Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 20:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಪ್ರವಾದಿಯಾದ ಯೆಶಾಯನು ಯೆಹೋವನಿಗೆ ಮೊರೆಯಿಡಲು ಆತನು ಆಹಾಜನ ಗಡಿಯಾರದ ವೇಳಾನುಸಾರ ಹತ್ತು ಮೆಟ್ಟಲು ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ಪ್ರವಾದಿ ಯೆಶಾಯನು ಸರ್ವೇಶ್ವರನಿಗೆ ಮೊರೆಯಿಡಲು ಅವರು ಆಹಾಜನ ಸೋಪಾನಪಂಕ್ತಿಯಲ್ಲಿ ಹತ್ತು ಮೆಟ್ಟಲು ಮುಂದೆ ಹೋಗಿದ್ದ ನೆರಳನ್ನು ಹಿಂದೆ ಬರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ ಪ್ರವಾದಿಯಾದ ಯೆಶಾಯನು ಯೆಹೋವನಿಗೆ ಮೊರೆಯಿಡಲು ಆತನು ಆಹಾಜನ ಸೋಪಾನಪಂಕ್ತಿಯಲ್ಲಿ ಹತ್ತು ಮೆಟ್ಲು ಮುಂದೆ ಹೋಗಿದ್ದ ನೆರಳನ್ನು ಹಿಂದೆ ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ಯೆಶಾಯನು ಯೆಹೋವನಲ್ಲಿ ಪ್ರಾರ್ಥಿಸಿದನು. ಯೆಹೋವನು ಈಗಾಗಲೇ ಹತ್ತು ಮೆಟ್ಟಲು ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಪ್ರವಾದಿಯಾದ ಯೆಶಾಯನು ಯೆಹೋವ ದೇವರಿಗೆ ಮೊರೆಯಿಟ್ಟದ್ದರಿಂದ, ದೇವರು ಆಹಾಜನ ಮೆಟ್ಟಲುಗಳಲ್ಲಿ ಇಳಿದು ಹೋದ ನೆರಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 20:11
9 ತಿಳಿವುಗಳ ಹೋಲಿಕೆ  

ಇಗೋ, ಸೂರ್ಯನ ಇಳಿತವನ್ನು ಆಹಾಜನ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡುವೆನು’ ಎಂದು ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆಂಬುದಾಗಿ ತಿಳಿಸು” ಎಂದು ಆಜ್ಞಾಪಿಸಿದನು. ಅದರಂತೆ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬಂತು.


ಆ ಕಾಲದಲ್ಲಿ ಹಿಜ್ಕೀಯನು ಮರಣಕರವಾದ ರೋಗಕ್ಕೆ ತುತ್ತಾದನು ಆಗ ಅವನು ಯೆಹೋವನಿಗೆ ಪ್ರಾರ್ಥಿಸಲು ಆತನು ಅದ್ಭುತವಾಗಿ ಸದುತ್ತರವನ್ನು ದಯಪಾಲಿಸಿ ಅವನಿಗೆ ಒಂದು ಗುರುತನ್ನು ಅನುಗ್ರಹಿಸಿದನು.


ಪೇತ್ರನು ಅವರೆಲ್ಲರನ್ನು ಹೊರಕ್ಕೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಶವದ ಕಡೆಗೆ ತಿರುಗಿಕೊಂಡು; “ತಬಿಥಾ, ಎದ್ದೇಳು” ಅಂದನು. ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತುಕೊಂಡಳು.


ಆದರೂ ಅವನ ದೇಶದಲ್ಲಿ ಉಂಟಾದ ಅದ್ಭುತ ವಿಷಯವನ್ನು ವಿಚಾರಿಸುವುದಕ್ಕಾಗಿ ಬಾಬೆಲಿನ ಅರಸನ ರಾಯಭಾರಿಗಳು ಅವನ ಬಳಿಗೆ ಬಂದಾಗ, ದೇವರು ಅವನನ್ನು ಪರೀಕ್ಷಿಸುವುದಕ್ಕೂ ಹಾಗು ಅವನ ಸರ್ವಾಂತರ್ಯವನ್ನು ತಿಳಿದುಕೊಳ್ಳುವುದಕ್ಕೂ ಅವನನ್ನು ಬಿಟ್ಟುಕೊಟ್ಟನು


ಆಗ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ನನಗೆ ಮೊರೆಯಿಡುವುದೇನು? ಮುಂದಕ್ಕೆ ಹೊರಡಬೇಕೆಂದು ಇಸ್ರಾಯೇಲರಿಗೆ ಹೇಳು.


ಅದಕ್ಕೆ ಹಿಜ್ಕೀಯನು, “ನೆರಳು ಮುಂದೆ ಹೋಗುವುದು ಸುಲಭ, ಆದುದರಿಂದ ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು