Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 20:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಹಿಜ್ಕೀಯನ ಉಳಿದ ಚರಿತ್ರೆಯೂ, ಅವನ ಪರಾಕ್ರಮಕೃತ್ಯಗಳೂ, ಅವನು ಕೆರೆಕಾಲುವೆಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರವೂ ಯೆಹೂದ ರಾಜಕಾಲವೃತ್ತಾಂತ ಪುಸ್ತಕ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಹಿಜ್ಕೀಯನ ಉಳಿದ ಚರಿತ್ರೆ, ಅವನ ಪರಾಕ್ರಮಕಾರ್ಯ ಹಾಗು ಅವನು ಕೆರೆಕಾಲುವೆಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರ, ಇವು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಹಿಜ್ಕೀಯನ ಉಳಿದ ಚರಿತ್ರೆಯೂ ಅವನ ಪರಾಕ್ರಮಕೃತ್ಯಗಳೂ ಅವನು ಕೆರೆಕಾಲುವೆಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರವೂ ಯೆಹೂದರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಹಿಜ್ಕೀಯನು ಮಾಡಿದ ಇತರ ಎಲ್ಲಾ ಮಹಾಕಾರ್ಯಗಳನ್ನೂ ಅವನು ನಗರಕ್ಕೆ ಕೆರೆಯಿಂದ ಕೊಳವೆಗಳ ಮೂಲಕ ನೀರಿನ ವ್ಯವಸ್ಥೆಮಾಡಿದ್ದನ್ನೂ ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಹಿಜ್ಕೀಯನ ಇತರ ಕಾರ್ಯಗಳೂ, ಅವನ ಸಮಸ್ತ ಪರಾಕ್ರಮವೂ ಅವನು ಕೆರೆ ಮತ್ತು ಕಾಲುವೆಗಳನ್ನು ಮಾಡಿಸಿ ಪಟ್ಟಣದಲ್ಲಿ ನೀರನ್ನು ಬರಮಾಡಿದ್ದೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 20:20
18 ತಿಳಿವುಗಳ ಹೋಲಿಕೆ  

ಇವನ ನಂತರ ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯಿಗಳ ಠಾಣ ಇವುಗಳವರೆಗೂ ಜೀರ್ಣೋದ್ಧಾರ ಮಾಡಿದವರು ಬೇತ್ಚೂರಿನ ಒಡೆಯನೂ, ಅಜ್ಬೂಕನ ಮಗನೂ ಆದ ನೆಹೆಮೀಯನು.


ಹಿಜ್ಕೀಯನ ಉಳಿದ ಚರಿತ್ರೆಯೂ ಅವನ ಭಕ್ತಿ ಕಾರ್ಯಗಳೂ ಆಮೋಚನ ಮಗನಾದ, ಪ್ರವಾದಿಯಾದ ಯೆಶಾಯನ ದರ್ಶನಗ್ರಂಥದಲ್ಲಿಯೂ, ಯೆಹೂದ್ಯರ ಮತ್ತು ಇಸ್ರಾಯೇಲರ ರಾಜ ಗ್ರಂಥದಲ್ಲಿಯೂ ಬರೆದಿರುತ್ತವೆ.


ಆಗ ಅನೇಕರು ಸೇರಿ, “ಇಲ್ಲಿಗೆ ಬರುವ ಅಶ್ಶೂರದ ರಾಜರು ಬೇಕಾದಷ್ಟು ನೀರನ್ನು ನೋಡುವುದೇತಕ್ಕೆ?” ಎಂದುಕೊಂಡು ಎಲ್ಲಾ ಒರತೆಗಳನ್ನೂ ದೇಶದ ಮಧ್ಯದಲ್ಲಿ ಹರಿಯುವ ಹೊಳೆಯನ್ನು ಮುಚ್ಚಿಬಿಟ್ಟರು.


ಮೇಲಣ ಗೀಹೋನ್ ಎಂಬ ಬುಗ್ಗೆಗೆ ಅಣೆಕಟ್ಟು ಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪಡುವಣ ತಗ್ಗಿಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲಾ ಕಾರ್ಯಗಳಲ್ಲಿಯೂ ಕೃತಾರ್ಥನಾದನು.


ಆಹಾಜನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಯೆಹೂದ್ಯರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.


ಪೆಕಹ್ಯನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.


ಅಜರ್ಯನ ಉಳಿದ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲದ ವೃತಾಂತ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.


ಯೆಹೋರಾಮನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ, ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.


ಆಸನ ಉಳಿದ ಚರಿತ್ರೆ, ಅವನ ಎಲ್ಲಾ ಪರಾಕ್ರಮಕೃತ್ಯಗಳು, ಅವನು ಪಟ್ಟಣಗಳನ್ನು ಕಟ್ಟಿಸಿದ ಸಂಗತಿಗಳೂ, ಅವನ ಇತರ ಕಾರ್ಯಗಳು ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. ಮುಪ್ಪಿನಲ್ಲಿ ಅವನ ಕಾಲುಗಳಿಗೆ ರೋಗವುಂಟಾಯಿತು.


ಅಬೀಯಾಮನ ಉಳಿದ ಚರಿತ್ರೆಯೂ ಮತ್ತು ಅವನ ಎಲ್ಲಾ ಕೃತ್ಯಗಳೂ ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. ಅಬೀಯಾಮನಿಗೂ ಮತ್ತು ಯಾರೊಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು.


ಯಾರೊಬ್ಬಾಮನ ಇತರ ಕೃತ್ಯಗಳೂ ಅವನ ಯುದ್ಧ ಮತ್ತು ರಾಜ್ಯಭಾರಗಳ ವಿವರವೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ.


ಆದರೆ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತವಾಗಿ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬುವವರನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ಗಟ್ಟಾ ಹತ್ತಿ ಯೆರೂಸಲೇಮಿಗೆ ಬಂದು ಅಗಸರ ಹೊಲದ ಮೇಲೆ ಹೋಗುವ ರಾಜಮಾರ್ಗದ ಹತ್ತಿರ ಇರುವ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯ ಮಾಡಿಕೊಂಡರು.


ಅಲ್ಲಿಂದ ಬುಗ್ಗೆ ಬಾಗಿಲನ್ನು ಹಾದು ಅರಸನ ಕೊಳಕ್ಕೆ ಬಂದೆನು. ನನ್ನ ವಾಹನಪಶುವಿಗೆ ಅಲ್ಲಿಂದ ಮುಂದೆ ಹೋಗುವುದಕ್ಕೆ ಮಾರ್ಗವಿರಲಿಲ್ಲ.


ರೆಹಬ್ಬಾಮನ ಉಳಿದ ಚರಿತ್ರೆಯು ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.


ಯೋಷೀಯನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆಯಲಾಗಿದೆ.


ಅವನು ಪಟ್ಟಣದ ಹೊರಗಿರುವ ಎಲ್ಲಾ ಒರತೆಗಳನ್ನು ಮುಚ್ಚಿಸಬೇಕೆಂದು ಮನಸ್ಸು ಮಾಡಿ ತನ್ನ ಸರದಾರರ ಮತ್ತು ಶೂರರ ಮುಂದೆ ಆ ಪ್ರಸ್ತಾಪವನ್ನೆತ್ತಿ ಅವರ ಸಹಾಯವನ್ನು ಪಡೆದುಕೊಂಡನು.


ಆ ಕಾಲದಲ್ಲಿ ಹಿಜ್ಕೀಯನು ಮರಣಕರವಾದ ರೋಗಕ್ಕೆ ತುತ್ತಾದನು ಆಗ ಅವನು ಯೆಹೋವನಿಗೆ ಪ್ರಾರ್ಥಿಸಲು ಆತನು ಅದ್ಭುತವಾಗಿ ಸದುತ್ತರವನ್ನು ದಯಪಾಲಿಸಿ ಅವನಿಗೆ ಒಂದು ಗುರುತನ್ನು ಅನುಗ್ರಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು