Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆರಿಕೋವಿನ ಜನರು ಎಲೀಷನಿಗೆ, “ನಮ್ಮ ಒಡೆಯನಾದ ನಿನಗೆ ಗೊತ್ತಿರುವಂತೆ, ಈ ಊರು ಕಟ್ಟಲ್ಪಟ್ಟಿರುವ ಸ್ಥಳವು ಒಳ್ಳೆಯದಾಗಿದೆ. ಆದರೆ ನೀರು ಕೆಟ್ಟದ್ದಾಗಿರುವುದರಿಂದ ಬಂಜೆತನ ಉಂಟಾಗಿದೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಜೆರಿಕೋವಿನ ಜನರು ಎಲೀಷ, “ನಮ್ಮ ಒಡೆಯರಾದ ನಿಮಗೆ ಗೊತ್ತಿರುವಂತೆ ಈ ಊರು ಕಟ್ಟಿಸಿರುವ ಸ್ಥಳ ಚೆನ್ನಾಗಿದೆ. ಆದರೆ ನೀರು ಕೆಟ್ಟದ್ದು. ಆದುದರಿಂದ ಗರ್ಭಪಾತ ಹೆಚ್ಚು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆರಿಕೋವಿನ ಜನರು ಎಲೀಷನಿಗೆ - ನಮ್ಮ ಒಡೆಯನಾದ ನಿನಗೆ ಗೊತ್ತಿರುವಂತೆ ಈ ಊರು ಕಟ್ಟಲ್ಪಟ್ಟಿರುವ ಸ್ಥಳವು ಒಳ್ಳೇದಾಗಿದೆ; ಆದರೆ ನೀರು ಕೆಟ್ಟದ್ದಾಗಿರುವದರಿಂದ ಬಂಜೆತನ ಹೆಚ್ಚು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಗರದ ಜನರು ಎಲೀಷನಿಗೆ, “ಸ್ವಾಮೀ, ಈ ನಗರವು ಒಳ್ಳೆಯ ಸ್ಥಳದಲ್ಲಿದೆಯೆಂಬುದನ್ನು ನೀನು ನೋಡುತ್ತಿರುವೆ. ಆದರೆ ನೀರು ತುಂಬಾ ಕೆಟ್ಟಿದೆ. ಆ ಕಾರಣದಿಂದಲೇ ಈ ಭೂಮಿಯಲ್ಲಿ ಬೆಳೆಗಳನ್ನು ಬೆಳೆಯಲಾಗುತ್ತಿಲ್ಲ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಪಟ್ಟಣದ ಮನುಷ್ಯರು ಎಲೀಷನಿಗೆ, “ಈ ಪಟ್ಟಣದ ಸ್ಥಳವು ಒಳ್ಳೆಯದಾಗಿದೆ. ನಮ್ಮ ಯಜಮಾನನೇ, ನೋಡು ನಿನಗೆ ಕಾಣುವುದು. ಆದರೆ ನೋಡು ನೀರು ಕೆಟ್ಟದ್ದು, ಭೂಮಿ ಬಂಜೆಯಾದದ್ದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:19
16 ತಿಳಿವುಗಳ ಹೋಲಿಕೆ  

ನಿಮ್ಮ ದೇಶದಲ್ಲಿ ಗರ್ಭಪಾತವಾಗಲಿ, ಬಂಜೆತನವಾಗಲಿ ಇರುವುದೇ ಇಲ್ಲ. ನಿಮಗೆ ಸಂಪೂರ್ಣವಾದ ಆಯುಷ್ಯವನ್ನು ದಯಪಾಲಿಸುವೆನು.


ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣ ಮಾಡಿದ ಮೇರೆಗೆ ನಿಮಗೆ ಕೊಡುವ ದೇಶದಲ್ಲಿ ಆತನು ನಿಮ್ಮ ಸಂತಾನ, ಪಶು ಮತ್ತು ವ್ಯವಸಾಯಗಳಲ್ಲಿ ಸಮೃದ್ಧಿಯನ್ನು ಉಂಟುಮಾಡುವನು.


ಆಗ ಆರೋನನು ಮೋಶೆಗೆ, “ನನ್ನ ಒಡೆಯನೇ, ನಾವು ವಿವೇಕವಿಲ್ಲದೆ ನಡೆದು ದೋಷಿಗಳಾದೆವು. ಈ ದೋಷದ ಫಲವನ್ನು ನಾವು ಅನುಭವಿಸುವಂತೆ ಮಾಡಬೇಡ ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.


ತರುವಾಯ ಅವರು ಮಾರಾ ಎಂಬ ಸ್ಥಳಕ್ಕೆ ಬಂದರು. ಆದರೆ ಆ ಸ್ಥಳದ ನೀರು ಕಹಿಯಾಗಿದ್ದರಿಂದ ಅವರಿಗೆ ಅದನ್ನು ಕುಡಿಯುವುದಕ್ಕೆ ಆಗದೆ ಹೋಯಿತು. ಆದ್ದರಿಂದಲೇ ಆ ಸ್ಥಳಕ್ಕೆ ಮಾರಾ ಎಂದು ಹೆಸರಾಯಿತು.


ಯೆಹೋವನು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ ‘ನಿನ್ನ ಕೋಲನ್ನು ತೆಗೆದುಕೊಂಡು ಐಗುಪ್ತದೇಶದಲ್ಲಿರುವ ಹೊಳೆ, ಕಾಲುವೆ, ಕೆರೆ, ಕೊಳ ಮೊದಲಾದ ನೀರಿರುವ ಎಲ್ಲಾ ಸ್ಥಳಗಳ ಮೇಲೆ ಅದನ್ನು ಚಾಚು’ ಎಂದು ಹೇಳಬೇಕು. ಅವನು ಚಾಚುವಾಗ ಆ ನೀರೆಲ್ಲಾ ರಕ್ತವಾಗುವುದು. ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆಗಳಲ್ಲಿಯೂ, ಕಲ್ಲಿನ ಪಾತ್ರೆಗಳಲ್ಲಿಯೂ ಇರುವ ನೀರು ರಕ್ತವಾಗುವುದು” ಅಂದನು.


ಅವನ ಕಾಲದಲ್ಲಿ ಬೇತೇಲಿನವನಾದ ಹೀಯೇಲನು ಯೆರಿಕೋ ಪಟ್ಟಣವನ್ನು ಕಟ್ಟಿಸಿದನು. ಅವನು ಅದಕ್ಕೆ ಅಸ್ತಿವಾರ ಹಾಕಿದಾಗ ಹಿರಿಯ ಮಗನಾದ ಅಬೀರಾಮನನ್ನೂ ಬಾಗಿಲುಗಳನ್ನಿರಿಸಿದಾಗ ಕಿರಿಯ ಮಗನಾದ ಸೆಗೂಬನನ್ನೂ ಕಳೆದುಕೊಂಡನು. ಹೀಗೆ ಯೆಹೋವನು ನೂನನ ಮಗನಾದ ಯೆಹೋಶುವನಿಂದ ಹೇಳಿಸಿದ ಮಾತು ನೆರವೇರಿತು.


ಯೆಹೋವನೇ, ಅವರಿಗೆ ತಕ್ಕ ಗತಿಯನ್ನು ವಿಧಿಸು; ಏನು ವಿಧಿಸುತ್ತೀಯೋ? ಅವರಿಗೆ ಗರ್ಭಸ್ರಾವವನ್ನು ಮಾಡು, ಮೊಲೆಯನ್ನು ಬತ್ತಿಸು.


ಓಬದ್ಯನು ಪ್ರಯಾಣಮಾಡುತ್ತಿರುವಾಗ ಎಲೀಯನು ಪಕ್ಕನೆ ಅವನಿಗೆ ಎದುರಾದನು. ಓಬದ್ಯನು ಅವನ ಗುರುತು ಹಿಡಿದು, ಸಾಷ್ಟಾಂಗನಮಸ್ಕಾರ ಮಾಡಿ, “ನೀನು ನನ್ನ ಸ್ವಾಮಿಯಾದ ಎಲೀಯನೋ?” ಎಂದು ಕೇಳಿದನು.


ಅದೇ ಸಮಯದಲ್ಲಿ ಯೆಹೋಶುವನು ಇಸ್ರಾಯೇಲ್ಯರಿಂದ ಪ್ರಮಾಣಮಾಡಿಸಿ ಅವರಿಗೆ “ಈ ಯೆರಿಕೋ ಪಟ್ಟಣವನ್ನು ಕಟ್ಟುವುದಕ್ಕೆ ಕೈ ಹಾಕುವ ಮನುಷ್ಯನು ಯೆಹೋವನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಿರಲಿ. ಅಂಥವನು ಅದಕ್ಕೆ ಅಸ್ತಿವಾರ ಹಾಕುವಾಗ ತನ್ನ ಹಿರಿಯ ಮಗನನ್ನೂ ಬಾಗಿಲುಗಳನ್ನಿಡುವಾಗ ಕಿರಿಯ ಮಗನನ್ನೂ ಕಳೆದುಕೊಳ್ಳಲಿ” ಎಂದು ಹೇಳಿದನು.


ಇದೂ ಇದರಲ್ಲಿರುವುದೆಲ್ಲವೂ ಯೆಹೋವನಿಗೆ ಅರ್ಪಿತವಾದವುಗಳೇ ಎಂದು ತಿಳಿಯಿರಿ. ವೇಶ್ಯೆಯಾದ ರಾಹಾಬಳೂ ಅವಳ ಸಂಗಡ ಮನೆಯಲ್ಲಿರುವವರೆಲ್ಲರೂ ಉಳಿಯಲಿ. ಏಕೆಂದರೆ ನಾವು ಕಳುಹಿಸಿದ ಗೂಢಚಾರರನ್ನು ಅವಳು ಅಡಗಿಸಿಟ್ಟಿದ್ದಳಲ್ಲಾ.


ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ದೇವರ ವಾಕ್ಯವನ್ನು ಸಾರುವುದರಲ್ಲಿಯೂ ಉಪದೇಶಿಸುವುದರಲ್ಲಿಯೂ ಕಷ್ಟಪಡುವವರನ್ನು ಎರಡುಪಟ್ಟು ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.


ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾಮಿಯಾದ ನಿನಗೆ ಗೊತ್ತಾಗಲಿಲ್ಲವೋ? ಅವರಲ್ಲಿ ನೂರು ಜನರನ್ನು ತೆಗೆದುಕೊಂಡು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅನ್ನ ಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ.


ಇನ್ನೂ ಯೆರಿಕೋವಿನಲ್ಲೇ ಇದ್ದ ಎಲೀಷನ ಬಳಿಗೆ ಬಂದರು. ಎಲೀಷನು ಅವರಿಗೆ, ಹೋಗಬೇಡಿರಿ ಎಂದು ನಾನು ಹೇಳಲಿಲ್ಲವೋ? ಎಂದನು.


ಆಗ ಎಲೀಷನು ಅವರಿಗೆ, “ಒಂದು ಹೊಸ ಮಡಿಕೆಯಲ್ಲಿ ಉಪ್ಪು ಹಾಕಿ ಅದನ್ನು ತಂದು ಕೊಡಿರಿ” ಎಂದು ಹೇಳಿದಾಗ, ಅವರು ತಂದುಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು