ್ದುಕೊಂಡು ಬೋರಲು ಬಿದ್ದರು.


‘ಮೂರು ವರ್ಷಗಳ ವರೆಗೆ ಬರಗಾಲ ಉಂಟಾಗಬೇಕೋ, ಇಲ್ಲವೆ ನೀನು ಮೂರು ತಿಂಗಳು ನಿನ್ನ ಶತ್ರುಗಳ ಚಿತ್ರಹಿಂಸೆಗೆ ಬಲಿಯಾಗುವುದು ಬೇಕೋ, ಇಲ್ಲವೆ ಇಸ್ರಾಯೇಲರ ಸಮಸ್ತ ಪ್ರಾಂತ್ಯಗಳಲ್ಲಿ ಯೆಹೋವನು ಕಳುಹಿಸಿದ ಸಂಹಾರದೂತನಿಂದ ಉಂಟಾಗುವ ಮೂರು ದಿನಗಳ ಘೋರವ್ಯಾಧಿಯ ರೂಪವಾದ ಯೆಹೋವನ ಶಿಕ್ಷೆ ಬೇಕೋ, ಈ ಮೂರರಲ್ಲಿ ಒಂದನ್ನು ಆರಿಸಿಕೊ’ ಎಂಬುದೇ. ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು ಆಲೋಚಿಸಿ ಹೇಳು” ಎಂದು ಹೇಳಿದನು.


ಯೆಹೋವನು ಐಗುಪ್ತ್ಯರನ್ನು ಹತಮಾಡುವುದಕ್ಕೆ ದೇಶದ ನಡುವೆ ಹಾದುಹೋಗುವನು. ಆಗ ನಿಮ್ಮ ನಿಮ್ಮ ಮನೆಬಾಗಿಲಿನ ಮೇಲಣ ಪಟ್ಟಿಯಲ್ಲಿಯೂ, ಎರಡು ನಿಲುವು ಪಟ್ಟಿಗಳಲ್ಲಿಯೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿ ಹೋಗುವನು. ನಿಮ್ಮ ಪ್ರಾಣ ತೆಗೆಯುವುದಕ್ಕೆ ಸಂಹಾರಕನು ನಿಮ್ಮ ಮನೆಗಳಲ್ಲಿ ಬರುವುದೇ ಇಲ್ಲ.


ನಮ್ಮ ಆಯುಷ್ಕಾಲವು ಎಪ್ಪತ್ತು ವರ್ಷ, ಬಲ ಹೆಚ್ಚಿದರೆ ಎಂಭತ್ತು; ಕಷ್ಟಸಂಕಟಗಳೇ ಅದರ ಆಡಂಬರ. ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ.


ಕತ್ತಲೆಯಲ್ಲಿ ಸಂಚರಿಸುವ ವಿಪತ್ತಿಗೂ, ಹಾನಿಕರವಾದ ಮಧ್ಯಾಹ್ನದ ಕೇಡಿಗೂ ಭಯಪಡಬೇಕಾಗಿಲ್ಲ.


ಇಗೋ, ಸಂಜೆಯಲ್ಲಿ ಹೆದರಿ ಉದಯದೊಳಗಾಗಿ ಇಲ್ಲವಾಗುವರು! ನಮ್ಮನ್ನು ಸೂರೆ ಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.


ನಾನು ಕೈಯನ್ನೆತ್ತಿ ನಿನ್ನನ್ನೂ, ನಿನ್ನ ಪ್ರಜೆಗಳನ್ನೂ, ವ್ಯಾಧಿಯಿಂದ ಬಾಧಿಸುವೆನು. ನಿನ್ನನ್ನು ಭೂಮಿಯೊಳಗಿಂದ ನಿರ್ಮೂಲ ಮಾಡುವೆನು.


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೇ ಉಳಿಸಿರುವೆನು.


ಆದುದರಿಂದ, ನಾನು ಅವನ ಮೇಲೆ ಭಯದ ಆತ್ಮವನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಹೋಗಿ ಅಲ್ಲಿ ಕತ್ತಿಯಿಂದ ನಾಶವಾಗುವಂತೆ ಮಾಡುವೆನು’ ಎಂಬುದಾಗಿ ಯೆಹೋವನು ನಿಮ್ಮ ಯಜಮಾನನಿಗೆ ಹೇಳುತ್ತಾನೆ” ಎಂದು ಉತ್ತರಕೊಟ್ಟನು.


ಯೆಹೂದ್ಯರು ಅರಣ್ಯದಲ್ಲಿನ ಬುರುಜಿಗೆ ಬಂದು ಆ ಸಮೂಹವಿದ್ದ ಕಡೆಗೆ ನೋಡಿದಾಗ, ನೆಲದ ಮೇಲೆ ಬಿದ್ದಿರುವ ಹೆಣಗಳ ಹೊರತಾಗಿ, ಜೀವದಿಂದುಳಿದವರು ಯಾರು ಕಾಣಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು