Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆಗ ಅಶ್ಶೂರ್ಯರ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಆದ್ದರಿಂದ ಅಸ್ಸೀರಿಯರ ಅರಸನಾದ ಸನ್ಹೇರೀಬನು ಹಿಂದಿರುಗಿದನು. ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲೆ ವಾಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆಗ ಅವರ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆಗ ಅಶ್ಶೂರದ ರಾಜನಾದ ಸನ್ಹೇರೀಬನು ತಾನು ವಾಸಿಸುತ್ತಿದ್ದ ನಿನವೆಗೆ ಹಿಂದಿರುಗಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಆಗ ಅಸ್ಸೀರಿಯದ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:36
9 ತಿಳಿವುಗಳ ಹೋಲಿಕೆ  

“ನೀನು ಇಲ್ಲಿಂದ ಹೊರಟು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದನ್ನು ಕಟುವಾಗಿ ಖಂಡಿಸಿ ಹೇಳು, ಏಕೆಂದರೆ ಅಲ್ಲಿರುವ ನಿವಾಸಿಗಳ ದುಷ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ” ಎಂದು ಅಪ್ಪಣೆಮಾಡಿದನು.


ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು. ಈ ಪಟ್ಟಣಕ್ಕೆ ಬರುವುದೇ ಇಲ್ಲ ಎಂದು ಹೇಳಿದ್ದಲ್ಲದೆ


ನೀನು ನನಗೆ ವಿರುದ್ಧವಾಗಿ ಉಬ್ಬಿಕೊಂಡಿರುವುದೂ, ಕೋಪವುಳ್ಳವನಾಗಿರುವುದೂ ನನಗೆ ತಿಳಿದು ಬಂದಿದೆ. ಆದುದರಿಂದ ನಿನ್ನ ಮೂಗಿಗೂ, ನಿನ್ನ ಬಾಯಿಗೂ ಕಡಿವಾಣವನ್ನೂ ಹಾಕಿ, ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ.


ಆದುದರಿಂದ, ನಾನು ಅವನ ಮೇಲೆ ಭಯದ ಆತ್ಮವನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಹೋಗಿ ಅಲ್ಲಿ ಕತ್ತಿಯಿಂದ ನಾಶವಾಗುವಂತೆ ಮಾಡುವೆನು’ ಎಂಬುದಾಗಿ ಯೆಹೋವನು ನಿಮ್ಮ ಯಜಮಾನನಿಗೆ ಹೇಳುತ್ತಾನೆ” ಎಂದು ಉತ್ತರಕೊಟ್ಟನು.


ನಿನೆವೆ ಪಟ್ಟಣದವರು ಯೋನನು ಸಾರಿದ ವಾಕ್ಯವನ್ನು ಕೇಳಿ ಮಾನಸಾಂತರಪಟ್ಟರು. ಇಗೋ, ಇಲ್ಲಿ ಯೋನನಿಗಿಂತಲೂ ಹೆಚ್ಚಿನವನಿದ್ದಾನೆ. ನ್ಯಾಯ ವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವರು.


ಪುರಾತನ ಕಾಲದಿಂದ ನಿನವೆ ಪಟ್ಟಣವೂ ಕಟ್ಟೆ ಒಡೆದು ನೀರು ತುಂಬಿದ ಕೆರೆಯಂತೆ ಇದೆ. ಆಹಾ! ಹರಿದು ಓಡುವ ನೀರಿನಂತೆ ಅದರ ನಿವಾಸಿಗಳು ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ ಎಂದು ಅಪ್ಪಣೆಯಾದರೂ ಯಾರೂ ಹಿಂದೆ ನೋಡರು.


ನಿನವೆ ಪಟ್ಟಣದ ಬಗ್ಗೆ ದೈವೋಕ್ತಿ. ಎಲ್ಕೋಷ್ ಊರಿನ ನಹೂಮ ಎಂಬ ಪ್ರವಾದಿಗೆ ಆದ ದೈವದರ್ಶನದ ಗ್ರಂಥ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು