Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 21:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನನ್ನ ಪ್ರಜೆಗಳಲ್ಲಿ ಉಳಿದಿರುವವರನ್ನು ಶತ್ರುಗಳ ಕೈಗೆ ಒಪ್ಪಿಸುವೆನು. ಅವರ ಎಲ್ಲಾ ಶತ್ರುಗಳು ಬಂದು ಅವರ ಸ್ವತ್ತನ್ನು ಸುಲಿದು ಸೂರೆಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನನ್ನ ಪ್ರಜೆಗಳಲ್ಲಿ ಉಳಿದಿರುವವರನ್ನು ತಳ್ಳಿಬಿಟ್ಟು ಶತ್ರುಗಳ ಕೈಗೆ ಒಪ್ಪಿಸುವೆನು. ಅವರ ಶತ್ರುಗಳೆಲ್ಲಾ ಬಂದು ಅವರನ್ನು ಸುಲಿದು ಸೂರೆಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನನ್ನ ಪ್ರಜೆಗಳಲ್ಲಿ ಉಳಿದಿರುವವರನ್ನು ತಳ್ಳಿಬಿಟ್ಟು ಶತ್ರುಗಳ ಕೈಗೆ ಒಪ್ಪಿಸುವೆನು. ಅವರ ಎಲ್ಲಾ ಶತ್ರುಗಳು ಬಂದು ಅವರನ್ನು ಸುಲಿದು ಸೂರೆಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೂ ಅಲ್ಲಿ ನನ್ನ ಕೆಲವು ಜನರು ಉಳಿದುಕೊಳ್ಳುತ್ತಾರೆ. ನಾನು ಅವರನ್ನು ಬಿಟ್ಟುಬಿಡುತ್ತೇನೆ. ನಾನು ಅವರನ್ನು ಅವರ ಶತ್ರುಗಳಿಗೆ ಒಪ್ಪಿಸುತ್ತೇನೆ. ಅವರ ಶತ್ರುಗಳು ಅವರನ್ನು ಸೆರೆಯಾಳುಗಳನ್ನಾಗಿ ಇಟ್ಟುಕೊಳ್ಳುವರು; ಯುದ್ಧಗಳಲ್ಲಿ ಸೈನಿಕರು ವಶಪಡಿಸಿಕೊಳ್ಳುವ ಬೆಲೆಯುಳ್ಳ ವಸ್ತುಗಳಂತೆ ಅವರಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇದಲ್ಲದೆ ನಾನು ನನ್ನ ಬಾಧ್ಯತೆಗೆ ಉಳಿದಿರುವುದನ್ನು ಬಿಟ್ಟುಬಿಟ್ಟು, ಅವರನ್ನು ಅವರ ಶತ್ರುಗಳ ಕೈಗೆ ಒಪ್ಪಿಸಿಬಿಡುವೆನು. ಅವರು ತಮ್ಮ ಶತ್ರುಗಳಿಗೆ ಕೊಳ್ಳೆಯೂ, ಸೂರೆಯೂ ಆಗಿ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 21:14
35 ತಿಳಿವುಗಳ ಹೋಲಿಕೆ  

ಪ್ರವಾದಿಯಾಗಲಿ ಅಥವಾ ಯಾಜಕನಾಗಲಿ ಈ ಜನರಲ್ಲಿ ಯಾರೇ ಆಗಲಿ “ಯೆಹೋವನು ದಯಪಾಲಿಸಿರುವ ವಾಕ್ಯದ ಆಧಾರವೇನು?” ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆ ಹೇಳು, “ಯೆಹೋವನು ಇಂತೆನ್ನುತ್ತಾನೆ, ನೀವೇ ನನ್ನ ಹೊರೆ, ನಾನು ನಿಮ್ಮನ್ನು ಎಸೆದುಬಿಡುವೆನು.


ಜೀವಸ್ವರೂಪನಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದನೆಯ ಮಾತುಗಳನ್ನು, ನಿನ್ನ ದೇವರಾದ ಯೆಹೋವನು ಕೇಳಿರುವನು. ನಿನ್ನ ದೇವರಾದ ಯೆಹೋವನು ತಾನು ಹೇಳಿದ ಮಾತುಗಳ ನಿಮಿತ್ತ ಮುಯ್ಯಿತೀರಿಸುವನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗಾಗಿಯಾದರೂ ಆತನನ್ನು ಪ್ರಾರ್ಥಿಸು ಎಂಬುದಾಗಿ ಹಿಜ್ಕೀಯನು ಹೇಳುತ್ತಾನೆ” ಎಂದು ಹೇಳಿರಿ ಅಂದನು.


ಇಸ್ರಾಯೇಲೆಂಬ ಯುವತಿಯು ಬಿದ್ದಿದ್ದಾಳೆ; ಮತ್ತೆ ಏಳುವುದೇ ಇಲ್ಲ; ದಿಕ್ಕಿಲ್ಲದೆ ತನ್ನ ನೆಲದ ಮೇಲೆ ಒರಗಿದ್ದಾಳೆ; ಅವಳನ್ನು ಎತ್ತಲು ಯಾರೂ ಇಲ್ಲ.


ನೀನು ನಮ್ಮನ್ನು ಸಂಪೂರ್ಣವಾಗಿ ಮರೆತಿರುವುದೇಕೆ? ಏಕೆ ನಮ್ಮನ್ನು ಇಷ್ಟುಕಾಲ ಕೈಬಿಟ್ಟಿದ್ದೀ?


ವಿರೋಧಿಯು ಕೈಚಾಚಿ ಅವಳ ಭೋಗ್ಯವಸ್ತುಗಳನ್ನೆಲ್ಲಾ ಬಾಚಿಬಿಟ್ಟನು; “ಮ್ಲೇಚ್ಛರು ನಿನ್ನ ಸಭೆಗೆ ಸೇರಬಾರದು” ಎಂದು ನೀನು ಆಜ್ಞಾಪಿಸಿದರೂ ಅಂಥವರೇ ತನ್ನಲ್ಲಿನ ಪವಿತ್ರಾಲಯದೊಳಗೆ ಸೇರುವುದನ್ನು ಆಕೆಯು ಕಾಣಬೇಕಾಯಿತು.


ಅದರ ಲೆಕ್ಕವಿಲ್ಲದ ದ್ರೋಹಗಳಿಗಾಗಿ ಯೆಹೋವನು ಅದನ್ನು ವ್ಯಥೆಗೊಳಿಸಿದ್ದಾನೆ; ಅದರ ವಿರೋಧಿಗಳು ಅದಕ್ಕೆ ಅಧಿಪತಿಗಳಾಗಿದ್ದಾರೆ, ಅದರ ಶತ್ರುಗಳು ನೆಮ್ಮದಿಯಲ್ಲಿದ್ದಾರೆ; ಅದರ ಎಳೆಕೂಸುಗಳು ವಿರೋಧಿಗಳ ವಶದಲ್ಲಿ ಸೆರೆಹೋಗಿವೆ.


ನಾನು ನನ್ನ ಮನೆಯನ್ನು ತೊರೆದು ನನ್ನ ಸ್ವತ್ತನ್ನು ನಿರಾಕರಿಸಿದ್ದೇನೆ; ನನ್ನ ಪ್ರಾಣಪ್ರಿಯಳನ್ನು ಅವಳ ಶತ್ರುಗಳ ಕೈಗೆ ಒಪ್ಪಿಸಿದ್ದೇನೆ.


ನಾನು ಅವನನ್ನು ಭ್ರಷ್ಟಜನರ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆ ಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡುವೆನು.


ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು.


ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು.


ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದ ಯೆಹೋವನ ವಾಕ್ಯದ ಪ್ರಕಾರ ಯೆಹೂದ ರಾಜ್ಯವನ್ನು ಹಾಳುಮಾಡುವುದಕ್ಕೋಸ್ಕರ ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನಿಯರ ಸುಲಿಗೆಯ ಗುಂಪುಗಳನ್ನು ಅಲ್ಲಿಗೆ ಕಳುಹಿಸಿದನು.


ಆಗ ನಾನು ಅವರ ಮೇಲೆ ಬಲುಕೋಪಗೊಂಡು ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ಹಾಗು ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿತ್ತಲ್ಲ’ ಅಂದುಕೊಳ್ಳುವರು.


ಯೆಹೋವನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವನು; ಆಗ ನೀವು ಹಸಿವೆ, ಬಾಯಾರಿಕೆಗಳುಳ್ಳವರಾಗಿ, ಬಟ್ಟೆಯೂ ಮತ್ತು ಏನೂ ಇಲ್ಲದವರಾಗಿ ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ಯೆಹೋವನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು.


ನೀವು ಶತ್ರುಗಳಿಂದ ಸೋಲನ್ನು ಅನುಭವಿಸುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.


ನಾನು ನಿಮ್ಮ ಮೇಲೆ ಉಗ್ರಕೋಪಗೊಳ್ಳುವುದರಿಂದ ನೀವು ನಿಮ್ಮ ಶತ್ರುಗಳ ಮುಂದೆ ಸೋತು ಹೋಗುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಬೆನ್ನಟ್ಟಿ ಬರದಿದ್ದರು ನೀವು ಹೆದರಿ ಓಡುವಿರಿ.


ನೂಲು ಮಟ್ಟಗೋಲು ಇವುಗಳಿಂದಲೋ ಎಂಬಂತೆ ಸಮಾರ್ಯವನ್ನೂ, ಅಹಾಬನ ಮನೆಯನ್ನೂ ನೆಲಸಮಮಾಡಿದಂತೆ, ಯೆರೂಸಲೇಮನ್ನೂ ಅದರಂತೆಯೇ ಮಾಡುವೆನು. ಒಬ್ಬನು ಪಾತ್ರೆಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿ ಬೋರಲು ಹಾಕುವೆನು.


ಅವರು ತಮ್ಮ ಪೂರ್ವಿಕರ ಕಾಲದಲ್ಲಿ ಐಗುಪ್ತದೇಶವನ್ನು ಬಿಟ್ಟುಬಂದರೂ ತಮ್ಮ ಪಾಪಗಳನ್ನು ಬಿಡದೆ ಇಂದಿನವರೆಗೂ ತಮ್ಮ ಪಾಪಗಳಿಂದ ನನ್ನನ್ನು ರೇಗಿಸುತ್ತಾ ಬಂದದ್ದೇ ಇದಕ್ಕೆ ಕಾರಣ” ಎಂದು ಹೇಳಿಸಿದನು.


ಯೆಹೋವನು, “ಇಸ್ರಾಯೇಲರನ್ನು ತೆಗೆದುಹಾಕಿದಂತೆ, ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು, ನಾನು ಆರಿಸಿಕೊಂಡ ಯೆರೂಸಲೇಮ್ ಪಟ್ಟಣವನ್ನೂ ನನ್ನ ನಾಮದ ಮಹಿಮೆಗಾಗಿ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು” ಎಂದು ಹೇಳಿದನು.


ಇಗೋ, ಇವರಿಗೆ ಮೇಲನ್ನಲ್ಲ, ಕೇಡನ್ನೇ ಮಾಡಬೇಕೆಂದು ಎಚ್ಚರಗೊಂಡಿದ್ದೇನೆ; ಐಗುಪ್ತದಲ್ಲಿನ ಎಲ್ಲಾ ಯೆಹೂದ್ಯರು ಖಡ್ಗ, ಕ್ಷಾಮಗಳಿಂದ ನಾಶಹೊಂದುತ್ತಾ ನಿರ್ನಾಮವಾಗುವರು.


ಇಸ್ರಾಯೇಲರು ಈ ಪ್ರಕಾರ ನಡೆದುಕೊಂಡುದರಿಂದ, ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡು, ಯೆಹೂದ ಕುಲದವರ ಹೊರತು ಎಲ್ಲ ಕುಲಗಳವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು.


ಯೆಹೂದ್ಯರೂ ಸಹ ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಇಸ್ರಾಯೇಲರ ಪದ್ಧತಿಯನ್ನು ಅನುಸರಿಸಿದರು.


ಯೆಹೋವನು ಇಸ್ರಾಯೇಲರ ಕುಲಗಳಲ್ಲಿ ಉಳಿದಿದ್ದವರನ್ನೂ ಅಲಕ್ಷ್ಯಮಾಡಿ, ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ ಅವರನ್ನು ಬಾಧಿಸಿದನು.


ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ, ಇಸ್ರಾಯೇಲರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲಿಯೇ ಇದ್ದಾರೆ.


ದೇವರೇ, ನೀನು ನಮ್ಮನ್ನು ಸಂಪೂರ್ಣವಾಗಿ ತಳ್ಳಿಬಿಟ್ಟಿದ್ದೇಕೆ? ನೀನು ಪಾಲಿಸುವ ಹಿಂಡಿನ ಮೇಲೆ ನಿನ್ನ ಕೋಪಾಗ್ನಿಯ ಹೊಗೆ ಏರುವುದೇಕೆ?


ನಾನು ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಯೆರೂಸಲೇಮಿನವರ ಆಲೋಚನೆಯನ್ನು ಮಣ್ಣುಪಾಲುಮಾಡಿ, ಅವರ ಪ್ರಾಣವನ್ನು ಹುಡುಕುವ ಶತ್ರುಗಳ ಖಡ್ಗದಿಂದ ಅವರನ್ನು ಬೀಳಿಸಿ, ಆ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವನ್ನಾಗಿ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು