Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ಎಲೀಯನ ದೇವರಾದ ಯೆಹೋವನೆಲ್ಲಿ?” ಎಂದು ಅಂದುಕೊಂಡು, ಆ ಕಂಬಳಿಯಿಂದ ನೀರನ್ನು ಹೊಡೆಯಲು ಅದು ಎರಡು ಭಾಗವಾಯಿತು. ಎಲೀಷನು ಹೊಳೆಯನ್ನು ದಾಟಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಎಲೀಯನ ದೇವರಾದ ಸರ್ವೇಶ್ವರನೆಲ್ಲಿ?” ಎಂದುಕೊಂಡು ಆ ಕಂಬಳಿಯಿಂದ ನೀರನ್ನು ಹೊಡೆದನು. ಅದು ಇಬ್ಭಾಗ ಆಯಿತು. ಅವನು ದಾಟಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಎಲೀಯನ ದೇವರಾದ ಯೆಹೋವನೆಲ್ಲಿ ಅಂದುಕೊಂಡು ಆ ಕಂಬಳಿಯಿಂದ ನೀರನ್ನು ಹೊಡೆಯಲು ಅದು ಎರಡು ಭಾಗವಾಯಿತು; ಅವನು ದಾಟಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಎಲೀಷನು ನೀರನ್ನು ಹೊಡೆದಾಗ, ನೀರು ಎರಡು ಭಾಗವಾಗಿ ಬಲಗಡೆಯಲ್ಲೂ ಎಡಗಡೆಯಲ್ಲೂ ನಿಂತುಕೊಂಡಿತು! ಎಲೀಷನು ನದಿಯನ್ನು ದಾಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಎಲೀಯನಿಂದ ಬಿದ್ದ ಹೊದಿಕೆಯನ್ನು ತೆಗೆದುಕೊಂಡು ನೀರನ್ನು ಹೊಡೆದು, “ಎಲೀಯನ ದೇವರಾದ ಯೆಹೋವ ದೇವರು ಎಲ್ಲಿ?” ಎಂದನು. ಅವನು ಹಾಗೆ ನೀರನ್ನು ಹೊಡೆದ ತರುವಾಯ, ಅದು ಬಲಗಡೆಗೂ ಎಡಗಡೆಗೂ ವಿಭಾಗವಾದದ್ದರಿಂದ, ಎಲೀಷನು ದಾಟಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:14
16 ತಿಳಿವುಗಳ ಹೋಲಿಕೆ  

“ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ; ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.


ನನ್ನ ವಿರೋಧಿಗಳು, “ನಿನ್ನ ದೇವರು ಎಲ್ಲಿ?” ಎಂದು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ ನನ್ನ ಎಲುಬುಗಳೆಲ್ಲಾ ಮುರಿದ ಹಾಗಿವೆ.


“ಅವರ ದೇವರು ಎಲ್ಲಿದ್ದಾನೆ?” ಎಂದು ಅನ್ಯರು ಏಕೆ ಹೇಳಬೇಕು?


ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು, ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ ನೀವು ನೋಡಿ ಕೇಳುವುದನ್ನು ಸುರಿಸಿದ್ದಾನೆ.


ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.


ಯೆಹೋವನ ಸೇವಕರಾದ ಯಾಜಕರು, ದ್ವಾರಮಂಟಪಕ್ಕೂ, ಯಜ್ಞವೇದಿಯ ನಡುವೆ ಅಳುತ್ತಾ ಹೀಗೆ ಹೇಳಲಿ, “ಯೆಹೋವನೇ, ನಿನ್ನ ಜನರನ್ನು ಕರುಣಿಸು, ಅನ್ಯಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧ್ಯತೆಯನ್ನು ದೂಷಣೆಗೆ ಗುರಿಮಾಡಬೇಡ. ‘ಅವರ ದೇವರು ಎಲ್ಲಿ?’ ಎಂದು ಅವರು ಏಕೆ ನಿಂದಿಸಬೇಕು.”


ನನ್ನ ಮನಸ್ಸು ದೇವರಿಗಾಗಿ, ಚೈತನ್ಯಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ?


ಆಗ ಗಿದ್ಯೋನನು ಅವನಿಗೆ “ಸ್ವಾಮೀ, ಯೆಹೋವನು ನಮ್ಮ ಸಂಗಡ ಇದ್ದರೆ ನಮಗೆ ಇದೆಲ್ಲಾ ಯಾಕೆ ಸಂಭವಿಸಿತು? ನಮ್ಮ ಹಿರಿಯರು, ಯೆಹೋವನು ಅದ್ಭುತಗಳನ್ನು ನಡಿಸಿ ತಮ್ಮನ್ನು ಐಗುಪ್ತದಿಂದ ಬಿಡಿಸಿದನೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಆತನು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾನಲ್ಲಾ” ಅಂದನು.


ಅನಂತರ ಅವನು ಮೇಲಿನಿಂದ ಬಿದ್ದ ಎಲೀಯನ ಕಂಬಳಿಯನ್ನು ತೆಗೆದುಕೊಂಡು ಯೊರ್ದನ್ ನದಿ ತೀರಕ್ಕೆ ಬಂದು,


ಆಗ ಎಲೀಷನು ಗೇಹಜಿಗೆ, “ನೀನು ನಡುಕಟ್ಟಿಕೊಂಡು, ನನ್ನ ಕೋಲನ್ನು ತೆಗೆದುಕೊಂಡು ಹೋಗಿ ಹುಡುಗನ ಮುಖದ ಮೇಲಿಡು, ಹೋಗುವಾಗ ದಾರಿಯಲ್ಲಿ ಯಾರನ್ನೂ ವಂದಿಸಬೇಡ, ಯಾರ ಅವರ ವಂದನೆಯನ್ನು ಸ್ವೀಕರಿಸಬೇಡ” ಎಂದು ಹೇಳಿ ಕಳುಹಿಸಿದನು.


ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲಿ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತುಕೊಂಡಿತು.


‘ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ಕಾಡಾಗಿಯೂ, ಹಳ್ಳಕೊಳ್ಳವಾಗಿಯೂ, ನಿರ್ಜಲವಾಗಿಯೂ, ಘೋರಾಂಧಕಾರವಾಗಿಯೂ, ಯಾರೂ ಹಾದುಹೋಗದೆಯೂ, ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡೆಸಿದ ಯೆಹೋವನು ಎಲ್ಲಿ?’ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು