2 ಅರಸುಗಳು 2:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅನಂತರ ಅವರು ಅವನಿಗೆ, “ನಿನ್ನ ಸೇವಕರಾದ ನಮ್ಮಲ್ಲಿ ಐವತ್ತು ಮಂದಿ ಬಲಿಷ್ಠಜನರಿದ್ದಾರೆ. ನಿನ್ನ ಯಜಮಾನನ್ನು ಹುಡುಕುವುದಕ್ಕೆ ಅವರಿಗೆ ಅಪ್ಪಣೆಯಾಗಲಿ ಯೆಹೋವನ ಆತ್ಮವು ಅವನನ್ನು ಎತ್ತಿಕೊಂಡು ಹೋಗಿ ಒಂದು ಬೆಟ್ಟದ ಮೇಲಾಗಲಿ ತಗ್ಗಿನಲ್ಲಾಗಲಿ ಇಟ್ಟಿರಬಹುದು” ಎಂದು ಹೇಳಿದರು. ಅವನು ಅವರಿಗೆ, “ನೀವು ಅವರನ್ನು ಕಳುಹಿಸಬೇಡಿರಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅನಂತರ ಅವರು ಅವನಿಗೆ, “ನಿಮ್ಮ ಸೇವಕರಾದ ನಮ್ಮಲ್ಲಿ ಐವತ್ತುಮಂದಿ ಬಲಿಷ್ಠ ಜನರಿದ್ದಾರೆ; ನಿಮ್ಮ ಯಜಮಾನರನ್ನು ಹುಡುಕಲು ಹೋಗುವುದಕ್ಕೆ ಅವರಿಗೆ ಅಪ್ಪಣೆಯಾಗಲಿ. ಸರ್ವೇಶ್ವರನ ಆತ್ಮ ಅವರನ್ನು ಎತ್ತಿಕೊಂಡುಹೋಗಿ ಒಂದು ಬೆಟ್ಟದ ಮೇಲಾಗಲಿ, ತಗ್ಗಿನಲ್ಲಾಗಲಿ ಇಟ್ಟಿರಬಹುದು,” ಎಂದು ಹೇಳಿದರು. ಅವನು, “ನೀವು ಕಳುಹಿಸಬೇಡಿ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅನಂತರ ಅವರು ಅವನಿಗೆ - ನಿನ್ನ ಸೇವಕರಾದ ನಮ್ಮಲ್ಲಿ ಐವತ್ತು ಮಂದಿ ಬಲಿಷ್ಠ ಜನರಿದ್ದಾರೆ; ನಿನ್ನ ಯಜಮಾನನನ್ನು ಹುಡುಕಹೋಗುವದಕ್ಕೆ ಅವರಿಗೆ ಅಪ್ಪಣೆಯಾಗಲಿ. ಯೆಹೋವನ ಆತ್ಮವು ಅವನನ್ನು ಎತ್ತಿಕೊಂಡು ಹೋಗಿ ಒಂದು ಬೆಟ್ಟದ ಮೇಲಾಗಲಿ ತಗ್ಗಿನಲ್ಲಾಗಲಿ ಇಟ್ಟಿರಬಹುದು ಎಂದು ಹೇಳಿದರು; ಅವನು ಅವರಿಗೆ - ನೀವು ಕಳುಹಿಸಬೇಡಿರಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅವರು ಅವನಿಗೆ, “ನೋಡು, ನಮ್ಮಲ್ಲಿ ಐವತ್ತು ಮಂದಿ ಬಲಿಷ್ಠ ಜನರಿದ್ದಾರೆ. ನಿನ್ನ ಒಡೆಯನನ್ನು ಹುಡುಕಲು ದಯವಿಟ್ಟು ಅವರಿಗೆ ಅವಕಾಶಕೊಡು. ಯೆಹೋವನ ಆತ್ಮವು ಎಲೀಯನನ್ನು ಮೇಲಕ್ಕೆ ಎತ್ತಿಕೊಂಡು ಹೋಗಿ ಯಾವುದಾದರೂ ಬೆಟ್ಟದ ಮೇಲಾಗಲಿ ಅಥವಾ ಕಣಿವೆಯಲ್ಲಾಗಲಿ ಬೀಳಿಸಿರಬೇಕು” ಎಂದು ಹೇಳಿದರು. ಆದರೆ ಎಲೀಷನು, “ಇಲ್ಲ, ಎಲೀಯನನ್ನು ಹುಡುಕಲು ಜನರನ್ನು ಕಳುಹಿಸಬೇಡಿ!” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇದಲ್ಲದೆ ಅವರು ಅವನಿಗೆ, “ಇಗೋ, ನಿನ್ನ ಸೇವಕರ ಸಂಗಡ ಐವತ್ತು ಮಂದಿ ಬಲಿಷ್ಠರಾದವರಿದ್ದಾರೆ. ಅವರು ಹೋಗಿ ನಿನ್ನ ಯಜಮಾನನನ್ನು ಹುಡುಕಲು ಅಪ್ಪಣೆ ಆಗಲಿ. ಒಂದು ವೇಳೆ ಯೆಹೋವ ದೇವರ ಆತ್ಮರು ಅವನನ್ನು ಎತ್ತಿಕೊಂಡು ಹೋಗಿ ಬೆಟ್ಟದ ಮೇಲಾದರೂ, ತಗ್ಗಿನಲ್ಲಾದರೂ ಇಟ್ಟಿರಬಹುದು,” ಎಂದರು. ಅದಕ್ಕೆ ಅವನು, “ಕಳುಹಿಸಬೇಡಿರಿ,” ಎಂದನು. ಅಧ್ಯಾಯವನ್ನು ನೋಡಿ |