Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 21:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಯೆಹೂದ್ಯರ ಅರಸನಾದ ಮನಸ್ಸೆಯು ಮೊದಲು ಇದ್ದ ಅಮೋರಿಯರ ಕೃತ್ಯಗಳಿಗಿಂತಲೂ ಅಸಹ್ಯವಾದ ಕೃತ್ಯಗಳನ್ನು ನಡಿಸಿದ್ದರಿಂದಲೂ, ವಿಗ್ರಹಗಳನ್ನು ಪೂಜಿಸಲು ಯೆಹೂದ್ಯರನ್ನು ಪ್ರೇರೇಪಿಸಿದ್ದರಿಂದಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಯೆಹೂದ್ಯರ ಅರಸನಾದ ಮನಸ್ಸೆಯು, ಹಿಂದೆ ಇದ್ದ ಅಮೋರಿಯರ ಕೃತ್ಯಗಳಿಗಿಂತ ಅಸಹ್ಯವಾದ ಕೃತ್ಯಗಳನ್ನು ನಡೆಸಿದ್ದಾನೆ. ವಿಗ್ರಹಗಳಿಂದ ಯೆಹೂದ್ಯರನ್ನು ಪಾಪಕ್ಕೆ ಪ್ರೇರಿಸಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೂದ್ಯರ ಅರಸನಾದ ಮನಸ್ಸೆಯು ಮುಂಚೆ ಇದ್ದ ಅಮೋರಿಯರ ಕೃತ್ಯಗಳಿಗಿಂತ ಅಸಹ್ಯವಾದ ಕೃತ್ಯಗಳನ್ನು ನಡಿಸಿದದರಿಂದಲೂ ವಿಗ್ರಹಗಳಿಂದ ಯೆಹೂದ್ಯರನ್ನು ಪಾಪಕ್ಕೆ ಪ್ರೇರಿಸಿದದರಿಂದಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಯೆಹೂದದ ರಾಜನಾದ ಮನಸ್ಸೆಯು ತನಗಿಂತಲೂ ಮುಂಚೆ ಇದ್ದ ಅಮೋರಿಯರಿಗಿಂತ ಹೆಚ್ಚು ಅಸಹ್ಯವಾದ ಕೃತ್ಯಗಳನ್ನು ಮಾಡಿದನು. ಮನಸ್ಸೆಯು ತನ್ನ ವಿಗ್ರಹಗಳಿಂದ ಯೆಹೂದವನ್ನು ಪಾಪಕ್ಕೆ ಪ್ರೇರೇಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಯೆಹೂದದ ಅರಸನಾದ ಮನಸ್ಸೆಯು ತನ್ನ ಮುಂದೆ ಇದ್ದ ಅಮೋರಿಯರು ಮಾಡಿದ ಕೆಟ್ಟವುಗಳಿಗಿಂತಲೂ ಅಸಹ್ಯವಾದವುಗಳನ್ನು ಮಾಡಿದ್ದರಿಂದಲೂ, ಯೆಹೂದವನ್ನು ತನ್ನ ವಿಗ್ರಹಗಳಿಂದ ಪಾಪಕ್ಕೆ ಪ್ರೇರೇಪಿಸಿದ್ದರಿಂದಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 21:11
21 ತಿಳಿವುಗಳ ಹೋಲಿಕೆ  

ಯೆಹೋವನು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆಯು ಕೇವಲ ಅಸಹ್ಯವಾಗಿತ್ತು.


ಆದರೆ ಇಸ್ರಾಯೇಲರು ಆತನ ಮಾತನ್ನು ಕೇಳದೆ ಮನಸ್ಸೆಯಿಂದ ಪ್ರೇರೇಪಿತರಾಗಿ ತಮ್ಮ ಮುಂದೆಯೇ ಯೆಹೋವನಿಂದ ಸಂಹೃತವಾದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.


“ಹಿಜ್ಕೀಯನ ಮಗನೂ ಯೆಹೂದದ ಅರಸನೂ ಆದ ಮನಸ್ಸೆಯು ಯೆರೂಸಲೇಮಿನಲ್ಲಿ ನಡೆಸಿದ್ದಕ್ಕೆ ಪ್ರತಿಯಾಗಿ, ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.


ಗಂಡನಿಗೂ, ಮಕ್ಕಳಿಗೂ ಬೇಸರಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು; ಗಂಡನಿಗೂ, ಮಕ್ಕಳಿಗೂ ಬೇಸರಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು.


ಕರ್ತನಾದ ಯೆಹೋವನು ಯೆರೂಸಲೇಮ್ ಎಂಬಾಕೆಗೆ ಈ ಮಾತನ್ನು ಹೇಳಿಕಳುಹಿಸಿದ್ದಾನೆ, ‘ನೀನು ಹುಟ್ಟಿದ್ದು ಕಾನಾನ್ ದೇಶದಲ್ಲಿ, ಅದೇ ನಿನ್ನ ಜನ್ಮಭೂಮಿ, ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.


ತನ್ನ ತಂದೆಯ ಮಾರ್ಗದಲ್ಲಿ ನಡೆದು ಅವನು ಪೂಜಿಸಿದ ವಿಗ್ರಹಗಳನ್ನು ತಾನೂ ಪೂಜಿಸಿ ಅವುಗಳಿಗೆ ಅಡ್ಡಬಿದ್ದನು.


ಮನಸ್ಸೆಯು ಯೆಹೂದ್ಯರನ್ನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಲು ಪ್ರೇರೇಪಿಸಿದ್ದಲ್ಲದೆ ಯೆರೂಸಲೇಮನ್ನೆಲ್ಲಾ ನಿರಪರಾಧಿಗಳ ರಕ್ತದಿಂದ ತುಂಬಿಸಿದನು.


ಅವನು ಯೆಹೋವನು ಇಸ್ರಾಯೇಲರ ರಾಜ್ಯದಿಂದ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ಅವನು ಯಾರೊಬ್ಬಾಮನಂತೆ ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ, ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದುದರಿಂದ ಹೀಗಾಯಿತು.


ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನೂ ಪಾಪಕ್ಕೆ ಪ್ರೇರೇಪಿಸಿ, ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪಬರುವಂತೆ ಮಾಡಿದ್ದರಿಂದ ಹೀಗಾಯಿತು.


ಯೆಹೋವನು ಯಾರೊಬ್ಬಾಮನ ಪಾಪಗಳ ನಿಮಿತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲರು ಮಾಡಿದ ಅಪರಾಧಗಳ ನಿಮಿತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು” ಎಂದು ಆಕೆಗೆ ಹೇಳಿದನು.


ನಿನ್ನ ಸಂತತಿಯ ನಾಲ್ಕನೆಯ ತಲೆಮಾರಿನವರು ಇಲ್ಲಿಗೆ ತಿರುಗಿ ಬರುವರು, ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ” ಎಂದು ಹೇಳಿದನು.


ಇದಲ್ಲದೆ, ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದುದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯವಾದ ಪೂಜಾಕಾರ್ಯಗಳನ್ನು ಅನುಸರಿಸಿ ತನ್ನ ಮಗನನ್ನು ಅಗ್ನಿಗೆ ಬಲಿಕೊಟ್ಟನು.


ಆಗ ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ,


ಅವನು ತನ್ನ ತಂದೆಯಾದ ಮನಸ್ಸೆಯ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಇದಲ್ಲದೆ, ಯೋಷೀಯನು ಸತ್ತವರಲ್ಲಿ ವಿಚಾರಿಸುವವರನ್ನೂ, ಭೂತ ಪ್ರೇತ ಆರಾಧಕರನ್ನೂ, ಯೆರೂಸಲೇಮ್, ಯೆಹೂದ ಪ್ರಾಂತ್ಯ ಇವುಗಳಲ್ಲಿದ್ದ ಎಲ್ಲಾ ತೆರಾಫೀಮ್ ಎಂಬ ಬೊಂಬೆಗಳನ್ನೂ, ಮೂರ್ತಿಗಳನ್ನೂ ಎಲ್ಲಾ ಅಸಹ್ಯ ವಿಗ್ರಹಗಳನ್ನೂ ತೆಗೆದುಹಾಕಿ ಯಾಜಕನಾದ ಹಿಲ್ಕೀಯನಿಗೆ ಯೆಹೋವನ ಆಲಯದಲ್ಲಿ ಸಿಕ್ಕಿದ್ದ ಧರ್ಮೋಪದೇಶಗ್ರಂಥದಲ್ಲಿದ್ದ ಆಜ್ಞೆಗಳನ್ನು ನೆರವೇರಿಸಿದನು.


ದೀನದರಿದ್ರರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,


ಇದಲ್ಲದೆ ಯೆಬೂಸಿಯರೂ, ಅಮೋರಿಯರೂ, ಗಿರ್ಗಾಷಿಯರೂ,


ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಜನಾಂಗಗಳಿಗಿಂತಲೂ, ಸುತ್ತಲಿನ ದೇಶಗಳವರಿಗಿಂತಲೂ ಹೆಚ್ಚು ಅಧರ್ಮವನ್ನು ನಡೆಸಿದೆ; ಅದರ ನಿವಾಸಿಗಳು ನನ್ನ ನಿಯಮಗಳನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು