2 ಅರಸುಗಳು 2:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟು ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ, ಆ ಊರಿನ ಹುಡುಗರು ಹೊರಗೆ ಬಂದು, “ಬೋಳು ಮಂಡೆಯವನೇ ಏರಿ ಬಾ, ಬೋಳು ಮಂಡೆಯವನೇ ಏರಿ ಬಾ” ಎಂದು ಕೂಗಿ ಅವನನ್ನು ಪರಿಹಾಸ್ಯ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟನು. ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ ಆ ಊರಿನ ಹುಡುಗರು ಹೊರಗೆ ಬಂದರು. “ಬೋಳು ತಲೆಯವನೇ, ಏರು; ಬೋಳುತಲೆಯವನೇ ಏರು,” ಎಂದು ಕೂಗಿ ಅವನನ್ನು ಅಣಕಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟು ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ ಆ ಊರಿನ ಹುಡುಗರು ಹೊರಗೆ ಬಂದು - ಬೋಳಮಂಡೆಯವನೇ, ಏರು; ಬೋಳಮಂಡೆಯವನೇ, ಏರು ಎಂದು ಕೂಗಿ ಅವನನ್ನು ಪರಿಹಾಸ್ಯಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಎಲೀಷನು ಆ ನಗರದಿಂದ ಬೇತೇಲಿಗೆ ಹೋದನು. ಎಲೀಷನು ನಗರದಿಂದ ಬೆಟ್ಟದ ಮೇಲಕ್ಕೆ ಹೋಗುತ್ತಿದ್ದಾಗ, ಕೆಲವು ಬಾಲಕರು ನಗರದ ಕಡೆಯಿಂದ ಇಳಿಯುತ್ತಿದ್ದರು. ಅವರು ಎಲೀಷನನ್ನು ಹಾಸ್ಯಮಾಡಿ, “ಮೇಲಕ್ಕೆ ಹೋಗು, ಬೋಳುತಲೆಯವನೇ, ಮೇಲಕ್ಕೆ ಹೋಗು, ಬೋಳುತಲೆಯವನೇ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅವನು ಆ ಸ್ಥಳವನ್ನು ಬಿಟ್ಟು ಬೇತೇಲಿಗೆ ಹೋದನು. ಅವನು ಮಾರ್ಗದಲ್ಲಿ ಏರಿ ಹೋಗುತ್ತಿರುವಾಗ, ಚಿಕ್ಕ ಹುಡುಗರು ಪಟ್ಟಣದಿಂದ ಹೊರಟುಬಂದು ಅವನನ್ನು ಹಾಸ್ಯಮಾಡಿ ಅವನಿಗೆ, “ಬೋಳು ತಲೆಯವನೇ, ಏರಿ ಹೋಗು; ಬೋಳು ತಲೆಯವನೇ, ಏರಿ ಹೋಗು,” ಎಂದರು. ಅಧ್ಯಾಯವನ್ನು ನೋಡಿ |