Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಎಲೀಷನು ಅಲ್ಲಿಂದ ಕರ್ಮೆಲ್ ಬೆಟ್ಟಕ್ಕೆ ಹೋಗಿ ಅನಂತರ ಸಮಾರ್ಯಕ್ಕೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಎಲೀಷನು ಅಲ್ಲಿಂದ ಕಾರ್ಮೆಲ್ ಬೆಟ್ಟಕ್ಕೆ ಹೋಗಿ ಅನಂತರ ಸಮಾರಿಯಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಎಲೀಷನು ಅಲ್ಲಿಂದ ಕರ್ಮೆಲ್‍ಬೆಟ್ಟಕ್ಕೆ ಹೋಗಿ ಅನಂತರ ಸಮಾರ್ಯಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಎಲೀಷನು ಬೇತೇಲನ್ನು ಬಿಟ್ಟು ಕಾರ್ಮೆಲ್ ಬೆಟ್ಟಕ್ಕೆ ಹೋದನು. ಅಲ್ಲಿಂದ ಎಲೀಷನು ಸಮಾರ್ಯಕ್ಕೆ ಹಿಂದಿರುಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವನು ಆ ಸ್ಥಳವನ್ನು ಬಿಟ್ಟು ಕರ್ಮೆಲ್ ಬೆಟ್ಟಕ್ಕೆ ಹೋದನು. ಅಲ್ಲಿಂದ ಸಮಾರ್ಯಕ್ಕೆ ಇಳಿದು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:25
6 ತಿಳಿವುಗಳ ಹೋಲಿಕೆ  

ಹೀಗೆ ಆಕೆಯು ಪ್ರಯಾಣ ಮಾಡಿ ಕರ್ಮೆಲ್ ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದಳು. ದೇವರ ಮನುಷ್ಯನು ಆಕೆಯನ್ನು ದೂರದಿಂದಲೇ ಕಂಡು ತನ್ನ ಸೇವಕನಾದ ಗೇಹಜಿಗೆ, “ಅಗೋ, ಅಲ್ಲಿ ಶೂನೇಮ್ಯಳು ಬರುತ್ತಿದ್ದಾಳೆ”


ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದಾಗ ಎಲೀಯನು ಕರ್ಮೆಲಿನ ಬೆಟ್ಟದ ತುದಿಗೆ ಹೋಗಿ ಅಲ್ಲಿ ನೆಲದ ಮೇಲೆ ಬಿದ್ದುಕೊಂಡು ಮೊಣಕಾಲಿನ ಮೇಲೆ ತಲೆಯನ್ನಿಟ್ಟನು.


ಆದರೆ ಯೆಹೋಷಾಫಾಟನು, “ಯೆಹೋವನ ಸನ್ನಿಧಿಯಲ್ಲಿ ನಮಗೋಸ್ಕರ ವಿಚಾರಿಸಬಲ್ಲವನಾದ ಒಬ್ಬ ಪ್ರವಾದಿಯು ಇಲ್ಲಿ ಇಲ್ಲವೇ?” ಎಂದು ಕೇಳಿದನು. ಆಗ ಇಸ್ರಾಯೇಲರ ಅರಸನ ಸೇವಕರಲ್ಲೊಬ್ಬನು ಅವನಿಗೆ, “ಶಾಫಾಟನ ಮಗನು, ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೆಂಬ ಪ್ರವಾದಿಯು ಇಲ್ಲಿರುತ್ತಾನೆ” ಎಂದು ಉತ್ತರಕೊಟ್ಟನು.


ಅಲಮ್ಮೆಲೆಕ್, ಅಮಾದ್, ಮಿಷಾಲ್ ಇವುಗಳೇ. ಇವರ ದೇಶದ ಮೇರೆಯು ಪಶ್ಚಿಮದಲ್ಲಿ ಕರ್ಮೆಲ್ ಬೆಟ್ಟಕ್ಕೂ, ಶೀಹೋರ್ ಲಿಬ್ನತ್ ಎಂಬ ಹಳ್ಳಕ್ಕೂ ತಾಕಿ ಅಲ್ಲಿಂದ ಪೂರ್ವಕ್ಕೆ ತಿರುಗಿ,


ಆಗ ಅರಸನು ಎಲೀಯನನ್ನು ಕರೆತರುವುದಕ್ಕಾಗಿ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಹೋಗಿ ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿರುವುದನ್ನು ಕಂಡು ಅವನಿಗೆ, “ದೇವರ ಮನುಷ್ಯನೇ ಇಳಿದು ಬಾ ಅರಸನು ನಿನ್ನನ್ನು ಕರೆಯುತ್ತಾನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು