2 ಅರಸುಗಳು 20:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇದಲ್ಲದೆ, ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಹೆಚ್ಚಿಸಿದ್ದೇನೆ, ನಿನ್ನನ್ನೂ, ಈ ಪಟ್ಟಣವನ್ನೂ ಅಶ್ಶೂರನ ಅರಸನ ಕೈಗೆ ಬೀಳದಂತೆ ತಪ್ಪಿಸುವೆನು. ನನಗಾಗಿಯೂ, ನನ್ನ ಸೇವಕನಾದ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು’ ಎಂಬುದಾಗಿ ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆ ಎಂದು ತಿಳಿಸು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅದಲ್ಲದೆ ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ. ನಿನ್ನನ್ನೂ ಈ ಪಟ್ಟಣವನ್ನೂ ಅಸ್ಸೀರಿಯದ ಅರಸನ ಕೈಗೆ ಬೀಳದಂತೆ ತಪ್ಪಿಸುವೆನು. ನನಗಾಗಿ ಹಾಗು ನನ್ನ ದಾಸ ದಾವೀದನಿಗಾಗಿ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು’ ಎಂಬುದಾಗಿ ನಿನ್ನ ಪೂರ್ವಜ ದಾವೀದನ ದೇವರಾಗಿರುವ ಸರ್ವೇಶ್ವರ ಹೇಳುತ್ತಾರೆ ಎಂದು ತಿಳಿಸು,” ಎಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇದಲ್ಲದೆ ನಿನ್ನ ಆಯುಷ್ಯಕ್ಕೆ ಹದಿನೈದು ವರುಷಗಳನ್ನು ಕೂಡಿಸುತ್ತೇನೆ. ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಗೆ ಬೀಳದಂತೆ ತಪ್ಪಿಸುವೆನು; ನನಗೋಸ್ಕರವಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು ಎಂಬದಾಗಿ ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆ ಎಂದು ತಿಳಿಸು ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಾನು ನಿನ್ನ ಜೀವಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ. ನಾನು ನಿನ್ನನ್ನು ಮತ್ತು ಈ ನಗರವನ್ನು ಅಶ್ಶೂರದ ರಾಜನ ಅಧಿಕಾರದಿಂದ ರಕ್ಷಿಸುತ್ತೇನೆ. ನಾನು ಈ ನಗರವನ್ನು ಸಂರಕ್ಷಿಸುತ್ತೇನೆ. ನಾನು ನನ್ನ ಸೇವಕನಾದ ದಾವೀದನಿಗೆ ವಾಗ್ದಾನ ಮಾಡಿದ್ದಕ್ಕಾಗಿಯೂ ನನಗಾಗಿಯೂ ಇದನ್ನು ಮಾಡುತ್ತೇನೆ’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇದಲ್ಲದೆ ನಾನು ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಹೆಚ್ಚಾಗಿ ಕೂಡಿಸುತ್ತೇನೆ. ನಿನ್ನನ್ನೂ, ಈ ಪಟ್ಟಣವನ್ನೂ ಅಸ್ಸೀರಿಯದ ಅರಸನ ಕೈಯಿಂದ ಬಿಡಿಸುವೆನು. ಈ ಪಟ್ಟಣವನ್ನು ನನ್ನ ನಿಮಿತ್ತವಾಗಿಯೂ, ನನ್ನ ಸೇವಕನಾದ ದಾವೀದನ ನಿಮಿತ್ತವಾಗಿಯೂ ಕಾಪಾಡುವೆನು,’ ಎಂದು ಹೇಳು,” ಎಂದರು. ಅಧ್ಯಾಯವನ್ನು ನೋಡಿ |