2 ಅರಸುಗಳು 21:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇದಲ್ಲದೆ, “ಯೆರೂಸಲೇಮಿನಲ್ಲಿ ನನ್ನ ಹೆಸರನ್ನು ಸ್ಥಾಪಿಸುವೆನು” ಎಂದು ಯೆಹೋವನು ಯಾವುದನ್ನು ಕುರಿತು ಹೇಳಿದ್ದನೋ, ಆ ಯೆಹೋವನ ಆಲಯದಲ್ಲಿ ಮನಸ್ಸೆಯು ಯಜ್ಞವೇದಿಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಸರ್ವೇಶ್ವರ ತಮ್ಮ ಹೆಸರನ್ನು ಸ್ಥಾಪಿಸುವುದಕ್ಕಾಗಿ ಆರಿಸಿಕೊಂಡ ಜೆರುಸಲೇಮಿನ ದೇವಾಲಯದ ಎರಡು ಪ್ರಾಕಾರಗಳಲ್ಲಿಯೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕಾಗಿ ಆರಿಸಿಕೊಂಡ ಯೆರೂಸಲೇವಿುನ ದೇವಾಲಯದ ಎರಡು ಪ್ರಾಕಾರಗಳಲ್ಲಿಯೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಮನಸ್ಸೆಯು ಸುಳ್ಳುದೇವತೆಗಳನ್ನು ಗೌರವಿಸಲು ದೇವಾಲಯದಲ್ಲಿ ಯಜ್ಞವೇದಿಕೆಗಳನ್ನು ನಿರ್ಮಿಸಿದನು. (“ನಾನು ನನ್ನ ಹೆಸರನ್ನು ಜೆರುಸಲೇಮಿನಲ್ಲಿ ಸ್ಥಾಪಿಸುತ್ತೇನೆ” ಎಂದು ಯೆಹೋವನು ಮಾತನಾಡುವಾಗ ಹೇಳುತ್ತಿದ್ದ ಸ್ಥಳವು ಇದೇ ಆಗಿತ್ತು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇದಲ್ಲದೆ, “ಯೆರೂಸಲೇಮಿನಲ್ಲಿ ನನ್ನ ಹೆಸರನ್ನು ಸ್ಥಾಪಿಸುವೆನು,” ಎಂದು ಯೆಹೋವ ದೇವರು ಯಾವುದನ್ನು ಕುರಿತು ಹೇಳಿದ್ದರೋ, ಆ ಆಲಯದಲ್ಲಿ ಅವನು ಬಲಿಪೀಠಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿ |