Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 21:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮನಸ್ಸೆಯು ಯೆಹೂದ್ಯರನ್ನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಲು ಪ್ರೇರೇಪಿಸಿದ್ದಲ್ಲದೆ ಯೆರೂಸಲೇಮನ್ನೆಲ್ಲಾ ನಿರಪರಾಧಿಗಳ ರಕ್ತದಿಂದ ತುಂಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಮನಸ್ಸೆಯು ಯೆಹೂದ್ಯರನ್ನು ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡಲು ಪ್ರೇರಿಸಿದ್ದಲ್ಲದೆ, ನಿರಪರಾಧಿಗಳ ವಧೆಯಿಂದ ಜೆರುಸಲೇಮನ್ನೆಲ್ಲಾ ರಕ್ತಮಯವಾಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮನಸ್ಸೆಯು ಯೆಹೂದ್ಯರನ್ನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡ ಪ್ರೇರಿಸಿದ್ದಲ್ಲದೆ ಯೆರೂಸಲೇಮನ್ನೆಲ್ಲಾ ನಿರಪರಾಧ ರಕ್ತದಿಂದ ತುಂಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಮನಸ್ಸೆಯು ಅನೇಕ ನಿರಪರಾಧಿಗಳನ್ನು ಕೊಂದುಹಾಕಿದನು; ಜೆರುಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೆ ರಕ್ತದಿಂದ ತುಂಬಿಸಿದನು. ಯೆಹೂದವನ್ನು ಪಾಪಕ್ಕೆ ಪ್ರೇರೇಪಿಸಿದ್ದರ ಜೊತೆಗೆ ಅವನ ಈ ಪಾಪಗಳು ಕೂಡಿಕೊಂಡವು. ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯೆಹೂದವು ಮಾಡುವಂತೆ ಮನಸ್ಸೆಯು ಪ್ರೇರೇಪಿಸಿದನು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇದಲ್ಲದೆ ಮನಸ್ಸೆಯು ಯೆಹೋವ ದೇವರ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಪರಾಧದ ರಕ್ತದಿಂದ ತುಂಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 21:16
26 ತಿಳಿವುಗಳ ಹೋಲಿಕೆ  

ಆದರೆ ಯೆಹೂದ್ಯರೂ ಯೆರೂಸಲೇಮಿನವರೂ ಮನಸ್ಸೆಯಿಂದ ಪ್ರೇರಿತರಾಗಿ ಇಸ್ರಾಯೇಲರ ಮುಂದೆಯೇ ಯೆಹೋವನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.


“ಯೆಹೂದ್ಯರ ಅರಸನಾದ ಮನಸ್ಸೆಯು ಮೊದಲು ಇದ್ದ ಅಮೋರಿಯರ ಕೃತ್ಯಗಳಿಗಿಂತಲೂ ಅಸಹ್ಯವಾದ ಕೃತ್ಯಗಳನ್ನು ನಡಿಸಿದ್ದರಿಂದಲೂ, ವಿಗ್ರಹಗಳನ್ನು ಪೂಜಿಸಲು ಯೆಹೂದ್ಯರನ್ನು ಪ್ರೇರೇಪಿಸಿದ್ದರಿಂದಲೂ,


“‘ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇಶವು ಅಪವಿತ್ರವಾಗುವುದಿಲ್ಲ. ರಕ್ತವು ದೇಶವನ್ನು ಅಪವಿತ್ರ ಮಾಡುವುದು. ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.


ಕೆಲವರನ್ನು ಜನರು ಕಲ್ಲೆಸೆದು ಕೊಂದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಕೊಂದರು, ಕೆಲವರನ್ನು ಕತ್ತಿಯಿಂದ ಕೊಂದರು. ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.


ಯೆರೂಸಲೇಮೇ, ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು!


ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು “ಇದು ಜೀವಹತ್ಯೆಗೆ ಕೊಟ್ಟ ಕ್ರಯವಾದುದರಿಂದ ಇದನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಬಾರದು” ಎಂದರು.


“‘ಈ ಜನರು ನನ್ನನ್ನು ತೊರೆದು ತಮಗಾಗಲಿ, ತಮ್ಮ ಪೂರ್ವಿಕರಿಗಾಗಲಿ ಅಥವಾ ಯೆಹೂದದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕುತ್ತಾ, ಈ ಸ್ಥಳವನ್ನು ಅನ್ಯಸ್ಥಾನವನ್ನಾಗಿ ಮಾಡಿದ್ದಾರೆ.


“ಹಿಜ್ಕೀಯನ ಮಗನೂ ಯೆಹೂದದ ಅರಸನೂ ಆದ ಮನಸ್ಸೆಯು ಯೆರೂಸಲೇಮಿನಲ್ಲಿ ನಡೆಸಿದ್ದಕ್ಕೆ ಪ್ರತಿಯಾಗಿ, ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.


ಪರದೇಶಿಯನ್ನಾಗಲಿ, ಅನಾಥನನ್ನಾಗಲಿ ಅಥವಾ ವಿಧವೆಯನ್ನಾಗಲಿ ಹಿಂಸಿಸದೆ, ಈ ಸ್ಥಳದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸದೆ, ನಿಮಗೆ ಹಾನಿಕರವಾದ ಅನ್ಯದೇವತೆಗಳಲ್ಲಿ ಭಕ್ತಿ ಇಡದೆ ಇದ್ದರೆ,


ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವುದನ್ನು ಕಂಡೆನು ಎಂದು ನೀವು ನೆವ ಹೇಳುವಂತಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ ನಿನ್ನನ್ನು ದಂಡಿಸುವೆನು.


ತಾನು ಮಾಡಿಸಿದ ಅಶೇರ ವಿಗ್ರಹಸ್ತಂಭವನ್ನು ಯೆಹೋವನ ಆಲಯದಲ್ಲಿ ಇಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಮತ್ತು ಅವನ ಮಗನಾದ ಸೊಲೊಮೋನನಿಗೂ, “ಈ ಆಲಯದಲ್ಲಿಯೂ, ಇಸ್ರಾಯೇಲರ ಸಕಲ ಗೋತ್ರಗಳಲ್ಲಿಯೂ, ನಾನು ಆರಿಸಿಕೊಂಡ ಯೆರೂಸಲೇಮಿನಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನು


ಆಗ ಮೋಶೆ ಆರೋನನನ್ನು ಕುರಿತು, “ನೀನು ಈ ಜನರಿಂದ ಮಹಾ ಅಪರಾಧವನ್ನು ಮಾಡಿಸಿದಿಯಲ್ಲಾ ಹೀಗೆ ಮಾಡಿಸುವುದಕ್ಕೆ ಇವರು ನಿನಗೇನು ಮಾಡಿದರು?” ಎಂದು ವಿಚಾರಿಸಲು,


ಅವರು ತಮ್ಮ ಪೂರ್ವಿಕರ ಕಾಲದಲ್ಲಿ ಐಗುಪ್ತದೇಶವನ್ನು ಬಿಟ್ಟುಬಂದರೂ ತಮ್ಮ ಪಾಪಗಳನ್ನು ಬಿಡದೆ ಇಂದಿನವರೆಗೂ ತಮ್ಮ ಪಾಪಗಳಿಂದ ನನ್ನನ್ನು ರೇಗಿಸುತ್ತಾ ಬಂದದ್ದೇ ಇದಕ್ಕೆ ಕಾರಣ” ಎಂದು ಹೇಳಿಸಿದನು.


ಈ ಪಟ್ಟಣವು ಕಟ್ಟಿದಂದಿನಿಂದ ಇಂದಿನವರೆಗೂ ನನ್ನ ಕೋಪರೋಷಗಳಿಗೆ ಆಸ್ಪದವಾಗಿದೆ.


ಆತನು ನನಗೆ, “ಇಸ್ರಾಯೇಲ್ ಮತ್ತು ಯೆಹೂದ ವಂಶದವರ ಅಧರ್ಮವು ಅತ್ಯಂತವಾಗಿದೆ; ದೇಶವು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ದೇಶವನ್ನು ಯೆಹೋವನು ಬಿಟ್ಟುಬಿಟ್ಟಿದ್ದಾನೆ, ಯೆಹೋವನು ನೋಡುವುದಿಲ್ಲ’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದಾರೆ.


ನೀನು ಸುರಿಸಿದ ರಕ್ತದಿಂದ ಅಪರಾಧಿಯಾಗಿರುವೆ; ಮಾಡಿಕೊಂಡ ವಿಗ್ರಹಗಳಿಂದ ಅಶುದ್ಧವಾಗಿ, ಶಿಕ್ಷೆಯ ಸಮಯವನ್ನು ಹತ್ತಿರಕ್ಕೆ ತಂದುಕೊಂಡು ದಂಡನೆಯ ಕಾಲಕ್ಕೆ ಬಂದಿರುವೆ. ಆದಕಾರಣ ನಿನ್ನನ್ನು ಜನಾಂಗಗಳ ದೂಷಣೆಗೂ, ಸಕಲ ದೇಶಗಳ ಹಾಸ್ಯಕ್ಕೂ ಗುರಿಮಾಡಿದ್ದೇನೆ.


ಆದರೂ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡಲೇ ಇಲ್ಲ.


ಅವನು ಯೆಹೋವನು ಇಸ್ರಾಯೇಲರ ರಾಜ್ಯದಿಂದ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ಯೆಹೋವನು ಹಗೆಮಾಡುವ ವಿಷಯಗಳು ಆರು ಇವೆ, ಹೌದು, ಏಳು ಸಂಗತಿಗಳು ಆತನಿಗೆ ಅಸಹ್ಯವಾಗಿ ತೋರುತ್ತವೆ.


ಅವು ಯಾವುವೆಂದರೆ, ಹೆಮ್ಮೆಯ ಕಣ್ಣು, ಸುಳ್ಳಿನ ನಾಲಿಗೆ, ನಿರ್ದೋಷಿಗಳ ರಕ್ತವನ್ನು ಸುರಿಸುವ ಕೈ,


“ನರಪುತ್ರನೇ, ರಕ್ತಮಯವಾದ ಆ ಪಟ್ಟಣಕ್ಕೆ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವಾಗಿದೆಯೋ? ಅದರ ದುರಾಚಾರಗಳನ್ನೆಲ್ಲಾ ಅದಕ್ಕೆ ಹೀಗೆ ತಿಳಿಸು,


ನೀತಿಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ, ವ್ಯಭಿಚಾರಿಣಿಯರಿಗೂ, ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತಮಯವಾಗಿದೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು