Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 20:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ನೀನು ಹಿಂದಿರುಗಿ ಹೋಗಿ, ನನ್ನ ಜನಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ನಿನ್ನ ಪಿತೃವಾದ ದಾವೀದನ ದೇವರಾದ ಯೆಹೋವನು ಹೇಳಿದ್ದೇನೆಂದರೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ನೀನು ಹಿಂದಿರುಗಿ ಹೋಗಿ ನನ್ನ ಪ್ರಜೆಗಳ ಒಡೆಯನಾಗಿರುವ ಹಿಜ್ಕೀಯನಿಗೆ, “ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀನು ಹಿಂದಿರುಗಿ ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ - ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ನೀನು ಗುಣಹೊಂದಿ ನಾಡದು ನನ್ನ ಆಲಯಕ್ಕೆ ಬರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಹಿಂದಿರುಗಿ ಹೋಗಿ, ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಇದನ್ನು ಹೇಳು: ‘ನಿನ್ನ ಪೂರ್ವಿಕನಾದ ದಾವೀದನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದೆನು; ನಿನ್ನ ಕಣ್ಣೀರನ್ನು ನೋಡಿದೆನು. ಆದ್ದರಿಂದ ನಾನು ನಿನ್ನನ್ನು ಗುಣಪಡಿಸುತ್ತೇನೆ. ಮೂರನೆಯ ದಿನ, ನೀನು ದೇವಾಲಯಕ್ಕೆ ಹೋಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದೇವರು ಅವನಿಗೆ, “ನೀನು ಹಿಂದಿರುಗಿ ಹೋಗಿ ನನ್ನ ಜನರ ನಾಯಕನಾದ ಹಿಜ್ಕೀಯನಿಗೆ, ‘ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೇಳಿದ್ದೇನೆಂದರೆ: ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ಕಂಡಿದ್ದೇನೆ. ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ. ಮೂರನೆಯ ದಿವಸದಲ್ಲಿ ಯೆಹೋವ ದೇವರ ಆಲಯಕ್ಕೆ ಹೋಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 20:5
44 ತಿಳಿವುಗಳ ಹೋಲಿಕೆ  

“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ದೇಶದ ಒಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಾಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರನ್ನು ಕಟಾಕ್ಷಿಸಿದ್ದೇನೆ” ಎಂದು ತಿಳಿಸಿದ್ದನು.


“ನೀನು ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ದಾವೀದನ ಪೂರ್ವಿಕರಾದ ಯೆಹೋವನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ.


ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ. ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ, ಪರದೇಶದವನೂ ಆಗಿದ್ದೇನಲ್ಲಾ.


ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ, “ಇಸ್ರಾಯೇಲರ ದೇವರಾದ ಯೆಹೋವನು ಹೀಗೆ ಅನ್ನುತ್ತಾನೆ, ‘ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿದ್ದೇನೆ.’


ಅಳುತ್ತಾ ಬಿತ್ತುವವರು, ಹಾಡುತ್ತಾ ಕೊಯ್ಯುವರು,


ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ, ಅವರ ಗಾಯಗಳನ್ನು ಕಟ್ಟುತ್ತಾನೆ.


ನಾನು ದೇಶಭ್ರಷ್ಟನಾಗಿ ಅಲೆದಾಡಿದ್ದನ್ನು ನೀನೇ ಬಲ್ಲೆ. ನನ್ನ ಕಣ್ಣೀರು ನಿನ್ನ ಬುದ್ದಲಿಯಲ್ಲಿ ತುಂಬಿದೆಯಲ್ಲಾ; ಅದರ ವಿಷಯವಾಗಿ ನಿನ್ನ ಪುಸ್ತಕದಲ್ಲಿ ಬರೆದದೆಯಲ್ಲಾ.


ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.


ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡು, “ನಿನಗೆ ಸ್ವಸ್ಥವಾಯಿತಲ್ಲಾ; ಇನ್ನು ಮೇಲೆ ಪಾಪ ಮಾಡಬೇಡ, ನಿನಗೆ ಹೆಚ್ಚಿನ ಕೇಡು ಬಂದೀತು” ಎಂದನು.


ಆದರೆ ಆ ದೂತನು ಅವನಿಗೆ, “ಜಕರೀಯನೇ, ಭಯಪಡಬೇಡ; ದೇವರು ನಿನ್ನ ವಿಜ್ಞಾಪನೆ ಕೇಳಿದ್ದಾನೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು.


‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು’ ಎಂದು ದೇವರು ನಿಮಗೆ ನುಡಿದಿದ್ದನ್ನು ನೀವು ಓದಲಿಲ್ಲವೇ. ಆತನು ಸತ್ತವರಿಗೆ ದೇವರಲ್ಲ, ಆದರೆ ಜೀವಿಸುವವರಿಗೆ ದೇವರಾಗಿದ್ದಾನೆ” ಎಂದು ಹೇಳಿದನು.


ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.


ಆ ಆಳು ಮುಂದೆ ಹೋದಾಗ ಸಮುವೇಲನು ತೈಲದ ಕೊಂಬಿನಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವನು ತನ್ನ ಸ್ವತ್ತನ್ನು ಅಳುವುದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ.


ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು.


ಪ್ರಾರ್ಥನೆಯನ್ನು ಕೇಳುವವನೇ, ನರರೆಲ್ಲರೂ ನಿನ್ನ ಬಳಿಗೆ ಬರುವರು.


ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ನಾನು ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ” ಎಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ಹಿಜ್ಕೀಯನು, “ನಾನು ಗುಣಹೊಂದಿ ಯೆಹೋವನ ಆಲಯವನ್ನು ಸೇರುವೆನೆಂಬುದಕ್ಕೆ ಗುರುತೇನು?” ಎಂದು ಕೇಳಿದ್ದನು.


ಹಿಂದಿನ ದಿನಗಳಲ್ಲಿ ಅಂದರೆ, ಸೌಲನ ಆಡಳಿತದಲ್ಲಿ, ಇಸ್ರಾಯೇಲರ ದಳಾಧಿಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನೆ’” ಅಂದರು.


ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ಹೊರತು ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಹಾಗೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ಮತ್ತು ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸಲು ಶಕ್ತನು ಯಾವನೂ ಇಲ್ಲ.


ಅವನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಇನ್ನೂ ಯೌವನಸ್ಥನಾಗಿರುವಾಗಲೇ ತನ್ನ ಪೂರ್ವಿಕನಾದ ದಾವೀದನ ದೇವರನ್ನು ಹುಡುಕುವವನಾದನು. ಹನ್ನೆರಡನೆಯ ವರ್ಷ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿ ಇದ್ದ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನೂ ತೆಗೆದುಹಾಕಿ ದೇಶವನ್ನು ಶುದ್ಧಿಗೊಳಿಸಿದನು.


ಇಗೋ, ದೇವರು ನಾಯಕನಾಗಿ ನಮ್ಮೊಂದಿಗಿದ್ದಾನೆ; ನಿಮಗೆ ವಿರುದ್ಧವಾಗಿ ಅರ್ಭಟದಿಂದ ಊದತಕ್ಕ ತುತ್ತೂರಿಗಳನ್ನು ಹಿಡಿದಿರುವ ಯಾಜಕರೂ ನಮ್ಮೊಂದಿಗಿದ್ದಾರೆ. ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನೊಡನೆ ಯುದ್ಧ ಮಾಡಬೇಡಿರಿ, ನೀವು ಜಯಿಸಲಾರಿರಿ” ಎಂದು ಕೂಗಿ ಹೇಳಿದನು.


ಅದೇನೆಂದರೆ, “ಪ್ರಾರ್ಥನೆಮಾಡಬೇಕೆಂದು ಇಬ್ಬರು ಮನುಷ್ಯರು ದೇವಾಲಯಕ್ಕೆ ಹೋದರು. ಒಬ್ಬನು ಫರಿಸಾಯನು, ಇನ್ನೊಬ್ಬನು ಸುಂಕದವನು.


ಆತನು ಅವನಿಗೆ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ. ನನ್ನ ದೃಷ್ಟಿಯೂ, ಮನಸ್ಸೂ ಪ್ರತಿದಿನವೂ ಅದರ ಮೇಲಿರುವವು.


ಯೆಶಾಯನು ಅರಮನೆಯ ಮಧ್ಯಪ್ರಾಕಾರವನ್ನು ದಾಟುವುದಕ್ಕೆ ಮೊದಲು ಯೆಹೋವನಿಂದ ಅಪ್ಪಣೆಯಾಯಿತು.


ಆತನು ದೂತನನ್ನೋ ಎಂಬಂತೆ ತನ್ನ ವಾಕ್ಯವನ್ನು ಕಳುಹಿಸಿ, ಅವರನ್ನು ಗುಣಪಡಿಸಿದನು; ಸಮಾಧಿಗೆ ಸೇರದಂತೆ ಮಾಡಿದನು.


ಆಗ ಯೆಹೋವನು, “ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಿಶ್ಚಯವಾಗಿ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡುವ ವಿಷಯದಲ್ಲಿ, ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.


ಈಗ ಇಸ್ರಾಯೇಲರ ಕೂಗು ನನಗೆ ಮುಟ್ಟಿದೆ. ಐಗುಪ್ತ್ಯರು ಅವರಿಗೆ ಕೊಡುವ ಉಪದ್ರವವನ್ನು ನಾನು ನೋಡಿದ್ದೇನೆ.


‘ನಾನು ಈ ದೇಶವನ್ನೂ, ನಿವಾಸಿಗಳನ್ನೂ, ಶಾಪವಿಸ್ಮಯಗಳಿಗೆ ಗುರಿಮಾಡುವೆನೆಂಬುವುದನ್ನು ನೀನು ಕೇಳಿದಾಗ, ದುಃಖಪಟ್ಟು ಯೆಹೋವನಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು’


ನನ್ನ ವಿರೋಧಿಗಳೆಲ್ಲರು ನಾಚಿಕೆಯಿಂದ ಕಳವಳಗೊಳ್ಳುವರು; ಅವರು ಪಕ್ಕನೆ ಲಜ್ಜೆಗೊಂಡು ಹಿಂದಿರುಗುವರು.


ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ.


ನಾನು ಆತನಿಗೆ ಮೊರೆಯಿಡುವಾಗಲೇ ನನ್ನ ಶತ್ರುಗಳು ಫಕ್ಕನೆ ಹಿಂದಿರುಗಿ ಓಡುವರು; ದೇವರು ನನ್ನ ಸಂಗಡ ಇರುವುದು ನಿಶ್ಚಯ.


ನನ್ನ ಪಾಪಗಳನ್ನು ನಿವಾರಿಸಲು ನನ್ನಿಂದಾಗುವುದಿಲ್ಲ. ಆದರೆ ನಮ್ಮ ದೋಷಪರಿಹಾರಕನು ನೀನೇ.


ನನ್ನ ಯಾತ್ರಾನುಭವವನ್ನು ನಿನಗೆ ಹೇಳಿಕೊಂಡಾಗ, ನನಗೆ ಸದುತ್ತರವನ್ನು ದಯಪಾಲಿಸಿದಿ, ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು.


ಇದಲ್ಲದೆ ಯೆಹೋವನು ಐಗುಪ್ತವನ್ನು ಹೊಡೆಯುವನು. ಗಾಯಮಾಡಿ ವಾಸಿಮಾಡುವವನಾಗಿಯೇ ಹೊಡೆಯುವನು. ಅವರು ಯೆಹೋವನ ಕಡೆಗೆ ತಿರುಗಿಕೊಳ್ಳುವರು. ಆತನು ಅವರ ವಿಜ್ಞಾಪನೆಯನ್ನು ಲಾಲಿಸಿ ಅವರನ್ನು ಗುಣಪಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು