Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಎಲೀಯನು ತಿರುಗಿ ಅವನಿಗೆ, “ನೀನು ಇಲ್ಲೇ ಇರು. ಯೆಹೋವನು ನನಗೆ ಯೊರ್ದನಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಅದಕ್ಕೆ ಎಲೀಷನು, “ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಉತ್ತರ ಕೊಟ್ಟನು. ಅನಂತರ ಅವರಿಬ್ಬರೂ ಹೊರಟು ಯೊರ್ದನ್ ಹೊಳೆಯ ದಡಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಎಲೀಯನು ಮತ್ತೆ ಎಲೀಷನಿಗೆ, “ದಯವಿಟ್ಟು ನೀನು ಇಲ್ಲೆಯಿರು; ಸರ್ವೇಶ್ವರ ನನಗೆ ಜೋರ್ಡನಿಗೆ ಹೋಗಬೇಕೆಂದು ಆಜ್ಞಾಪಿಸಿ ಇದ್ದಾರೆ,” ಎಂದನು. ಆಗ ಅವನು, “ಸರ್ವೇಶ್ವರನ ಆಣೆ, ನಿಮ್ಮ ಜೀವದಾಣೆ, ನಾನು ನಿಮ್ಮನ್ನು ಬಿಟ್ಟಿರಲಾಗದು,” ಎಂದು ಉತ್ತರಕೊಟ್ಟನು. ಆದುದರಿಂದ ಇಬ್ಬರೂ ಹೊರಟು ಜೋರ್ಡನ್ ನದಿಯ ದಡಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಎಲೀಯನು ತಿರಿಗಿ ಅವನಿಗೆ - ದಯವಿಟ್ಟು ನೀನು ಇಲ್ಲೇ ಇರು; ಯೆಹೋವನು ನನಗೆ ಯೊರ್ದನಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ ಎಂದು ಹೇಳಿದನು. ಆಗ ಅವನು - ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟು ಹೋಗುವದಿಲ್ಲ ಎಂದು ಉತ್ತರಕೊಟ್ಟನು; ಆದದರಿಂದ ಇಬ್ಬರೂ ಹೊರಟು ಯೊರ್ದನ್ ಹೊಳೆಯ ದಡಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಎಲೀಯನು ಎಲೀಷನಿಗೆ, “ದಯವಿಟ್ಟು ಇಲ್ಲಿಯೇ ಇರು, ಏಕೆಂದರೆ ಯೆಹೋವನು ಜೋರ್ಡನ್ ನದಿಗೆ ಹೋಗುವಂತೆ ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಎಲೀಷನು, “ಯೆಹೋವನಾಣೆ, ನಿನ್ನಾಣೆ, ನಾನು ನಿನ್ನನ್ನು ಬಿಟ್ಟಿರುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು. ಅವರಿಬ್ಬರೂ ಮುಂದೆ ಸಾಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಎಲೀಯನು ಅವನಿಗೆ, “ನೀನು ದಯಮಾಡಿ ಇಲ್ಲೇ ಇರು. ಯೆಹೋವ ದೇವರು ನನ್ನನ್ನು ಯೊರ್ದನಿಗೆ ಕಳುಹಿಸುತ್ತಿದ್ದಾರೆ,” ಎಂದನು. ಅದಕ್ಕವನು, “ಯೆಹೋವ ದೇವರ ಜೀವದಾಣೆ, ನನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವುದಿಲ್ಲ,” ಎಂದನು. ಹಾಗೆಯೇ ಅವರಿಬ್ಬರೂ ಮುಂದಕ್ಕೆ ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:6
9 ತಿಳಿವುಗಳ ಹೋಲಿಕೆ  

ಆಗ ಎಲೀಯನು ಎಲೀಷನಿಗೆ, “ನೀನು ಇಲ್ಲೇ ಇರು, ಯೆಹೋವನು ನನಗೆ ಬೇತೇಲಿಗೆ ಹೋಗಬೇಕೆಂದು” ಆಜ್ಞಾಪಿಸಿದ್ದಾನೆ ಎನ್ನಲು, ಎಲೀಷನು, “ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಉತ್ತರಕೊಟ್ಟನು. ತರುವಾಯ ಅವರಿಬ್ಬರೂ ಬೇತೇಲಿಗೆ ಹೋದರು.


ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು, ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡಮೀರಿ ಹರಿಯುತ್ತಿದ್ದ ಯೊರ್ದನ್ ನದಿಯ ನೀರು ನಿಂತುಹೋಯಿತು.


ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನ್ ನದಿಯ ಅಂಚಿಗೆ ಬಂದ ಕೂಡಲೆ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು” ಎಂದು ಹೇಳಿದನು.


ಅದಕ್ಕೆ ದಾವೀದನು, “ನಿನ್ನ ಕಣ್ಣುಮುಂದೆ ನನಗೆ ದಯೆ ದೊರಕುತ್ತದೆಂಬುದನ್ನು ನಿನ್ನ ತಂದೆಯು ಬಲ್ಲನು. ಆದ್ದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವುದೆಂದು ಮರೆಮಾಡುತ್ತಾನೆ. ನಿನ್ನ ಜೀವದಾಣೆ, ಯೆಹೋವನ ಆಣೆ, ನನಗೂ ಮರಣಕ್ಕೂ ಒಂದು ಗೇಣು ಅಂತರವಿದೆ” ಎಂದು ಖಂಡಿತವಾಗಿ ಹೇಳಿದನು.


ಆನಂತರ ಅಬ್ರಹಾಮನು ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ, ತನ್ನ ಕೈಯಲ್ಲೇ ಬೆಂಕಿಯನ್ನೂ ಕತ್ತಿಯನ್ನೂ ತೆಗೆದುಕೊಂಡ ನಂತರ ಅವರಿಬ್ಬರೂ ಹೊರಟರು.


ಅಬ್ರಹಾಮನು, “ಮಗನೇ, ಹೋಮಕ್ಕೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುವನು” ಎಂದನು.


ಆಕೆಯು, “ನಿನ್ನನ್ನು ಬಿಟ್ಟು ಹಿಂದಿರುಗಿ ಹೋಗಬೇಕೆಂದು ನನ್ನನ್ನು ಒತ್ತಾಯಪಡಿಸಬೇಡ. ನೀನು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುವೆನು; ನೀನು ವಾಸಿಸುವಲ್ಲೇ ನಾನೂ ವಾಸಿಸುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು.


ಹನ್ನಳು ಏಲಿಗೆ “ಸ್ವಾಮೀ, ನಿನ್ನ ಜೀವದಾಣೆ; ಮೊದಲು ಯೆಹೋವನ ಸನ್ನಿಧಿಯಲ್ಲಿ ಪ್ರಾರ್ಥನೆಮಾಡುತ್ತಾ, ಇಲ್ಲಿ ನಿನ್ನ ಹತ್ತಿರ ನಿಂತಿದ್ದ ಸ್ತ್ರೀಯು ನಾನೇ.


ಆದರೂ ಹುಡುಗನ ತಾಯಿ, “ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟುಹೋಗುವುದಿಲ್ಲ” ಎಂದು ಹೇಳಿದ್ದರಿಂದ ಎಲೀಷನು ಆಕೆಯ ಜೊತೆಯಲ್ಲಿ ಹೊರಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು