Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ, ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರುದ್ಧವಾಗಿ ಯುದ್ಧಮಾಡುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ, ಅಸ್ಸೀರಿಯದ ಅರಸನು ಲಾಕೀಷನನ್ನು ಬಿಟ್ಟು ಲಿಬ್ನಕ್ಕೆ ಹೋಗಿ ಆ ರಾಜ್ಯದ ವಿರುದ್ಧ ಯುದ್ಧಮಾಡುತ್ತಿರುವುದಾಗಿ ಸಮಾಚಾರ ಪಡೆದನು. ಆದುದರಿಂದ ಅವನು ಅಲ್ಲಿಗೆ ತೆರಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅಶ್ಶೂರದ ರಾಜನು ಲಾಕೀಷನ್ನು ಬಿಟ್ಟುಹೋದನೆಂಬ ಸುದ್ದಿಯನ್ನು ಸೇನಾಧಿಪತಿಯು ಕೇಳಿ ಲಿಬ್ನಕ್ಕೆ ಹೋದಾಗ ರಾಜನು ಲಿಬ್ನದ ವಿರುದ್ಧ ಯುದ್ಧ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹೀಗೆ ಸೈನ್ಯಾಧಿಕಾರಿಯು ಅಸ್ಸೀರಿಯದ ಅರಸನು ಲಾಕೀಷನ್ನು ಬಿಟ್ಟು ಹೊರಟಿದ್ದಾನೆಂದು ಕೇಳಿದಾಗ, ಅವನು ಲಿಬ್ನಕ್ಕೆ ಹೋಗಿ, ಅಲ್ಲಿ ಅರಸನು ಲಿಬ್ನದವರೊಂದಿಗೆ ಯುದ್ಧಮಾಡುತ್ತಿರುವುದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:8
10 ತಿಳಿವುಗಳ ಹೋಲಿಕೆ  

ಆಗ ಯೆಹೂದ್ಯರ ಅರಸನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಶ್ಶೂರದ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ಅಪರಾಧಿ; ನೀನು ನನ್ನನ್ನು ಬಿಟ್ಟು ಹೋಗು. ನೀನು ನನಗೆ ವಿಧಿಸುವಷ್ಟು ದಂಡವನ್ನು ಕೊಡುತ್ತೇನೆ” ಎಂದು ಹೇಳಿ ಕಳುಹಿಸಿದನು. ಅಶ್ಶೂರದ ಅರಸನು ಮುನ್ನೂರು ತಲಾಂತು ಬೆಳ್ಳಿಯನ್ನೂ, ಮೂವತ್ತು ತಲಾಂತು ಬಂಗಾರವನ್ನೂ ಕೊಡಬೇಕೆಂದು ಆಜ್ಞಾಪಿಸಿದನು.


ಯೆಹೋಶುವನು ಜನರೆಲ್ಲರ ಸಹಿತವಾಗಿ ಮಕ್ಕೇದದಿಂದ ಲಿಬ್ನಕ್ಕೆ ಹೋಗಿ ಅಲ್ಲಿಯವರೊಡನೆ ಯುದ್ಧಮಾಡಿದನು.


ಲಾಕೀಷಿನವರೇ ಅಶ್ವಗಳನ್ನು ರಥಕ್ಕೆ ಕಟ್ಟಿರಿ. ನಿಮ್ಮ ಊರೇ ಚೀಯೋನ್ ನಗರಿಯ ಪಾಪಕ್ಕೆ ಮೂಲ, ಹೌದು ಇಸ್ರಾಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಹುಟ್ಟಿಬಂದವು.


ಹೀಗೆ ಎದೋಮ್ಯರು ಯೆಹೂದ್ಯರಿಗೆ ವಿರೋಧವಾಗಿ ತಿರುಗಿ ಬಿದ್ದರು. ಅವರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿರುತ್ತಾರೆ. ಅದೇ ಕಾಲದಲ್ಲಿ ಲಿಬ್ನದವರು ಸ್ವತಂತ್ರರಾದರು.


ಲಿಬ್ನಾ, ಎತೆರ್, ಆಷಾನ್,


ಲಾಕೀಷ್, ಬೊಚ್ಕತ್, ಎಗ್ಲೋನ್,


ಲಿಬ್ನದ ಅರಸನು - 1 ಅದುಲ್ಲಾಮಿನ ಅರಸನು - 1


ಯರ್ಮೂತಿನ ಅರಸನು - 1 ಲಾಕೀಷಿನ ಅರಸನು - 1


ಅಷ್ಟರಲ್ಲಿ ಐಗುಪ್ತದ ಅರಸನೂ ಮತ್ತು ಕೂಷಿನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡಲು ಹೊರಟಿದ್ದಾನೆ ಎಂಬ ಸುದ್ದಿಯನ್ನು ಸನ್ಹೇರೀಬನು ಕೇಳಿದಾಗ, ಯೆಹೂದದ ಅರಸನಾದ ಹಿಜ್ಕೀಯನ ಬಳಿಗೆ ಪುನಃ ದೂತರನ್ನು ಕಳುಹಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು