Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 20:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಬಾಬೆಲಿನ ಅರಸನು ಬಂದು ನಿನ್ನಿಂದ ಹುಟ್ಟುವಂಥ ಮಕ್ಕಳನ್ನು ತೆಗೆದುಕೊಂಡು ಹೋಗಿ, ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು ಎಂದು ಯೆಹೋವನು ಅನ್ನುತ್ತಾನೆ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಬಾಬಿಲೋನಿನ ಅರಸರು ಬಂದು ನೀನು ಪಡೆದ ಮಕ್ಕಳನ್ನು ತೆಗೆದುಕೊಂಡುಹೋಗಿ ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು,’ ಎನ್ನುತ್ತಾರೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಬಾಬೆಲಿನ ಅರಸರು ಬಂದು ನೀನು ಪಡೆದ ಮಕ್ಕಳನ್ನು ತೆಗೆದುಕೊಂಡುಹೋಗಿ ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇವಿುಸಿಕೊಳ್ಳುವರು ಅನ್ನುತ್ತಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಬಾಬಿಲೋನಿನವರು ನಿನ್ನ ಮಕ್ಕಳನ್ನೂ ತೆಗೆದುಕೊಂಡು ಹೋಗುವರು. ನಿನ್ನ ಮಕ್ಕಳು ಬಾಬಿಲೋನಿನ ರಾಜನ ಅರಮನೆಯಲ್ಲಿ ಕಂಚುಕಿಗಳಾಗುತ್ತಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಬಾಬಿಲೋನಿನವರು ನಿನ್ನಿಂದ ಹುಟ್ಟುವಂಥ, ನಿನ್ನ ಮಕ್ಕಳಲ್ಲಿ ಕೆಲವರನ್ನು ತೆಗೆದುಕೊಂಡು ಹೋಗುವರು, ಅವರು ಬಾಬಿಲೋನಿನ ರಾಜನ ಅರಮನೆಯಲ್ಲಿ ಕಂಚುಕಿಗಳಾಗಿರುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 20:18
7 ತಿಳಿವುಗಳ ಹೋಲಿಕೆ  

ಆದುದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.


ಆಗ ಯೆಹೂದದ ಅರಸನಾದ ಯೆಹೋಯಾಖೀನನು ತನ್ನ ತಾಯಿಯ ಪರಿವಾರದವರು, ಸೇನಾಪತಿಗಳು, ಕಂಚುಕಿಗಳು ಇವರೊಡನೆ ಬಾಬೆಲಿನ ಅರಸನ ಬಳಿಗೆ ಹೋದನು. ಬಾಬೆಲಿನ ಅರಸನು ಇವನನ್ನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಸೆರೆಹಿಡಿದನು.


ಅನಂತರ ಆ ರಾಜನು ತನ್ನ ಕಂಚುಕಿಯರಲ್ಲಿ ಮುಖ್ಯಸ್ಥನಾದ ಅಶ್ಪೆನಜನಿಗೆ, “ನೀನು ಇಸ್ರಾಯೇಲರಲ್ಲಿ ಅಂದರೆ ರಾಜವಂಶೀಯರಲ್ಲಿ


ಅನಂತರ ಕಸ್ದೀಯರು ಬಾಬೆಲಿನ ಅರಸನನ್ನು ಹಿಡಿದು ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ತೆಗೆದುಕೊಂಡು ಬಂದು ಅವನಿಗೆ ಶಿಕ್ಷೆಯನ್ನು ವಿಧಿಸಿದರು.


ಈ ಪಟ್ಟಣದ ಎಲ್ಲಾ ಆಸ್ತಿಯನ್ನೂ, ಆದಾಯವನ್ನೂ ಮತ್ತು ಸಂಪತ್ತನ್ನೂ ಯೆಹೂದದ ಅರಸರ ಸಕಲ ನಿಧಿ, ನಿಕ್ಷೇಪಗಳನ್ನೂ ಅವರ ಶತ್ರುಗಳ ಕೈವಶಮಾಡುವೆನು; ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬಿಲೋನಿಗೆ ತೆಗೆದುಕೊಂಡು ಹೋಗುವರು.


ಚೀಯೋನ್ ಯುವತಿಯೇ, ಹೆರುವವಳಂತೆ ವೇದನೆಗೆ ಒಳಗಾಗು, ಯಾತನೆಪಡು. ನೀನೀಗ ಪಟ್ಟಣದಿಂದ ಹೊರಟು ಕಾಡಿನಲ್ಲಿ ವಾಸಿಸುತ್ತಾ ಬಾಬೆಲಿಗೆ ಸೇರುವಿ. ಅಲ್ಲೇ ನಿನಗೆ ಉದ್ಧಾರವಾಗುವುದು. ಅಲ್ಲೇ ಯೆಹೋವನು ಶತ್ರುಗಳ ಕೈಯಿಂದ ನಿನ್ನನ್ನು ಬಿಡಿಸುವನು.


ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀನನನ್ನೂ, ಅವನ ತಾಯಿ, ಹೆಂಡತಿ, ಕಂಚುಕಿಗಳನ್ನೂ ಮತ್ತು ದೇಶದ ಪ್ರಧಾನ ಪುರುಷರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಯಾಗಿ ತೆಗೆದುಕೊಂಡುಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು